ಶಾಲಾ ಪ್ರವೇಶಕ್ಕೆ ಡೊನೇಶನ್; ಕಠಿಣ ಕ್ರಮದ ಎಚ್ಚರಿಕೆ
ಬೆಂಗಳೂರು, ಮೇ 29: ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಅನುದಾನ ರಹಿತ ಅಥವಾ ಅನುದಾನಿತ ಶಾಲೆಗಳಲ್ಲಿ ಮಕ್ಕಳ ಪ್ರವೇಶಕ್ಕೆ ಡೊನೇಶನ್ ಪಡೆಯಲಾಗುತ್ತಿದೆ ಎಂಬ ದೂರುಗಳು ಬರುತ್ತಿವೆ. ಆದ್ದರಿಂದ ಯಾವುದೇ ರೀತಿಯ ಡೊನೇಶನ್ ಪಡೆಯುವಂತಿಲ್ಲ ಎಂದು ಸೂಚನೆ ನೀಡಲಾಗಿದೆ.
ಒಂದು ವೇಳೆ ಕಾನೂನುಬಾಹಿರವಾಗಿ ಡೊನೇಶನ್ ಪಡೆದಿರುವುದು ಕಂಡುಬಂದರೆ ಅಂತಹ ಶಾಲೆಗಳ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಪ್ರಸಕ್ತ ಶೈಕ್ಷಣಿಕ ಸಾಲಿಗೆ ಈಗಾಗಲೇ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ. ಕೆಲವು ಶಾಲೆಗಳಲ್ಲಿ ಡೊನೇಶನ್ ಪಡೆಯಲಾಗುತ್ತಿದೆ ಎಂದು ಸಾರ್ವಜನಿಕರಿಂದ ದೂರುಗಳು ಸಲ್ಲಿಕೆಯಾಗುತ್ತಿವೆ.

ನಿಯಮಾನುಸಾರ ಸರ್ಕಾರ ನಿಗದಿಪಡಿಸಿದ ಶುಲ್ಕಗಳನ್ನು ಮಾತ್ರ ಪಡೆದುಕೊಂಡು ಪ್ರವೇಶ ಕಲ್ಪಿಸಬೇಕು. ಒಂದು ವೇಳೆ ಕಾನೂನುಬಾಹಿರವಾಗಿ ಡೊನೇಶನ್ ಪಡೆದರೆ ಆರ್.ಟಿ.ಇ. ಕಾಯ್ದೆ ಪ್ರಕಾರ ಅಂತಹ ಶಾಲೆಗಳ ನೋಂದಣಿಯನ್ನು ರದ್ದುಪಡಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಡಳಿತಗಳು ಎಚ್ಚರಿಸಿವೆ.
ಪ್ರವೇಶ ಶುಲ್ಕ ಮಾಹಿತಿ: ಪಾಲಕರು ಹಾಗೂ ಸಾರ್ವಜನಿಕರ ಮಾಹಿತಿಗಾಗಿ ಪ್ರತಿಯೊಂದು ಶಾಲೆಯು ತನ್ನ ಸೂಚನಾ ಫಲಕದಲ್ಲಿ ಪ್ರವೇಶ ಶುಲ್ಕ ಕುರಿತು ಸ್ಪಷ್ಟ ಮಾಹಿತಿಯನ್ನು ಪ್ರದರ್ಶಿಸಬೇಕು. ಶಿಕ್ಷಣ ಹಕ್ಕು ಕಾಯ್ದೆ-2009 ರ ಸೆಕ್ಷನ್ -2(ಬಿ) ರಂತೆ ಎಲ್ಲಾ ಖಾಸಗಿ ಶಾಲೆಗಳು ತಾವು ಅಧಿಸೂಚಿಸಿದ ಶುಲ್ಕವನ್ನು ತಮ್ಮ ಶಾಲೆಯ ಅಂತರ್ಜಾಲ ತಾಣ, ಶಾಲಾ ನೋಟಿಸ್ ಬೋರ್ಡ್ ಹಾಗೂ ಇಲಾಖಾ ಅಂತರ್ಜಾಲ (ಎಸ್.ಎ.ಟಿ.ಎಸ್)ದಲ್ಲಿ ಪೋಷಕರು ಮತ್ತು ಸಾರ್ವಜನಿಕರಿಗೆ ಲಭ್ಯವಾಗುವಂತೆ ಪ್ರಕಟಿಸಬೇಕಿದೆ.
ಇದರಿಂದ ಪಾಲಕರು ಹಾಗೂ ಸಾರ್ವಜನಿಕರಿಗೆ ಪ್ರವೇಶ ಶುಲ್ಕದ ಬಗ್ಗೆ ಮಾಹಿತಿ ಲಭಿಸುವುದರಿಂದ ಪ್ರವೇಶ ಪ್ರಕ್ರಿಯೆ ಕುರಿತ ಗೊಂದಲವನ್ನು ಪರಿಹರಿಸಬಹುದು. ಯಾವುದೇ ಶಾಲೆಯು ಡೊನೇಶನ್ ಕೇಳಿದರೆ ಅಥವಾ ಡೊನೇಶನ್ ಪಡೆದುಕೊಂಡರೆ ಕೂಡಲೇ ಜಿಲ್ಲಾಧಿಕಾರಿ ಕಚೇರಿ ಅಥವಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ (ಡಿಡಿಪಿಐ) ಕಚೇರಿಗೆ ಸಾರ್ವಜನಿಕರು ದೂರು ಸಲ್ಲಿಸಬಹುದು.
ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ಆಯುಕ್ತರು ಈಗಾಗಲೇ ಶಾಲಾ ಶುಲ್ಕದ ವಿಚಾರದಲ್ಲಿ ಖಡಕ್ ಸೂಚನೆಯೊಂದನ್ನು ನೀಡಿದ್ದಾರೆ. ಈ ಕುರಿತು ಸುತ್ತೋಲೆಯಲ್ಲಿ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ನಿಗದಿಪಡಿಸಿರುವ ಶುಲ್ಕದ ವಿವರ ಪ್ರಕಟಿಸಬೇಕು ಎಂದು ತಿಳಿಸಿದ್ದು, ಶಿಕ್ಷಣ ಹಕ್ಕು ಕಾಯಿದೆ-2009 ಮತ್ತು ಕರ್ನಾಟಕ ಕಡ್ಡಾಯ ಮತ್ತು ಉಚಿತ ಪ್ರಾಥಮಿಕ ಶಿಕ್ಷಣ ಹಕ್ಕು ನಿಯಮಗಳು-2012 ಉಲ್ಲೇಖ ಮಾಡಲಾಗಿದೆ.
ದಾಖಲಾತಿ ಪ್ರಕ್ರಿಯೆ, ದಾಖಲಾತಿ ಶುಲ್ಕ ಮತ್ತು ಇನ್ನಿತರೆ ಶುಲ್ಕವನ್ನು ಪಡೆಯುವ ಸಂಬಂಧ ಶಿಕ್ಷಣ ಹಕ್ಕು ಕಾಯಿದೆ -2009 ರಲ್ಲಿನ ಉಲ್ಲೇಖವನ್ನು ವಿವರಿಸಲಾಗಿದೆ. ಶಿಕ್ಷಣ ಹಕ್ಕು ಕಾಯ್ದೆ-2009ರ ಸೆಕ್ಷನ್-2(b) ರಂತೆ ಎಲ್ಲಾ ಖಾಸಗಿ ಶಾಲೆಗಳು ತಾವು ಅಧಿಸೂಚಿಸಿದ ಶುಲ್ಕವನ್ನು ತಮ್ಮ ಶಾಲಾ ಜಾಲತಾಣದಲ್ಲಿ, ಶಾಲಾ ಸೂಚನಾ ಫಲಕದಲ್ಲಿ ಮತ್ತು ಇಲಾಖಾ ಜಾಲತಾಣದಲ್ಲಿ (SATS) ಸಾರ್ವಜನಿಕರು ಮತ್ತು ಪೋಷಕರಿಗೆ ಲಭ್ಯವಾಗುವಂತೆ ಪ್ರಕಟಪಡಿಸಲು ಹಾಗೂ ಶುಲ್ಕ ವಸೂಲಾತಿ ಮತ್ತು ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸೆಕ್ಷನ್-13ರ ಅಂಶಗಳನ್ನು ಕಡ್ಡಾಯವಾಗಿ ಪಾಲಿಸಲು ತಿಳಿಸಲಾಗಿದೆ.
ಯಾವುದೇ ಶಾಲೆಗಳು ಸನ್-2(b) ಮತ್ತು ಸೆಕ್ಷನ್ 13(1) ಅನ್ನು ಉಲ್ಲಂಘಿಸಿರುವ ಬಗ್ಗೆ ದೂರುಗಳು ದಾಖಲಾದಲ್ಲಿ, ಸೆಕ್ಷನ್ 13(2)a ಮತ್ತು ಸೆಕ್ಷನ್ 13(2)b ರಂತೆ ಹಾಗೂ ಕರ್ನಾಟಕ ಕಡ್ಡಾಯ ಮತ್ತು ಉಚಿತ ಪ್ರಾಥಮಿಕ ಶಿಕ್ಷಣ ಹಕ್ಕು ನಿಯಮಗಳು-2012 ರ ನಿಯಮ-23ರಲ್ಲಿ ತಿಳಿಸಿದಂತೆ ಅಗತ್ಯ ಕ್ರಮವಹಿಸಲು ಬಿಇಓಗಳಿಗೆ ಸೂಚನೆ ಕೊಡಲಾಗಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ












Click it and Unblock the Notifications