ಮಂಡ್ಯ : ಮಿಮ್ಸ್‌ನಲ್ಲಿ ಹಲವಾರು ಹುದ್ದೆಗಳು ಖಾಲಿ ಇವೆ

ಮಂಡ್ಯ, ಜ.22 : ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಪ್ರೊಫೆಸರ್‌, ಅಸೋಸಿಯೇಟ್‌ ಪ್ರೊಫೆಸರ್‌, ಅಸಿಸ್ಟೆಂಟ್‌ ಪ್ರೊಫೆಸರ್‌ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಸಂದರ್ಶನ ಜನವರಿ 31ರಂದು ನಡೆಯಲಿದೆ.

ಖಾಲಿ ಇರುವ ಹುದ್ದೆಗಳು : ಪ್ರೊಫೆಸರ್ 2, ಅಸೋಸಿಯೇಟ್ ಪ್ರೊಫೆಸರ್ 7, ಅಸಿಸ್ಟೆಂಟ್ ಪ್ರೊಫೆಸರ್ 3. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿಯಮಗಳಿಗೆ ಅನುಗುಣವಾಗಿರುತ್ತದೆ. [ಕನ್ನಡದಲ್ಲಿ ನೇಮಕಾತಿ ಆದೇಶ ನೋಡಿ]

Mandya

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವೆಬ್‌ಸೈಟ್‌ನಲ್ಲಿ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಅರ್ಜಿಯನ್ನು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನಿರ್ದೇಶಕರು ಮಂಡ್ಯ, ಇವರ ಹೆಸರಿನಲ್ಲಿ 500 ರೂ. ಡಿಡಿ ತೆಗೆದು ಸಲ್ಲಿಸಬೇಕಾಗಿದೆ. [ಇಂಗ್ಲಿಶ್ ನಲ್ಲಿ ಓದಿ]

ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ ಅಂಚೆ ಅಥವ ಖುದ್ದಾಗಿ ಜನವರಿ 27ರ ಸಂಜೆ 5.30ರವೊಳಗೆ ಸಲ್ಲಿಸಬೇಕು. ಅರ್ಜಿಯನ್ನು ಹಿರಿಯ ಆಡಳಿತಾಧಿಕಾರಿ, ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮೈಸೂರು-ಬೆಂಗಳೂರು ರಸ್ತೆ, ಮಂಡ್ಯ - 571401 ವಿಳಾಸಕ್ಕೆ ತಲುಪುವಂತೆ ಸಲ್ಲಿಸಬೇಕಾಗುತ್ತದೆ.[ಉದ್ಯೋಗದ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ]

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಗತ್ಯ ದಾಖಲೆಗಳು, ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಜನವರಿ 31ರಂದು ಬೆಳಗ್ಗೆ 10 ಗಂಟೆಗೆ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು. ಅರ್ಜಿ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+