ಮಕ್ಕಳ ಅಶ್ಲೀಲ ಚಿತ್ರಗಳ ವೀಕ್ಷಣೆ ಅಪರಾಧವಲ್ಲ: ಹೈಕೋರ್ಟ್

ಬೆಂಗಳೂರು, ಜುಲೈ 18: ಅಂತರ್ಜಾಲದ ಮೂಲಕ ಮಕ್ಕಳ ಅಶ್ಲೀಲ ಚಿತ್ರಗಳ ವೀಕ್ಷಣೆ ಮಾಡುವುದು ಮಾಹಿತಿ ತಂತ್ರಜ್ಞಾನ ಕಾಯಿದೆಯಡಿ ಅಪರಾಧವಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಅಷ್ಟೇ ಅಲ್ಲದೆ, ಅದೇ ಆರೋಪ ಎದುರಿಸುತ್ತಿದ್ದ ವ್ಯಕ್ತಿಯೊಬ್ಬನ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಿದೆ.

ಮಕ್ಕಳ ಅಶ್ಲೀಲ ಚಿತ್ರಗಳ ವೀಕ್ಷಣೆ ಮಾಡಿದ ಆರೋಪದಲ್ಲಿ ದಾಖಲಾದ ಪ್ರಕರಣ ರದ್ದು ಕೋರಿ ಹೊಸಕೋಟೆಯ ಎನ್. ಇನಾಯತುಲ್ಲಾ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

Waching Child Phornography In Online Is Not An Offence Under IT Act

ನ್ಯಾಯಾಲಯದ ಆದೇಶವೇನು?: ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್ 67ಬಿ ಯಲ್ಲಿ ತಿಳಿಸಿರುವಂತೆ, ಯಾವುದೇ ವ್ಯಕ್ತಿಯು ಮಕ್ಕಳ ಅಶ್ಲೀಲ ಚಿತ್ರಗಳನ್ನು ಸಿದ್ದಪಡಿಸುವುದು ಮತ್ತು ಅದನ್ನು ವಿದ್ಯುನ್ಮಾನ ಉಪಕರಣಗಳ ಮೂಲಕ ಹಂಚಿಕೊಳ್ಳುವುದಕ್ಕೆ ಶಿಕ್ಷೆ ವಿಧಿಸಲು ಅವಕಾಶವಿದೆ.

ಅರ್ಜಿದಾರರು ಮಕ್ಕಳ ಅಶ್ಲೀಲ ಚಿತ್ರಗಳನ್ನು ಸಿದ್ದಪಡಿಸಿಲ್ಲ. ಜತೆಗೆ, ಅದನ್ನು ಯಾರೊಂದಿಗೂ ಹಂಚಿಕೊಂಡಿಲ್ಲ. ಕೇವಲ ವೀಕ್ಷಿಸಿದ್ದಾರೆ. ಹೀಗಾಗಿ ಸೆಕ್ಷನ್ 67ಬಿ ಅಡಿಯಲ್ಲಿ ಅಪರಾಧವಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ. ಆದರೆ, ಅರ್ಜಿದಾರರು ಮಕ್ಕಳ ಅಶ್ಲೀಲ ಚಿತ್ರಗಳ ವೀಕ್ಷಿಸುವ ದಾಸನಾಗಿದ್ದಾರೆ.

ಅವರು ಅಶ್ಲೀಲ ವಿಡಿಯೋಗಳನ್ನು ನೋಡುತ್ತಾರೆ. ಈ ಘಟನೆಯಿಂದ ಯಾವುದೇ ಅಪರಾಧ ಕೃತ್ಯ ನಡೆದಿಲ್ಲ. ಹೀಗಾಗಿ ಆಕಸ್ಮಿಕವಾಗಿ ಅರ್ಜಿದಾರರ ವಿರುದ್ಧ ಪ್ರಕರಣ ದಾಖಲಿಸಿದ್ದು, ಅದನ್ನು ಮುಂದುವರೆಸಿದಲ್ಲಿ ಕಾನೂನಿನ ದುರ್ಬಳಕೆಯಾಗಲಿದೆ ಎಂದು ಪೀಠ ತಿಳಿಸಿದೆ.

ಅರ್ಜಿದಾರರ ಪರ ವಕೀಲರು, ಅರ್ಜಿದಾರರು ಮಕ್ಕಳ ಅಶ್ಲೀಲ ಚಿತ್ರಗಳ ವೀಕ್ಷಣೆಯ ವ್ಯಸನಿಯಾಗಿದ್ದಾರೆ. ಆದರೆ, ಯಾವುದೇ ವಿಡಿಯೋವನ್ನು ಸಿದ್ದಪಡಿಸಿಲ್ಲ ಮತ್ತು ಯಾರೊಂದಿಗೂ ಹಂಚಿಕೆ ಮಾಡಿಲ್ಲ. ಹೀಗಾಗಿ ಪ್ರಕರಣ ರದ್ದು ಮಾಡಬೇಕು ಎಂದು ಕೋರಿದ್ದರು.

ಪ್ರಾಸಿಕ್ಯೂಷನ್, ಅರ್ಜಿದಾರರು ಮಕ್ಕಳ ಅಶ್ಲೀಲ ವಿಡಿಯೋಗಳನ್ನು ನೋಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಹೀಗಾಗಿ ಈ ಪ್ರಕ್ರಿಯೆ ಮುಂದುವರೆಯುವುದಕ್ಕೆ ಅವಕಾಶ ನೀಡಬಾರದು. ಹೀಗಾಗಿ ಅರ್ಜಿ ವಜಾಗೊಳಿಸಬೇಕು ಎಂದು ಕೋರಿದ್ದರು.

ಪ್ರಕರಣದ ಹಿನ್ನೆಲೆ ಏನು?: ಅರ್ಜಿದಾರ ಇನಾಯತುಲ್ಲಾ ಅವರು 2023ರ ಮಾರ್ಚ್ 23ರಂದು ತನ್ನ ಮೊಬೈಲ್ ಮೂಲಕ ಮಕ್ಕಳ ಅಶ್ಲೀಲ ಚಿತ್ರಗಳನ್ನು ವೀಕ್ಷಣೆ ಮಾಡಿದ್ದರು. ಈ ಸಂಬಂಧ ಕೇಂದ್ರ ಸರ್ಕಾರ ಜಾರಿ ಮಾಡಿರುವ ಮಹಿಳೆ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟಲು ಪ್ರಾರಂಭಿಸಿರುವ ಪೋರ್ಟ್ಲ್ ಮೂಲಕ ಮಾಹಿತಿ ಪಡೆದಿದ್ದ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ನೀಡಿದ ಮಾಹಿತಿಯಂತೆ ಬೆಂಗಳೂರು ನಗರ ಸಿಐಡಿ ಘಟಕ ಬೆಂಗಳೂರು ಸೈಬರ್ ಕ್ರೈಮ್ ಠಾಣೆಗೆ ವರದಿಯೊಂದನ್ನು ರವಾನಿಸಿತ್ತು.

ಈ ವರದಿಯನ್ನು ಪರಿಶೀಲಿಸಿ ಮಕ್ಕಳ ಅಶ್ಲೀಲ ವಿಡಿಯೋ ನೋಡಿದ್ದ ಹೊಸಕೋಟೆ ಮೂಲದ ಇನಾಯತುಲ್ಲ ಎಂಬುದಾಗಿ ಪತ್ತೆ ಹಚ್ಚಿ ಅವರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್ 67ಬಿ ಅಡಿಯಲ್ಲಿ ಘಟನೆ ನಡೆದ ಎರಡು ತಿಂಗಳ ಬಳಿಕ ಅಂದರೆ 2023ರ ಮೇ 3 ರಂದು ಬೆಂಗಳೂರು ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ದೂರು ರದ್ದು ಪಡಿಸಬೇಕು ಎಂದು ಕೋರಿ ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+