ಚುನಾವಣೆಯಲ್ಲಿ ಮತ ಚಲಾವಣೆ ಖಾತ್ರಿಗೆ ವಿವಿಪ್ಯಾಟ್ ಬಳಕೆ

ಬೆಂಗಳೂರು, ಫೆಬ್ರವರಿ23 : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ವಿವಿಪ್ಯಾಟ್ ಗಳನ್ನು ಒಳಗೊಂಡ ವಿದ್ಯುನ್ಮಾನ ಮತ ಯಂತ್ರಗಳನ್ನು ಬಳಕೆ ಮಾಡಲಾಗುವುದು ಎಂದು ನಗರ ಜಿಲ್ಲಾಧಿಕಾರಿ ವಿ.ಶಂಕರ್ ತಿಳಿಸಿದ್ದಾರೆ.

ಮತದಾನದ ಅವಧಿಯನ್ನು ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಬೆಳಗ್ಗೆ7 ರಿಂದ ಸಂಜೆ 5 ರರೆಗೆ ಮಾತ್ರ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿತ್ತು ಎಂದರು.

ವಿದ್ಯುನ್ಮಾನ ಮತಯಂತ್ರಗಳ ಬಗೆಗಿನ ಸಂದೇಹ ನಿವಾರಿಸುವ ಸಲುವಾಗಿ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿವಿಪ್ಯಾಟ್ ಗಳನ್ನು ಮತಗಟ್ಟೆಗಳಲ್ಲಿ ಅಳವಡಿಸಲಾಗುತ್ತಿದೆ. ಇದರಿಂದ ಮತದಾರರು ಚಲಾಯಿಸಿದ ಮತವು ಯಾವ ಅಭ್ಯರ್ಥಿ ಮತ್ತು ಚಿಹ್ನೆಗೆ ಚಲಾವಣೆ ಆಗಿದೆ ಎಂಬುದನ್ನು ಖಾತ್ರಿಪಡಿಸಿಕೊಳ್ಳಬೇಕಾಗಿದೆ.

VVPat EVM for Karnataka Assembly elections

ಮತದಾರರು ಚಲಾಯಿಸಿದ ಮತವು ಯಾವ ಅಭ್ಯರ್ಥಿ ಮತ್ತು ಚಿಹ್ನೆಗೆ ಚಲಾವಣೆ ಆಗಿದೆ ಎಂಬುದು ವಿವಿಪ್ಯಾಟ್ ಮುದ್ರಿತ ಪತ್ರಿಕೆಯಲ್ಲಿ ಕಾಣಲಿದೆ. 15 ಸೆಕೆಂಡುಗಳವರೆಗೆ ವೀಕ್ಷಣೆಗೆ ಲಭ್ಯವಿರಲಿದೆ. ಹೀಗಾಗಿ, ಮತದಾನದ ಅವಧಿಯನ್ನು ಒಂದು ಗಂಟೆ ಹೆಚ್ಚಿಸಲಾಗಿದೆ. ಮತದಾರರು ವಿವಿಪ್ಯಾಟ್ ನಲ್ಲಿ ಮುದ್ರಿತವಾಗುವ ಪ್ರತಿಯನ್ನು ಪಡೆಯಲು ಅವಕಾಶವಿರುವುದಿಲ್ಲ ಎಂದು ತಿಳಿಸಿದರು.

ಚುನಾವಣೆಗೆ ಸಿದ್ಧತೆ: ನಗರದಲ್ಲಿ ಪಾರದರ್ಶಕ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಬೆಂಗಳೂರಿನ 28 ಕ್ಷೇತ್ರಗಳ ಪೈಕಿ ಯಲಹಂಕ, ಬ್ಯಾಟರಾಯನಪುರ, ಯಶವಂತಪುರ, ದಾಸರಹಳ್ಳಿ, ಮಹದೇವಪುರ, ಬೆಂಗಳೂರು ದಕ್ಷಿಣ ಮತ್ತು ಆನೇಕಲ್ ಕ್ಷೇತ್ರಗಳು ತಮ್ಮ ವ್ಯಾಪ್ತಿಗೆ ಬರಲಿವೆ. ಇಲ್ಲಿ 29,80,187 ಮತದಾರರಿದ್ದು, 2772 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+