Priyanka Gandhi: ಗೆದ್ದ ವಾರದಲ್ಲೇ ಕರ್ನಾಟಕಕ್ಕೆ ಶಾಕ್ ಕೊಟ್ಟ ಪ್ರಿಯಾಂಕಾ ಗಾಂಧಿ ವಾದ್ರಾ!
ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಮೂಲಕ ಇದೇ ಮೊದಲ ಬಾರಿ ಲೋಕಸಭೆ ಪ್ರವೇಶಿಸಿದ್ದಾರೆ. ಆದರೆ, ಲೋಕಸಭೆ ಪ್ರವೇಶ ಮಾಡುತ್ತಿದ್ದಂತೆಯೇ ಕನ್ನಡಿಗರಿಗೆ ಹಾಗೂ ಕರ್ನಾಟಕಕ್ಕೆ ಸಂಕಷ್ಟ ಎದುರಾಗಿದೆ. ಕರ್ನಾಟಕ ಹಾಗೂ ಕೇರಳದ ಬಂಡೀಪುರದಲ್ಲಿ ರಾತ್ರಿ ಸಂಚಾರ ಅವಕಾಶವನ್ನು ನಿಲ್ಲಿಸಲಾಗಿದೆ. ವನ್ಯಜೀವಿಗಳ ಹಿತದೃಷ್ಟಿಯಿಂದ ಈ ರೀತಿ ಕ್ರಮ ತೆಗೆದುಕೊಳ್ಳಲಾಗಿದೆ. ಆದರೆ, ಸಂಸದೆಯಾಗಿ ಆಯ್ಕೆಯಾದ ವಾರದ ಒಳಗೆ ಪ್ರಿಯಾಂಕಾ ಅವರು ಕನ್ನಡಿಗರಿಗೆ ಶಾಕ್ ಕೊಡುವುದಕ್ಕೆ ಮುಂದಾಗಿದ್ದಾರೆ. ಬಂಡೀಪುರದಲ್ಲಿ ರಾತ್ರಿ ವೇಳೆ ಸಂಚಾರಕ್ಕೆ ಅವಕಾಶ ಕೊಡುವುದೇ ನನ್ನ ಮೊದಲ ಆದ್ಯತೆ ಎಂದಿದ್ದು, ಈ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ.
ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಇದೀಗ ನಿಷೇಧವಿದೆ. ಇದು ಕರ್ನಾಟಕದ ಹಾಗೂ ಕೇರಳ ಭಾಗದ ವನ್ಯಜೀವಿಗಳ ಸಂರಕ್ಷಣೆಯ ಹಿತದೃಷ್ಟಿಯಿಂದ ತೆಗೆದುಕೊಂಡಿರುವ ನಿರ್ಧಾರವಾಗಿದೆ. ಈ ವಿಷಯವಾಗಿ ಮಾತನಾಡಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಇಲ್ಲಿ ರಾತ್ರಿ ಸಂಚಾರ ನಿರ್ಬಂಧವಿರುವುದು ನನಗೆ ಗೊತ್ತಿದೆ. ಅಲ್ಲದೇ ಇದರಿಂದ ನೀವು ಯಾವ ರೀತಿ ಸಮಸ್ಯೆ ಎದುರಿಸುತ್ತಿದ್ದೀರಿ ಎಂದೂ ಗೊತ್ತು. ಈ ವಿಷಯವನ್ನು ನನಗೆ ಬಿಟ್ಟು ಬಿಡಿ. ಇಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸುವುದು ನನ್ನ ಜವಾಬ್ದಾರಿ ಎಂದು ಹೇಳಿದ್ದಾರೆ.

ಬಂಡೀಪುರದಲ್ಲಿ ಮಾನವ - ಪ್ರಾಣಿ ಸಂಘರ್ಷ ಇದೆ. ಅಲ್ಲದೇ ರಾತ್ರಿ ವೇಳೆ ಇಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸುವುದರಿಂದ ವನ್ಯ ಜೀವಿಗಳು ಸಾವನ್ನಪ್ಪುತ್ತಿದ್ದವು. ಇದನ್ನು ತಪ್ಪಿಸುವ ಉದ್ದೇಶದಿಂದ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ರಾತ್ರಿ ಸಂಚಾರ ನಿಷೇಧ ಹೇರಲಾಗಿದೆ. ಆದರೆ, ಈ ಭಾಗದಲ್ಲಿ ರಾತ್ರಿ ವೇಳೆ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು ಎಂದು ಕೇರಳ ಸರ್ಕಾರ ಹಲವು ವರ್ಷಗಳಿಂದ ಈ ವಿಚಾರವಾಗಿ ಒತ್ತಡ ಹೇರುತ್ತಲ್ಲೇ ಇದೆ.
ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅಧಿಕಾರ ಅವಧಿಯಲ್ಲೂ ಕೇರಳ ಸರ್ಕಾರವು ಕರ್ನಾಟಕದೊಂದಿಗೆ ಈ ವಿಚಾರವಾಗಿ ಚರ್ಚೆ ನಡೆಸಿತ್ತು. ಆದರೆ, ಆಗಲೂ ಇದು ಇತ್ಯರ್ಥವಾಗಿಲ್ಲ. ಇನ್ನು ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಈ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆಗಳು ಆಗಿವೆ. ಇದಕ್ಕೆ ಮುಖ್ಯ ಕಾರಣ ವಯನಾಡ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಅವರು ಸಂಸದರಾಗಿದ್ದರು. ಇದೀಗ ಇಲ್ಲಿ ಪ್ರಿಯಾಂಕಾ ಗಾಂಧಿ ಅವರು ಸಂಸದೆಯಾಗಿದ್ದಾರೆ.
ಡಿ.ಕೆ ಶಿವಕುಮಾರ್ ಹೇಳಿಕೆ
ಇನ್ನು ಈಚೆಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ಈ ವಿಚಾರದಲ್ಲಿ ಚರ್ಚೆ ಮಾಡುವುದಕ್ಕೆ ಪ್ರಿಯಾಂಕಾ ಗಾಂಧಿ ಅವರು ಭೇಟಿ ಮಾಡುವಂತೆ ಸೂಚನೆ ನೀಡಿದ್ದಾರೆ ಎಂದು ಹೇಳಿದ್ದು ವರದಿಯಾಗಿತ್ತು. ಕರ್ನಾಟಕ ಸರ್ಕಾರವು 2009ರಲ್ಲೇ ಈ ಭಾಗದ ಎರಡು ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆ ವರೆಗೆ ವಾಹನಗಳ ಸಂಚಾರಕ್ಕೆ ನಿಷೇಧವೇರಿದೆ. ಕರ್ನಾಟಕ ಸರ್ಕಾರದ ಈ ಕ್ರಮವನ್ನು ಕೇರಳ ಸರ್ಕಾರವು ವಿರೋಧಿಸಿತ್ತು. ಆದರೆ, ಕೇರಳ ಸರ್ಕಾರದ ಒತ್ತಾಯಕ್ಕೆ ರಾಜ್ಯ ಸರ್ಕಾರವು ಮಣಿದಿಲ್ಲ. ಇದೀಗ ಪ್ರಿಯಾಂಕಾ ಗಾಂಧಿ ಅವರು ಈ ವಿಚಾರದಲ್ಲಿ ನೀಡಿರುವ ಭರವಸೆಯಿಂದ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರವು ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎನ್ನುವ ಕುತೂಹಲ ಎದುರಾಗಿದೆ.
ಪ್ರಿಯಾಂಕಾ ಗಾಂಧಿ ಅವರ ನಿರ್ಧಾರಕ್ಕೆ ಈಗಾಗಲೇ ಕರ್ನಾಟಕದ ಜನರಿಂದ ವಿರೋಧ ವ್ಯಕ್ತವಾಗಿದೆ. ಆಯ್ಕೆಯಾದ ಕೂಡಲೇ ಈ ರೀತಿ ಮಾನಾಡುತ್ತಿರುವುದು ಕನ್ನಡಿಗರಲ್ಲಿ ಬೇಸರವನ್ನುಂಟು ಮಾಡಿದೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ












Click it and Unblock the Notifications