Get Updates
Get notified of breaking news, exclusive insights, and must-see stories!

ವಕ್ಫ್‌ ಆಸ್ತಿ ವಿವಾದ: ಗೃಹ ಸಚಿವ ಜಿ. ಪರಮೇಶ್ವರ್ ಖಡಕ್ ಎಚ್ಚರಿಕೆ, ಏನಂದ್ರು ನೋಡಿ!

ವಕ್ಫ್‌ ಆಸ್ತಿ ವಿವಾದದ ಬಗ್ಗೆ ಇದೀಗ ಗೃಹ ಸಚಿವ ಜಿ. ಪರಮೇಶ್ವರ್ ಅವರು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಕಳೆದ ಎರಡು ಮೂರು ತಿಂಗಳಿನಿಂದ ವಕ್ಫ್ ಆಸ್ತಿ ವಿಚಾರದಲ್ಲಿ ಸಾಕಷ್ಟು ಗೊಂದಲಗಳು ಹಾಗೂ ವಿವಾದ ಸೃಷ್ಟಿಯಾಗುತ್ತಿವೆ. ಅಲ್ಲದೇ ಇದೇ ವಿಷಯವನ್ನು ಇರಿಸಿಕೊಂಡು ಕೆಲವರು ಅನ್ಯ ಉದ್ದೇಶಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಈ ಹಿನ್ನೆಲೆಯಲ್ಲಿ ಇದೀಗ ಗೃಹ ಸಚಿವ ಜಿ. ಪರಮೇಶ್ವರ್‌ ಅವರು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಈ ವಿಷಯದ ಬಗ್ಗೆ ಮಾತನಾಡಿರುವ ಜಿ. ಪರಮೇಶ್ವರ್‌ ಅವರು...

ವಕ್ಫ್‌ ಆಸ್ತಿ ವಿಷಯವನ್ನು ಬಿಜೆಪಿಯವರು ರಾಜಕೀಯ ಅಸ್ತ್ರವನ್ನಾಗಿಸಿಕೊಳ್ಳುತ್ತಿದ್ದಾರೆ. ಕೋಮುಗಲಭೆ, ಶಾಂತಿ ಹಾಳು ಮಾಡಲು ಅವರು ಏನು ಬೇಕಾದರೂ ಮಾಡಬಹುದು. ಅದಕ್ಕಾಗಿಯೇ ಪಾದಯಾತ್ರೆ ಮಾಡುತ್ತಿದ್ದಾರೆ. ಮುಂದಕ್ಕೆ ಯಾವ ಇದು ಯಾವ ಹಂತಕ್ಕೆ ಹೋಗುತ್ತದೆ ಎನ್ನುವುದನ್ನು ಈಗ ಊಹೆ ಮಾಡಲು ಆಗುವುದಿಲ್ಲ ಎಂದಿದ್ದಾರೆ. ಅಲ್ಲದೇ ಈ ವಿಷಯದಲ್ಲಿ ಉದ್ದೇಶಪೂರ್ವಕವಾಗಿ ಕಾನೂನು ಸುವ್ಯವಸ್ಥೆಗೆ ತೊಂದರೆ ಉಂಟು ಮಾಡಿದರೆ ಸುಮ್ಮನೆ ಇರುವುದಿಲ್ಲ ಎನ್ನುವ ಎಚ್ಚರಿಕೆಯನ್ನೂ ಅವರು ಕೊಟ್ಟಿದ್ದಾರೆ.

Waqf Property Dispute Home Minister G Parameshwar warning

ಇನ್ನು ರಾಜ್ಯದಲ್ಲಿ ನಮ್ಮ‌ಪಕ್ಷ (ಕಾಂಗ್ರೆಸ್‌) ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ನೀಡುತ್ತೇವೆ ಎಂದು ಜನರಿಗೆ ಮನೆಮನೆಗೆ ಹೋಗಿ ಭರವಸೆ ಕೊಟ್ಟಿದ್ದೆವು. 40 ಪರ್ಸೆಂಟ್ ಆರೋಪ ಮಾಡಿ ಅಧಿಕಾರಕ್ಕೆ ಬಂದಿದ್ದೇವೆ ಎಂಬುದು ಸುಳ್ಳು ಎಂದೂ ಅವರು ಹೇಳಿದ್ದಾರೆ. ಕರ್ನಾಟಕದ ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ದಿ. ಕೆಂಪಣ್ಣ ಅವರು ಅಂದಿನ ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಭ್ರಷ್ಟಚಾರ ಜಾಸ್ತಿಯಾಗಿದೆ. ಕಾಮಗಾರಿಗಳಲ್ಲಿ ಹಣ ತೆಗೆದುಕೊಳ್ಳುತ್ತಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದ ಆಧಾರದ ಮೇಲೆ ನಾವು 40 ಪರ್ಸೆಂಟ್ ಆರೋಪ ಮಾಡಿದ್ದೇವೆ ಎಂದು ಹೇಳಿದರು.

ನೋಂದಾಯಿತ ಸಂಘವೊಂದು ಅಧಿಕೃತವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಾಗ ನಾವು ಕೂಡ ಪಕ್ಷವಾಗಿ ಜನರ ಹಿತ ದೃಷ್ಟಿಯಿಂದ ಪ್ರಶ್ನೆ ಮಾಡಿದ್ದೇವೆ. ಯಾವ ಆಧಾರದ ಮೇಲೆ 40 ಪರ್ಸೆಂಟ್ ನಡೆದಿಲ್ಲ ಎನ್ನುತ್ತಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ಜನಗಳಿಗೆ ಗ್ಯಾರಂಟಿ ಯೋಜನೆಗಳನ್ನು ಕೊಡುತ್ತೇವೆ ಎಂದು ನಾವು ಭರವಸೆ ಕೊಟ್ಟಿದ್ದೇವೆ. ಬರೀ 40 ಪರ್ಸೆಂಟ್ ಆರೋಪದಿಂದ ನಾವು ಅಧಿಕಾರಕ್ಕೆ ಬಂದಿದ್ದೇವೆ ಎಂಬುದು ಸುಳ್ಳು ಎಂದು ಸಮರ್ಥಿಸಿಕೊಂಡರು.

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸಿ ರಾಷ್ಟ್ರಪತಿ ಆಡಳಿತ ಹೇರುವ ಬಿಜೆಪಿಯವರ ಪ್ರಯತ್ನದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದೆಲ್ಲ ಸಾಧ್ಯವಿಲ್ಲ. ಪೊಲೀಸ್ ಇಲಾಖೆಯು ಸಮರ್ಥವಾಗಿ ಕಳೆದ ಒಂದೂವರೆ ವರ್ಷದಿಂದ ಶಾಂತಿಯನ್ನು ಕಾಪಾಡಿಕೊಂಡು ಬಂದಿದ್ದೇವೆ. ರಾಜ್ಯದಲ್ಲಿ ಶಾಂತಿ ಕದಡಲು ಅಥವಾ ಶಾಂತಿ ಭಂಗ ಮಾಡಲು ಪ್ರಯತ್ನಿಸಿದರೆ ಕಠಿಣವಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಅಷ್ಟು ಸುಲಭವಾಗಿ ಬಿಟ್ಟುಬಿಡುತ್ತೇವೆಯೇ ಎಂದು ಎಚ್ಚರಿಸಿದರು.

ಶಾಸಕರಿಗೆ 50 ಕೋಟಿ ರೂ. ಆಮಿಷದ ಕುರಿತು ಸಿಎಂ ಆರೋಪಕ್ಕೆ ಬಿಜೆಪಿಯವರು ದಾಖಲೆ ಕೇಳಿರುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ಯ ಸರ್ಕಾರದ ವಿರುದ್ಧ ಮಾಡಿರುವ 200 ಕೋಟಿ ರೂ. ಆರೋಪಕ್ಕೆ ದಾಖಲೆ ಕೊಟ್ಟಿದ್ದಾರೆಯೇ? ಇನ್ನಷ್ಟು ಜೋರಾಗಿ ಪ್ರತಿಭಟನೆ ಮಾಡುತ್ತೇವೆ, ರೂ. 200 ಕೋಟಿ ಆರೋಪಕ್ಕೆ ದಾಖಲೆಗಳನ್ನು ಕೊಡಿ ಎಂದು ರಾಜ್ಯ ಬಿಜೆಪಿ ಮುಖಂಡರು ಪ್ರಧಾನಮಂತ್ರಿಯನ್ನು ಕೇಳಲಿ. ಆನಂತರ ನಾವು ದಾಲೆಗಳನ್ನು ಕೊಡುತ್ತೇವೆ ಎಂದು ಟೀಕಿಸಿದರು.

ಮಹಾರಾಷ್ಟ್ರ ಚುನಾವಣೆಯಲ್ಲಿ ಮಹಾವಿಕಾಸ್ ಅಘಾಡಿ ಮೈತ್ರಿಕೂಟ ಗೆಲ್ಲುತ್ತದೆ. ಬಿಜೆಪಿಯವರು ರಾಜ್ಯದ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡಿರುವುದಕ್ಕೆ ದಾಖಲೆಗಳು ಬೇಕಲ್ಲವೇ. ಕಠಿಣವಾಗಿ ಕ್ರಮ ತೆಗೆದುಕೊಳ್ಳುತ್ತೇವೆ ಕೇಸ್ ದಾಖಲಿಸುವುದಾಗಿ ಎಂದು ಸಿಎಂ ಹೇಳಿದ್ದಾರೆ‌. ಗೃಹಲಕ್ಷ್ಮೀ ಯೋಜನೆಯಡಿ ಮಹಿಳೆಯರಿಗೆ 2 ಸಾವಿರ ರೂ, ಶಕ್ತಿ ಯೋಜನೆಯಲ್ಲಿ 3.50 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ‌. ಇದಕ್ಕೆ ಏನು ಮಾಡಿಲ್ಲ ಎಂದು ಹೇಳಿದರೆ ಹೇಗೆ ಎಂದು ಅವರು ಪ್ರಶ್ನೆ ಮಾಡಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+