ದಾವಣಗೆರೆಯಲ್ಲಿ ಸ್ಟಾರ್ಟಪ್ ಪಾರ್ಕ್ ಸ್ಥಾಪಿಸಲು ವಿಟಿಯು ಚಿಂತನೆ
ಸಾರ್ವಜನಿಕ-ಖಾಸಗಿ ಸಹಭಾಗಿತ್ವದ (ಪಿಪಿಪಿ) ಆಧಾರದ ಮೇಲೆ ಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ದಾವಣಗೆರೆಯ ಎಂಟು ಎಕರೆ ಕ್ಯಾಂಪಸ್‌ನಲ್ಲಿ ಸ್ಟಾರ್ಟಪ್ ಪಾರ್ಕ್ ಅನ್ನು ಸ್ಥಾಪಿಸುತ್ತಿದೆ.
ದಾವಣಗೆರೆ, ಫೆಬ್ರವರಿ 3: ಎಂಜಿನಿಯರಿಂಗ್ ಪದವೀಧರರು ಉದ್ಯಮಿಗಳಾಗಲು ಸರ್ಕಾರಿ ಸ್ವಾಮ್ಯದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ದಾವಣಗೆರೆಯ ಎಂಟು ಎಕರೆ ಕ್ಯಾಂಪಸ್‌ನಲ್ಲಿ ಸ್ಟಾರ್ಟಪ್ ಪಾರ್ಕ್ ಅನ್ನು ಸ್ಥಾಪಿಸಲು ಮುಂದಾಗಿದೆ.
ಈ ಸೌಲಭ್ಯವನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದ (ಪಿಪಿಪಿ) ಆಧಾರದ ಮೇಲೆ ಸ್ಥಾಪಿಸಲಾಗುತ್ತಿದ್ದು, ಇದರ ಅಂದಾಜು ವೆಚ್ಚ ಸುಮಾರು 40 ಕೋಟಿ ರೂಪಾಯಿ ಆಗಿರಲಿದೆ. ವಿಟಯು ಈಗಾಗಲೇ ಈ ಯೋಜನೆಗಾಗಿ ಹಲವಾರು ಸಂಭಾವ್ಯ ಹೂಡಿಕೆದಾರರನ್ನು ಸಂಪರ್ಕಿಸಿದೆ. ಎಲ್ಲವೂ ಯೋಜಿಸಿದಂತೆ ನಡೆದರೆ, ಮುಂದಿನ ಆರು ತಿಂಗಳಲ್ಲಿ ಮೂಲ ಮೂಲಭೂತ ಸೌಕರ್ಯದೊಂದಿಗೆ ಸ್ಟಾರ್ಟಪ್ ಪಾರ್ಕ್ ಸಿದ್ಧವಾಗಬಹುದು.
ಪಾರ್ಕ್ ಸ್ಟಾರ್ಟ್‌ಅಪ್‌ಗಳಿಗೆ ಅಗತ್ಯವಿರುವ ಎಲ್ಲವನ್ನೂ ಹೊಂದಿರುತ್ತದೆ. ಕೆಲವು ಹೂಡಿಕೆದಾರರು ಮುಂದೆ ಬಂದಿದ್ದು, ಅವುಗಳನ್ನು ನಾವು ಇನ್ನಷ್ಟೆ ಅಂತಿಮಗೊಳಿಸಬೇಕಾಗಿದೆ ಎಂದು ವಿಟಿಯು ಉಪಕುಲಪತಿ ಎಸ್ ವಿದ್ಯಾಶಂಕರ್ ಮಾಹಿತಿ ನೀಡಿದ್ದಾರೆ ಎಂದು ಡಿಎಚ್ ವರದಿ ಮಾಡಿದೆ.

ಸ್ಟಾರ್ಟಪ್ ಪಾರ್ಕ್ ವಿಟಿಯು ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಇನ್ಕ್ಯುಬೇಟರ್ ಆಗಿ ಕಾರ್ಯನಿರ್ವಹಿಸುವ ಸಾಧ್ಯತೆಯಿದೆ. ರಾಜ್ಯದ ಇತರ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಲು ವಿಶ್ವವಿದ್ಯಾಲಯವು ಯೋಜಿಸುತ್ತಿದೆ. ಉತ್ತಮವಾದುದನ್ನು ಆಯ್ಕೆ ಮಾಡಲು ತಜ್ಞರ ತಂಡವಿರುತ್ತದೆ. ಹೂಡಿಕೆದಾರರನ್ನು ಅಂತಿಮಗೊಳಿಸಿದ ನಂತರ ನಾವು ಆಲೋಚನೆಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸುತ್ತೇವೆ ಎಂದು ವಿದ್ಯಾಶಂಕರ್ ಹೇಳಿದರು.
ವಿಟಿಯು ಉದ್ಯಮಶೀಲತಾ ಕೋಶವನ್ನು ಸಹ ಸ್ಥಾಪಿಸುತ್ತದೆ. ಅಲ್ಲಿ ಸ್ಟಾರ್ಟ್‌ಅಪ್‌ಗಳನ್ನು ಪ್ರಾರಂಭಿಸಲು ಬಯಸುವ ವಿದ್ಯಾರ್ಥಿಗಳು ನೋಂದಾಯಿಸಿಕೊಳ್ಳಬಹುದು. ಉದ್ಯೋಗ ಹುಡುಕುವವರನ್ನು ಸೃಷ್ಟಿಸುವ ಬದಲು, ನಾವು ಉದ್ಯೋಗ ಒದಗಿಸುವವರನ್ನು ಸೃಷ್ಟಿಸಲು ಬಯಸುತ್ತೇವೆ. ಇದು ಸ್ಟಾರ್ಟಪ್ ಪಾರ್ಕ್‌ನ ಹಿಂದಿನ ಕಲ್ಪನೆ ಎಂದು ವಿದ್ಯಾಶಂಕರ್ ಹೇಳಿದರು.

ಪ್ರಸ್ತಾವಿತ ಸ್ಟಾರ್ಟಪ್ ಪಾರ್ಕ್ ಐಡಿಯಾ ಲ್ಯಾಬ್ ಅನ್ನು ಸಹ ಹೊಂದಿದೆ. ಕೆಲವು ವಿದ್ಯಾರ್ಥಿಗಳು ಅತ್ಯುತ್ತಮ ಆಲೋಚನೆಗಳನ್ನು ಹೊಂದಿರುತ್ತಾರೆ. ಆದರೆ ಅವುಗಳನ್ನು ಹೇಗೆ ಅಭಿವೃದ್ಧಿಪಡಿಸುವುದು ಎಂಬುದರ ಬಗ್ಗೆ ಅವರಿಗೆ ತಿಳಿದಿರುವುದಿಲ್ಲ. ಅವರಿಗೆ ನೆರವಾಗಲು ಇಲ್ಲಿಯೇ ಐಡಿಯಾ ಲ್ಯಾಬ್ ಕೆಲಸವನ್ನು ವಹಿಸುತ್ತದೆ ಎಂದು ಉಪಕುಲಪತಿ ಹೇಳಿದರು.
ಏತನ್ಮಧ್ಯೆ, ವಿಟಿಯು ಶಿಕ್ಷಕರಿಗೆ ಉದ್ಯಮಶೀಲ ಶಿಕ್ಷಣದಲ್ಲಿ ತರಬೇತಿ ನೀಡಲು ಖಾಸಗಿ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಶಿಕ್ಷಕರಿಗೆ ಸಾಮಾನ್ಯವಾಗಿ ಕಡಿಮೆ ಉದ್ಯಮದ ಮಾನ್ಯತೆ ಇರುವುದರಿಂದ ಈ ಕ್ರಮವನ್ನು ತೆಗೆದುಕೊಳ್ಳಲಾಗುತ್ತಿದೆ. ವಿಟಿಯು 4 ಅಥವಾ 5 ನೇ ಸೆಮಿಸ್ಟರ್‌ನಲ್ಲಿ ಉದ್ಯಮಶೀಲತೆಯ ವಿಷಯವನ್ನು ಪರಿಚಯಿಸಲು ಯೋಜಿಸುತ್ತಿದೆ, ಇದಕ್ಕಾಗಿ ಅಧ್ಯಾಪಕರಿಗೆ ತರಬೇತಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ












Click it and Unblock the Notifications