ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಲಾಪದಲ್ಲಿ ವಕ್ಫ್ ಆಸ್ತಿ ವಿವಾದ, ವರದಿ ಕೇಳಿದ ರಾಜ್ಯಪಾಲರು

|
Google Oneindia Kannada News

ಬೆಂಗಳೂರು, ಮಾರ್ಚ್ 29 : ವಿಧಾನಪರಿಷತ್ ಕಲಾಪದ ವರದಿ ನೀಡುವಂತೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರಿಗೆ ಸೂಚಿಸಿದ್ದಾರೆ. ವಕ್ಫ್ ಮಂಡಳಿ ಆಸ್ತಿ ಕಬಳಿಕೆ ಕುರಿತು ಅನ್ವರ್ ಮಾಣಿಪ್ಪಾಡಿ ಅವರು ಸಲ್ಲಿಸಿರುವ ವರದಿ ಮಂಡನೆ ಕುರಿತು ಪರಿಷತ್‌ನಲ್ಲಿ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಜಟಾಪಟಿ ನಡೆಯುತ್ತಿದೆ.

ಅನ್ವರ್ ಮಾಣಿಪ್ಪಾಡಿ ಅವರು ಸಲ್ಲಿಸಿರುವ ವರದಿ ಮಂಡನೆ ವಿಚಾರದಲ್ಲಿ ವಿಧಾನಪರಿಷತ್‌ನಲ್ಲಿ ಸೋಮವಾರವೂ ಗದ್ದಲ ನಡೆಯಿತು. ವರದಿ ತಿರಸ್ಕರಿಸಿರುವುದರಿಂದ ಮಂಡಿಸುವ ಪ್ರಶ್ನೆ ಇಲ್ಲ ಎಂದು ಸರ್ಕಾರ ಹೇಳಿದ್ದರೆ, ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ವರದಿ ಮಂಡನೆಗೆ ಪಟ್ಟು ಹಿಡಿದಿವೆ. [ರಾಜಭವನ ತಲುಪಿದ ವಕ್ಫ್ ಮಂಡಳಿ ಆಸ್ತಿ ವಿವಾದ]

legislative council

ಸೋಮವಾರ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ವರದಿ ಮಂಡನೆಗೆ ಪಟ್ಟು ಹಿಡಿದು ಘೋಷಣೆಗಳನ್ನು ಕೂಗಿದರು. ಇದರಿಂದ ಕಲಾಪವನ್ನು ಮುಂದೂಡಲಾಯಿತು. ಮಧ್ಯಾಹ್ನ 3 ಗಂಟೆಗೆ ಕಲಾಪ ಆರಂಭವಾದಾಗಲೂ ಗದ್ದಲ ಮುಂದುವರೆಯಿತು. [ಭೂ ಹಗರಣ : ಸಚಿವ ಖಮರುಲ್ ಇಸ್ಲಾಂ ವಿರುದ್ಧ ತನಿಖೆ]

ಕಲಾಪದಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು, 'ವರದಿ ಮಂಡಿಸುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ. ಸ್ಪೀಕರ್ ರೂಲಿಂಗ್ ನೀಡಿದ್ದಾರೆ. ಕಲಾಪ ಸಲಹಾ ಸಮಿತಿ ಸಭೆಯಲ್ಲಿಯೂ ಸರ್ಕಾರ ಒಪ್ಪಿದೆ. ಆದರೂ ವರದಿ ಏಕೆ ಮಂಡಿಸುತ್ತಿಲ್ಲ?' ಎಂದು ಪ್ರಶ್ನಿಸಿದರು. [ವಕ್ಫ್ ಆಸ್ತಿ 2.5 ಲಕ್ಷ ಕೋಟಿ ಹಂಚಲು ಆಗ್ರಹ]

ರಾಜ್ಯಪಾಲರ ಭೇಟಿ : ಜೆಡಿಎಸ್ ಮತ್ತು ಬಿಜೆಪಿ ಸದಸ್ಯರನ್ನು ಸಮಾಧಾನ ಪಡಿಸಿದ ಡಿ.ಎಚ್.ಶಂಕರಮೂರ್ತಿ ಅವರು, 'ಕಲಾಪ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳುವುದು ನನ್ನ ಜವಾಬ್ದಾರಿ. ವರದಿ ಮಂಡನೆ ಮಾಡುವಂತೆ ನೀಡಿದ ರೂಲಿಂಗ್‌ ಅನ್ನು ಸರ್ಕಾರ ಪಾಲಿಸುತ್ತಿಲ್ಲ. ಈ ಬಿಕ್ಕಟ್ಟು ಬಗೆಹರಿಯುತ್ತಿಲ್ಲ. ಆದ್ದರಿಂದ ರಾಜ್ಯಪಾಲರನ್ನು ಭೇಟಿ ಮಾಡಿ ವರದಿ ನೀಡುವೆ' ಎಂದು ಕಲಾಪವನ್ನು ಮಂಗಳವಾರಕ್ಕೆ ಮುಂದೂಡಿದರು.

ಕಲಾಪದ ನಂತರ ಡಿ.ಎಚ್.ಶಂಕರಮೂರ್ತಿ ಮತ್ತು ಉಪ ಸಭಾಪತಿ ಮರಿತಿಬ್ಬೇಗೌಡ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ಕಲಾಪದ ಬಗ್ಗೆ ವಿವರಣೆ ನೀಡಿದರು. ವಿರವರಣೆ ಪಡೆದ ಬಳಿಕ ಕಲಾಪದ ಕುರಿತು ವರದಿ ನೀಡುವಂತೆ ರಾಜ್ಯಪಾಲರು ಸೂಚಿಸಿದ್ದಾರೆ.

ಏನಿದು ವರದಿ? : ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಅನ್ವರ್ ಮಾಣಿಪ್ಪಾಡಿ ಅವರು ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿದ್ದರು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಕ್ಫ್ ಮಂಡಳಿಗೆ ಸೇರಿದ ಆಸ್ತಿ ಒತ್ತುವರಿಯಾಗಿದೆ ಎಂದು 2012ರ ಮಾರ್ಚ್‌ 26ರಂದು ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು.

ಸುಮಾರು 2 ಲಕ್ಷ ಕೋಟಿ ರೂ. ಮೌಲ್ಯದ ಆಸ್ತಿ ಒತ್ತುವರಿಯಾಗಿದೆ. ಇದರಲ್ಲಿ ಪ್ರಭಾವಿ ರಾಜಕಾರಣಿಗಳು ಭಾಗಿಯಾಗಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿತ್ತು. ಕಾಂಗ್ರೆಸ್ ನಾಯಕರಾದ ಸಿ.ಕೆ.ಜಾಫರ್ ಷರೀಫ್, ರೋಷನ್ ಬೇಗ್, ಸಿ.ಎಂ.ಇಬ್ರಾಹಿಂ ಮುಂತಾದವರು ಹೆಸರು ಆಸ್ತಿ ಒತ್ತುವರಿ ಮಾಡಿಕೊಂಡವರ ಪಟ್ಟಿಯಲ್ಲಿತ್ತು.

ಆದರೆ, ಕಾಂಗ್ರೆಸ್ ಬಿಜೆಪಿ ಸರ್ಕಾರ ದುರುದ್ದೇಶದಿಂದ ಈ ವರದಿ ತಯಾರಿಸಿದೆ ಎಂದು ಹೇಳಿತ್ತು. ಕಾಂಗ್ರೆಸ್ ನಾಯಕರ ವಿರುದ್ಧ ಮಾಡಿರುವ ಆರೋಪಗಳಿಗೆ ದಾಖಲೆಗಳಿಲ್ಲ ಎಂದು ಹೇಳಿತ್ತು. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಬಿಜೆಪಿ ವರದಿಯನ್ನು ಸದನದಲ್ಲಿ ಮಂಡನೆ ಮಾಡಬೇಕು ಎಂದು ಒತ್ತಾಯಿಸುತ್ತಿದೆ.

English summary
Karnataka Governor Vajubhai Rudabhai Vala has sought a report from Legislative council chairman D.H. Shankaramurthy on the issue of Wakf board land scam report.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X