ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕ್ಯಾರಿ ಓವರ್ ವ್ಯವಸ್ಥೆ ಬದಲಾಯಿಸಿದ ವಿಟಿಯು

By Mahesh
|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 08: ವಿದ್ಯಾರ್ಥಿಗಳ ಒತ್ತಡಕ್ಕೆ ಮಣಿದು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಕ್ಯಾರಿ ಓವರ್ ಪದ್ಧತಿಯನ್ನು ಮುಂದುವರಿಸುವ ನಿರ್ಧಾರ ಕೈಗೊಂಡಿದೆ.

ಹೀಗಾಗಿ, ಸಬ್ಜೆಕ್ಟ್ ಬ್ಯಾಕ್ ಇದ್ದರೂ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮುಂದಿನ ತರಗತಿಗಳಿಗೆ ತೆರಳಬಹುದಾಗಿದೆ. ಈ ಮುಂಚೆ ಕ್ಯಾರಿ ಓವರ್ ಪದ್ಧತಿಯನ್ನು ಚಾಯ್ಸ್ ಬೇಸ್ ಕ್ರೆಡಿಟ್ ಸಿಸ್ಟಂ (ಸಿಬಿಸಿಎಸ್) ವಿದ್ಯಾರ್ಥಿಗಳಿಗೆ ಲಭ್ಯವಿರಲಿಲ್ಲ.

VTU changes its carry-over system

ಕ್ಯಾರಿ ಓವರ್ ಪದ್ಧತಿ ರದ್ದಿಗೆ ವಿದ್ಯಾರ್ಥಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಬಹುತೇಕ ವಿದ್ಯಾರ್ಥಿಗಳು ಪ್ರತಿಭಟನೆ ಸಹ ನಡೆಸಿದ್ದರು. ಈ ವಿಷಯ ಉನ್ನತ ಶಿಕ್ಷಣ ಸಚಿವರಿಗೂ ಮುಟ್ಟಿತ್ತು. ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ವಿಟಿಯು ಕುಲಪತಿಗೆ ಸೂಚನೆ ನೀಡಿದ್ದರು.

ವಿ<span class=ಟಿಯುನಿಂದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕನ್ನಡ ಪಾಠ!" title="ವಿಟಿಯುನಿಂದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕನ್ನಡ ಪಾಠ!" />ವಿಟಿಯುನಿಂದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕನ್ನಡ ಪಾಠ!

ಕ್ಯಾರಿ ಓವರ್ ಲಭ್ಯವಿದ್ದೂ ನಾಲ್ಕಕ್ಕಿಂತ ಹೆಚ್ಚಿನ ವಿಷಯಗಳನ್ನು ಉಳಿಸಿಕೊಳ್ಳುವಂತಿಲ್ಲ. ಆದರೆ, ಕೊನೆ ವರ್ಷದ ಪರೀಕ್ಷೆ ತೆಗೆದುಕೊಳ್ಳುವಂಥ ಸಂದರ್ಭದಲ್ಲಿ ಮೊದಲ ವರ್ಷದ ಪರೀಕ್ಷೆಗಳನ್ನು ಕ್ಲಿಯರ್ ಮಾಡಿಕೊಂಡಿರಬೇಕು.

ಈ ಹೊಸ ನಿರ್ಣಯದಿಂದಾಗಿ ಅಂದಾಜು 7 ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಈ ವಿದ್ಯಾರ್ಥಿಗಳು ಮೊದಲ ವರ್ಷದಲ್ಲಿ ಅನುತ್ತೀರ್ಣರಾಗಿರುವ ಕಾರಣ ಅವರು ಮೂರನೇ ವರ್ಷಕ್ಕೆ ಪ್ರವೇಶ ಪಡೆದುಕೊಳ್ಳಲು ಅನರ್ಹರಾಗಲಿದ್ದಾರೆ.

English summary
Bowing to pressure from student groups, the Visvesvaraya Technological University (VTU) has changes its carry-over system for the Choice-Based Credit System (CBCS) students. Engineering students will no longer have to clear all the first year examinations to enter the third year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X