ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಮಲಪ್ರಭಾ ಡ್ಯಾಂನಿಂದ 6 ಸಾವಿರ ಕ್ಯುಸೆಕ್ ನೀರು ಬಿಡುಗಡೆ

|
Google Oneindia Kannada News

ಬೆಳಗಾವಿ, ಏಪ್ರಿಲ್ 29; ಬೇಸಿಗೆಯ ಬಿಸಿ ಜನರಿಗೆ ತಟ್ಟಿದೆ. ಮಲಪ್ರಭಾ ಜಲಾಶಯದಿಂದ ಕುಡಿಯುವ ನೀರಿನ ಉದ್ದೇಶಕ್ಕಾಗಿ ನದಿಗೆ ನೀರು ಬಿಡಲಾಗಿದೆ. ನೀರನ್ನು ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಕೆ ಮಾಡಬೇಕು ಎಂದು ಮನವಿ ಮಾಡಲಾಗಿದೆ.

ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ಈ ಕುರಿತು ಫೇಸ್‌ಬುಕ್ ಪೋಸ್ಟ್‌ ಹಾಕಿದ್ದಾರೆ. ಇಂದು (ಶುಕ್ರವಾರ) ಮುಂಜಾನೆಯಿಂದ 6000 ಕ್ಯೂಸೆಕ್ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ನದಿಗೆ ಹರಿ ಬಿಡಲಾಗಿದೆ ಎಂದು ಹೇಳಿದ್ದಾರೆ.

ಬಳ್ಳಾರಿ ನಗರದ ಕುಡಿಯುವ ನೀರಿನ ಸಮಸ್ಯೆಗೆ ಮುಕ್ತಿ ಬಳ್ಳಾರಿ ನಗರದ ಕುಡಿಯುವ ನೀರಿನ ಸಮಸ್ಯೆಗೆ ಮುಕ್ತಿ

ಮುಂದಿನ 15 ದಿನಗಳ ಕಾಲ ಗದಗ ಮತ್ತು ಬಾಗಲಕೋಟ ಜಿಲ್ಲೆಯ ವಿವಿಧ ಭಾಗಗಳಿಗೆ ಮತ್ತು ಗ್ರಾಮಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ನೀರನ್ನು ನದಿಗೆ ಹರಿ ಬಿಡಲಾಗಿದೆ. ದಯವಿಟ್ಟು ನೀರನ್ನು ಕೇವಲ ಕುಡಿಯುವ ನೀರಿಗಾಗಿ ಹಿತವಾಗಿ ಮಿತವಾಗಿ ಬಳಸಬೇಕೆಂದು ಕೋರುತ್ತೇನೆ ಎಂದು ಸಚಿವರು ಮನವಿ ಮಾಡಿದ್ದಾರೆ.

ಚಾಮರಾಜನಗರ; ಕುಡಿಯುವ ನೀರಿಗಾಗಿ ಕಾಡಂಚಿನ ಜನರ ಅಲೆದಾಟ ಚಾಮರಾಜನಗರ; ಕುಡಿಯುವ ನೀರಿಗಾಗಿ ಕಾಡಂಚಿನ ಜನರ ಅಲೆದಾಟ

Water Released From Malaprabha Dam For Drinking Purpose

ಮಲಪ್ರಭಾ ನದಿಗೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ನವಿಲುತೀರ್ಥ ಬಳಿ ಜಲಾಶಯ ನಿರ್ಮಾಣ ಮಾಡಲಾಗಿದೆ. ಸವದತ್ತಿ, ಹುಬ್ಬಳ್ಳಿ-ಧಾರವಾಡ, ರಾಮದುರ್ಗ, ಬಾದಾಮಿ, ರೋಣ, ನವಲಗುಂದ, ಅಣ್ಣಿಗೇರಿ ಹಾಗೂ ಕುಂದಗೋಳ ಪಟ್ಟಣಗಳಿಗೆ ಕುಡಿಯುವ ನೀರು ಪೂರೈಕೆಗೆ ಇದೇ ಪ್ರಮುಖ ಮೂಲವಾಗಿದೆ.

ಜಲಾಶಯದ ಗರಿಷ್ಠ ಮಟ್ಟ 2054.75 ಅಡಿ. ಪ್ರಸ್ತುತ ಜಲಾಶಯದಲ್ಲಿ 2053.24ರಷ್ಟು ನೀರಿನ ಸಂಗ್ರಹವಿದೆ.

English summary
Karnataka water resource minister Govind Karjol said that 6000 cusecs of water released from Malaprabha dam for drinking water purpose.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X