ಉತ್ತರ ಕರ್ನಾಟಕದಲ್ಲಿ ಹಾದುಹೋಗುವ ಪ್ರಮುಖ ಹೆದ್ದಾರಿ ಅಭಿವೃದ್ಧಿ ಕುರಿತು ಸತೀಶ್ ಜಾರಕಿಹೊಳಿ ಮಹತ್ವದ ಅಪ್ಡೇಟ್
Highway: ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ ಜಾಲ ವಿಸ್ತರಣೆ ಆಗುತ್ತಲಿದೆ. ಇದೀಗ ಕೆಲವು ಉದ್ಘಾಟನೆ ಹಂತದಲ್ಲಿದ್ದರೆ, ಇನ್ನೂ ಕೆಲವು ಕಾಮಗಾರಿ ಹಂತದಲ್ಲಿವೆ. ಈ ನಡುವೆಯೇ ಇದೀಗ ವಾಗ್ದಾರಿ-ರಿಬ್ಬನ್ಪಳ್ಳಿ ಹೆದ್ದಾರಿ ಅಭಿವೃದ್ಧಿ ಕುರಿತು ಸಚಿವ ಸತೀಶ್ ಜಾರಕಿಹೊಳಿ ಅವರು ಮಹತ್ವದ ಅಪ್ಡೇಟ್ವೊಂದನ್ನು ನೀಡಿದ್ದಾರೆ. ಹಾಗಾದ್ರೆ, ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬೆಂಗಳೂರಿನ ವಿಕಾಸಸೌಧದಲ್ಲಿ ಅವರು, ವಾಗ್ದಾರಿ-ರಿಬ್ಬನ್ಪಳ್ಳಿ ರಾಜ್ಯ ಹೆದ್ದಾರಿ 10 ಅನ್ನು (ಮಹಾರಾಷ್ಟ್ರ ರಾಜ್ಯದ ಗಡಿಯಿಂದ ಆಳಂದ, ಕಲಬುರಗಿ, ಮಲೈಡ್, ಸೇಡಂ ಮಾರ್ಗವಾಗಿ ಆಂಧ್ರ ಪ್ರದೇಶ ರಾಜ್ಯದ ಗಡಿಯವರೆಗೆ) ನಾಲ್ಕು ಪಥದ ರಸ್ತೆಯಾಗಿ ಅಭಿವೃದ್ಧಿಪಡಿಸುವ ಕುರಿತು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಮಹತ್ವದ ಚರ್ಚೆ ನಡೆಸಿದರು.

ಏನೆಲ್ಲಾ ಪ್ರಯೋಜನೆಗಳಿವೆ?: ಈ ಯೋಜನೆಯಿಂದ ಉತ್ತರ ಕರ್ನಾಟಕ ಭಾಗದ ಸಂಪರ್ಕ ವ್ಯವಸ್ಥೆ ಬಲಪಡಿಸಿ, ವ್ಯಾಪಾರ-ವಾಣಿಜ್ಯ ಹಾಗೂ ಆರ್ಥಿಕ ಚಟುವಟಿಕೆಗಳಿಗೆ ಹೊಸ ವೇಗ ನೀಡಿದಂತಾಗಲಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾನ್ಯ ಸಚಿವ ಪ್ರಿಯಾಂಕ ಖರ್ಗೆ, ಹಿರಿಯ ಶಾಸಕ ಬಿ.ಆರ್.ಪಾಟೀಲ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಎಕ್ಸ್ಪ್ರೆಸ್ ವೇ ಉದ್ಘಾಟನೆ ಯಾವಾಗ?: ರಾಜ್ಯದಲ್ಲಿ ಬಹುನಿರೀಕ್ಷಿತ ಬೆಂಗಳೂರು ಚೆನ್ನೈ ಎಕ್ಸ್ಪ್ರೆಸ್ ವೇ ಕಾಮಗಾರಿ ಸಂಪೂರ್ಣವಾಗಿ ಮುಕ್ತಾಯ ಆಗಿದ್ದು, ವಾಹನ ಸಂಚಾರಕ್ಕೂ ಅವಕಾಶ ಕಲ್ಪಿಸಲಾಗಿದೆ. ಆದರೆ, ಇದು ಇನ್ನೂ ಉದ್ಘಾಟನೆ ಆಗಿಲ್ಲ. ಇದಕ್ಕೆ ಕಾರಣವೂ ಇದೆ. ತಮಿಳುನಾಡು ಹಾಗೂ ಆಂಧ್ರ ಪ್ರದೇಶದಲ್ಲಿ ಕಾಮಗಾರಿ ವಿಳಂಬ ಆದ ಕಾರಣ ಲೋಕಾರ್ಪಣೆ ದಿನಾಂಕ ಮುಂದೂಡಿಕೆ ಆಗುತ್ತಲಿದೆ. ಇದೀಗ ಇದರ ಲೋಕಾರ್ಪಣೆ ಮುಂದಿನ ವರ್ಷ 2026ರ ಜೂನ್ ಅಥವಾ ಜುಲೈ ತಿಂಗಳಿನಲ್ಲಿ ಆಗಲಿದೆ ಎನ್ನುವ ಮಾಹಿತಿಯಿದೆ.
ಒಂದು ವೇಳೆ ಇದು ಲೋಕಾರ್ಪಣೆಯಾದ್ರೆ, ಕರ್ನಾಟಕ, ತಮಿಳುನಾಡು ಹಾಗೂ ಆಂಧ್ರಪ್ರದೇಶ ಮೂರು ರಾಜ್ಯಗಳ ಪ್ರಮುಖ ಸಂಪರ್ಕ ಸೇತುವೆಯಾಗಲಿದೆ. ಅಲ್ಲದೆ, ದೊಡ್ಡ ಮಟ್ಟದ ಅಭಿವೃದ್ಧಿ ಕಾರ್ಯಗಳು ಕೂಡ ಆಗಲಿವೆ. ಇದೀಗ ಈ ಎಕ್ಸ್ಪ್ರೆಸ್ ವೇ ಪಕ್ಕದಲ್ಲಿನ ಭೂಮಿ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಉಯಾದರೂ ಆಶ್ಚರ್ಯವಿಲ್ಲ ಎಂದು ಹೇಳಲಾಗುತ್ತದೆ.
ಸುರಕ್ಷತಾ ಕ್ರಮಗಳ ಕುರಿತು ಪರಿಶೀಲನೆ: ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿ - 275ರ ರಸ್ತೆ ಸುರಕ್ಷತಾ ಕ್ರಮಗಳ ಕುರಿತು ಸುಪ್ರೀಂ ಕೋರ್ಟ್ನ ರಸ್ತೆ ಸುರಕ್ಷತಾ ಸಲಹಾ ಸಮಿತಿ ತಂಡ ಪರಿಶೀಲನೆ ನಡೆಸಿತು.
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತನಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ನಿಯಂತ್ರಣ ಮಾಡಲು ತೆಗೆದುಕೊಳ್ಳಬೇಕಾದ ಹೆಚ್ಚಿನ ಕ್ರಮಗಳ ಬಗ್ಗೆ ಚರ್ಚೆಗಳನ್ನು ನಡೆಸಲಾಯಿತು. ಮೊದಲಿಗೆ ಎಐ ಕ್ಯಾಮೆರಾಗಳನ್ನು ಅಳವಡಿಕೆ ನಂತರ ಕಳೆದ ವರ್ಷಕ್ಕಿಂತ ಈ ವರ್ಷದಲ್ಲಿ ಹೆದ್ದಾರಿಯಲ್ಲಿ ಅಪಘಾತಗಳು ಕಡಿಮೆಯಾಗಿದೆ. ಈ ಬಗ್ಗೆ ಪರಿಶೀಲಿಸಿ, ಪ್ರಶಂಶೆ ವ್ಯಕ್ತಪಡಿಸಿದರು. ಇನ್ನೂ ಬಳಿಕ ರಸ್ತೆ ಅಪಘಾತಗಳು ಹೆಚ್ಚಳ ಆಗಿರುವ ಪ್ರದೇಶಗಳಲ್ಲಿ ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ಪಟ್ಟಿ ಮಾಡಿದರು.
ಹೆದ್ದಾರಿಯಲ್ಲಿ ಅಳವಡಿಕೆ ಮಾಡಿರುವ ಎಐ ಕ್ಯಾಮೆರಾಗಳ ಸ್ಥಿತಿಯ ಪರಿಶೀಲನೆ ನಡೆಸಿ ಕ್ಯಾಮೆರಾಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುಚಂತೆ ಸೂಚಿಸಲಾಯಿತು. ಕ್ಯಾಮೆರಾಗಳು ಸರಾಗವಾಗಿ ಕಾರ್ಯನಿರ್ವಹಿಸಲು ಡಿವೈಸ್ಗಳ ತಾಂತ್ರಿಕ ಅಪ್ಡೇಟ್ಗಳನ್ನು ಮಾಡುತ್ತಿರಬೇಕು. ಈ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ನಡೆಯಬೇಕು ಎಂದು ಸೂಚಿಸಿದರು.
ಅಗತ್ಯ ಕ್ರಮಗಳ ಬಗ್ಗೆ ಸೂಚನೆಗಳು
* ಹೆದ್ದಾರಿಯಲ್ಲಿ ವಾಹನದ ಹೆಚ್ಚಿನ ವೇಗವನ್ನು ನಿಯಂತ್ರಿಸಲು ಡಿಜಿಟಲ್ ವೇಗ ನಿಯಂತ್ರಣಗಳನ್ನು ಅಳವಡಿಕೆ ಮಾಡಬೇಕು. * ವೇಗ ನಿಯಂತ್ರಣ ಮಾನಿಟರಿಂಗ್ ವ್ಯವಸ್ಥೆಯಲ್ಲಿನ ಕ್ರಮಗಳನ್ನು ಇನನೂ ಕಠಿಣಗೊಳಿಸಬೇಕು.
* ಹೆಚ್ಚು ಅಪಘಾತಗಳು ನಡೆಯುವ ಪ್ರದೇಶಗಳಲ್ಲಿ, ಚುಟುಕು ಮತ್ತು ಸ್ಪಷ್ಟ ಗಾತ್ರದ ಸೂಚನಾ ಫಲಕಗಳನ್ನು ಅಳವಡಿಕೆ ಮಾಡಬೇಕು.
* ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಮಾಧ್ಯಮ ತರಬೇತಿ ಕಾರ್ಯಕ್ರಮವನ್ನು ನಡೆಸಬೇಕು.
* ಹೆಚ್ಚಿನ ವೇಗ ನಿಯಂತ್ರಣಕ್ಕೆ ರೋಡ್ ಲೈನ್ ಡಿಸಪ್ಲೀನ್ ಕ್ರಮಗಳನ್ನು ಪಾಲಿನೆ ಮಾಡಬೇಕು ಸೂಚಿಸಿದರು.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications