ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ಅರ್ಧ ಭಾಗಕ್ಕೆ ಜಲ ಸಂಕಟ: 7 ಜಿಲ್ಲೆಗಳಿಗೆ ರೆಡ್ ಅಲರ್ಟ್

|
Google Oneindia Kannada News

ಬೆಂಗಳೂರು, ಆಗಸ್ಟ್ 7: ಕರ್ನಾಟಕದ ಅರ್ಧ ಭಾಗಕ್ಕೆ ಜಲಸಂಕಟ ಬಂದಿದ್ದು, ಏಳು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಮುಂದಿನ ಮೂರು ದಿನಗಳ ಕಾಲ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಭಾಗಶಃ ಜಲಾವೃತವಾಗಿದೆ.

ಶಿವಮೊಗ್ಗದಲ್ಲಿ ಮಳೆಯಿಂದ ಎಲ್ಲೆಲ್ಲಿ ಏನೇನಾಯ್ತು?; ತಕ್ಷಣವೇ ಪರಿಹಾರಕ್ಕೆ ಸೂಚನೆಶಿವಮೊಗ್ಗದಲ್ಲಿ ಮಳೆಯಿಂದ ಎಲ್ಲೆಲ್ಲಿ ಏನೇನಾಯ್ತು?; ತಕ್ಷಣವೇ ಪರಿಹಾರಕ್ಕೆ ಸೂಚನೆ

ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕದ ಕೃಷ್ಣಾ ಸೇರಿ ಹಲವು ನದಿಗಳು ಉಕ್ಕಿ ಹರಿಯುತ್ತಿವೆ. ಇನ್ನೊಂದೆಡೆ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಕಳೆದ ಮೂರು ದಿನಗಳಿಂದ ಆಶ್ಲೇಷ ಮಳೆ ಅಬ್ಬರಿಸುತ್ತಿದೆ. ಒಟ್ಟಾರೆಯಾಗಿ ರಾಜ್ಯದ 15 ಜಿಲ್ಲೆಗಳು ಸಂಕಷ್ಟಕ್ಕೆ ತುತ್ತಾಗಿವೆ.

 ಎಲ್ಲೆಲ್ಲಿ ಭಾರಿ ಮಳೆಯಾಗುತ್ತಿದೆ

ಎಲ್ಲೆಲ್ಲಿ ಭಾರಿ ಮಳೆಯಾಗುತ್ತಿದೆ

ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳು ಮಹಾರಾಷ್ಟ್ರ ಮಳೆಯಿಂದಾಗಿ ಉಕ್ಕಿ ಹರಿಯುತ್ತಿರುವ ಕೃಷ್ಣೆ ಹಾಗೂ ಅದರ ಉಪನದಿಗಳ ಅಬ್ಬರಕ್ಕೆ ತುತ್ತಾಗಿದೆ. ಇದೇ ವೇಳೆ , ಮಲೆನಾಡು, ಕರಾವಳಿ ಭಾಗದ ಉತ್ತರ ಕನ್ನಡ, , ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ ಮತ್ತು ಧಾರವಾಡ , ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.

ಪ್ರವಾಹ ಪೀಡಿತ ಜಿಲ್ಲೆ ಜನರಿಗಾಗಿ ತುರ್ತು ಸಹಾಯವಾಣಿಪ್ರವಾಹ ಪೀಡಿತ ಜಿಲ್ಲೆ ಜನರಿಗಾಗಿ ತುರ್ತು ಸಹಾಯವಾಣಿ

 ಉತ್ತರ ಕರ್ನಾಟಕದಲ್ಲಿ 10 ಸಾವಿರಕ್ಕೂ ಹೆಚ್ಚು ಮಂದಿ ರಕ್ಷಣೆ

ಉತ್ತರ ಕರ್ನಾಟಕದಲ್ಲಿ 10 ಸಾವಿರಕ್ಕೂ ಹೆಚ್ಚು ಮಂದಿ ರಕ್ಷಣೆ

ಉತ್ತರ ಕರ್ನಾಟಕದಲ್ಲಿ ಹತ್ತು ಸಾವಿರಕ್ಕೂ ಅಧಿಕ ಮಂದಿಯನ್ನು ರಕ್ಷಿಸಲಾಗಿದೆ. ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ. ಕೃಷ್ಣೆ ಹಾಗೂ ಅದರ ಉಪನದಿಗಳ ಅಬ್ಬರಕ್ಕೆ ಬೆಳಗಾವಿ, ಬಾಗಲಕೋಟೆ, ರಾಯಚೂರು, ಯಾದಗಿರಿ ಜಿಲ್ಲೆಗಳಂತೂ 200ಕ್ಕೂ ಹೆಚ್ಚು ಗ್ರಾಮಗಳು ಜಲಾವೃತವಾಗಿದೆ.

ಉಕ್ಕಡಗಾತ್ರಿ ದೇವಾಲಯಕ್ಕೆ ಈಗ ಜಲದಿಗ್ಬಂಧನದ ಭೀತಿಉಕ್ಕಡಗಾತ್ರಿ ದೇವಾಲಯಕ್ಕೆ ಈಗ ಜಲದಿಗ್ಬಂಧನದ ಭೀತಿ

 7 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಹೆಚ್ಚು ಮಳೆ

7 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಹೆಚ್ಚು ಮಳೆ

ರಾಜ್ಯದ ಏಳು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ರಾಜ್ಯದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಮಲೆನಾಡು ಜಿಲ್ಲೆಗಳಾದ ಕೊಡಗು, ಉಡುಪಿ, ಮಲೆನಾಡು ಜಿಲ್ಲೆಗಳಾದ ಕೊಡಗು ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ನೆಚ್ಚರಿಕೆ ನೀಡಿದೆ.

 ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ

ಬಂಗಾಳ ಕೊಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಪಶ್ಚಿಮ ಕರಾವಳಿಯಲ್ಲಿ ಮುಂಗಾರು ತೀಕ್ಷ್ಣವಾಗಿದೆ.ಇದರ ಪರಿಣಾಮ ಆ.9ರವರೆಗೆ ರಾಜ್ಯಾದ್ಯಂತ ಭಾರಿ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.

ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಅರಬ್ಬಿ ಸಮುದ್ರ ಭಾಗಗಳಲ್ಲಿ ಗಾಳಿ ವೇಗ ಹೆಚ್ಚಾಗಿದೆ. ಲಕ್ಷದ್ವೀಪ, ಕೇರಳ ಹಾಗೂ ರಾಜ್ಯದಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮನವಿ ಮಾಡಿಕೊಳ್ಳಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

English summary
Karnataka rain: Half of Karnataka has in Water logging, and seven districts have been declared Red Alert.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X