Breaking; ಮಲಪ್ರಭಾ ಡ್ಯಾಂನಿಂದ 6 ಸಾವಿರ ಕ್ಯುಸೆಕ್ ನೀರು ಬಿಡುಗಡೆ
ಬೆಳಗಾವಿ, ಏಪ್ರಿಲ್ 29; ಬೇಸಿಗೆಯ ಬಿಸಿ ಜನರಿಗೆ ತಟ್ಟಿದೆ. ಮಲಪ್ರಭಾ ಜಲಾಶಯದಿಂದ ಕುಡಿಯುವ ನೀರಿನ ಉದ್ದೇಶಕ್ಕಾಗಿ ನದಿಗೆ ನೀರು ಬಿಡಲಾಗಿದೆ. ನೀರನ್ನು ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಕೆ ಮಾಡಬೇಕು ಎಂದು ಮನವಿ ಮಾಡಲಾಗಿದೆ.
ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ಈ ಕುರಿತು ಫೇಸ್‌ಬುಕ್ ಪೋಸ್ಟ್ ಹಾಕಿದ್ದಾರೆ. ಇಂದು (ಶುಕ್ರವಾರ) ಮುಂಜಾನೆಯಿಂದ 6000 ಕ್ಯೂಸೆಕ್ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ನದಿಗೆ ಹರಿ ಬಿಡಲಾಗಿದೆ ಎಂದು ಹೇಳಿದ್ದಾರೆ.
ಮುಂದಿನ 15 ದಿನಗಳ ಕಾಲ ಗದಗ ಮತ್ತು ಬಾಗಲಕೋಟ ಜಿಲ್ಲೆಯ ವಿವಿಧ ಭಾಗಗಳಿಗೆ ಮತ್ತು ಗ್ರಾಮಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ನೀರನ್ನು ನದಿಗೆ ಹರಿ ಬಿಡಲಾಗಿದೆ. ದಯವಿಟ್ಟು ನೀರನ್ನು ಕೇವಲ ಕುಡಿಯುವ ನೀರಿಗಾಗಿ ಹಿತವಾಗಿ ಮಿತವಾಗಿ ಬಳಸಬೇಕೆಂದು ಕೋರುತ್ತೇನೆ ಎಂದು ಸಚಿವರು ಮನವಿ ಮಾಡಿದ್ದಾರೆ.

ಮಲಪ್ರಭಾ ನದಿಗೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ನವಿಲುತೀರ್ಥ ಬಳಿ ಜಲಾಶಯ ನಿರ್ಮಾಣ ಮಾಡಲಾಗಿದೆ. ಸವದತ್ತಿ, ಹುಬ್ಬಳ್ಳಿ-ಧಾರವಾಡ, ರಾಮದುರ್ಗ, ಬಾದಾಮಿ, ರೋಣ, ನವಲಗುಂದ, ಅಣ್ಣಿಗೇರಿ ಹಾಗೂ ಕುಂದಗೋಳ ಪಟ್ಟಣಗಳಿಗೆ ಕುಡಿಯುವ ನೀರು ಪೂರೈಕೆಗೆ ಇದೇ ಪ್ರಮುಖ ಮೂಲವಾಗಿದೆ.
ಮಲಪ್ರಭಾ ಜಲಾಶಯದಿಂದ ಇಂದು ಮುಂಜಾನೆಯಿಂದ 6000 ಕ್ಯೂಸೆಕ್ಸ್ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ನದಿಗೆ ಹರಿ ಬಿಡಲಾಗಿದೆ. ಮುಂದಿನ 15 ದಿನಗಳ ಕಾಲ ಗದಗ ಮತ್ತು ಬಾಗಲಕೋಟ ಜಿಲ್ಲೆಯ ವಿವಿಧ ಭಾಗಗಳಿಗೆ ಮತ್ತು ಗ್ರಾಮಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ನೀರನ್ನು ನದಿಗೆ ಹರಿ ಬಿಡಲಾಗಿದೆ. .
— Govind M Karjol (@GovindKarjol) April 29, 2022
ಜಲಾಶಯದ ಗರಿಷ್ಠ ಮಟ್ಟ 2054.75 ಅಡಿ. ಪ್ರಸ್ತುತ ಜಲಾಶಯದಲ್ಲಿ 2053.24ರಷ್ಟು ನೀರಿನ ಸಂಗ್ರಹವಿದೆ.












Click it and Unblock the Notifications