ಬೆಂಗಳೂರಿಗೆ ಯೋಜನಾಬದ್ಧವಾಗಿ ಹೊಸ ರೂಪ ನೀಡಲು ʼಬ್ರ್ಯಾಂಡ್ ಬೆಂಗಳೂರುʼ ಯೋಜನೆ
ಬೆಳಗಾವಿ, ಡಿಸೆಂಬರ್ 05: ನಿರಂತರವಾಗಿ ಬೆಳೆಯುತ್ತಿರುವ ಬೆಂಗಳೂರಿಗೆ ಯೋಜನಾಬದ್ಧವಾಗಿ ಹೊಸರೂಪ ನೀಡಲು "ಬ್ರ್ಯಾಂಡ್ ಬೆಂಗಳೂರು" ಪರಿಕಲ್ಪನೆಯಲ್ಲಿ ಯೋಜನೆ ರೂಪಿಸಲಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ತಿಳಿಸಿದರು.
ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್ ಅವರು ಬ್ರ್ಯಾಂಡ್ ಬೆಂಗಳೂರು ಹಾಗೂ ಅದರ ಅಧ್ಯಯನ ವರದಿ ಸ್ವೀಕೃತಿ ಹಾಗೂ ಮುಂದಿನ ಕ್ರಮಗಳ ವಿಚಾರವಾಗಿ ಪ್ರಶ್ನೆಗೆ ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರ ಪರವಾಗಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಉತ್ತರಿಸಿ, ಬೆಂಗಳೂರು ನಗರ ಈ ಹಿಂದೆ ಗಾರ್ಡನ್ ಸಿಟಿ, ಪ್ಯಾರಡೈಸ್ ಆಫ್ ಪೆನ್ಷನರ್ಸ್, ಹಾಸ್ಪಿಟಲ್ ಹಬ್, ಐಟಿ ಹಬ್, ಎಜುಕೇಶನ್ ಹಬ್ ಆಗಿ ಹೆಸರು ಮಾಡಿತ್ತು. ಬೆಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿಂದೆ ವಿಶ್ವ ನಾಯಕರು ಬೆಂಗಳೂರಿಗೆ ಬಂದು ನಂತರ ದೇಶದ ಇತರೆ ನಗರಗಳಿಗೆ ತೆರಳುತ್ತಿದ್ದರು.

ಬೆಂಗಳೂರಿನ ಸ್ವರೂಪವನ್ನು ಬದಲಿಸಲು ನಮ್ಮ ಉಪಮುಖ್ಯಮಂತ್ರಿಗಳು ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆ ಮೂಲಕ ಕೆಲಸ ಮಾಡಲು ಮುಂದಾಗಿದ್ದಾರೆ. ಇದಕ್ಕಾಗಿ ಬೆಂಗಳೂರಿನ ಸಂಘ ಸಂಸ್ಥೆಗಳು, ಎಲ್ಲಾ ವರ್ಗದ ಜನರ ಅಭಿಪ್ರಾಯವನ್ನು ಸಂಗ್ರಹಿಸಿದ್ದಾರೆ. ಸುಗಮ ಸಂಚಾರ ಬೆಂಗಳೂರು, ಹಸಿರು ಬೆಂಗಳೂರು, ಆರೋಗ್ಯ ಬೆಂಗಳೂರು, ಜನಹಿತ ಬೆಂಗಳೂರು, ಶೈಕ್ಷಣಿಕ ಬೆಂಗಳೂರು, ತಂತ್ರಜ್ಞಾನ ಮತ್ತು ಮಾಹಿತಿ ಬೆಂಗಳೂರು, ಹಸಿರು ಬೆಂಗಳೂರು, ಜಲ ಸುರಕ್ಷ ಬೆಂಗಳೂರು ಬಗ್ಗೆ 70 ಸಾವಿರ ಸಲಹೆಗಳನ್ನು ಸಂಗ್ರಹಿಸಲಾಗಿದೆ. ಈ ಪ್ರತಿ ವಿಭಾಗಕ್ಕೆ ಸಂಬಂಧಿಸಿದ ಸಲಹೆಗಳನ್ನು ವಿವಿಧ ಸಂಸ್ಥೆಗಳಿಗೆ ಅಧ್ಯಯನಕ್ಕೆ ನೀಡಲಾಗಿದೆ. ಈ ಸಂಸ್ಥೆಗಳು ವರದಿ ನೀಡಿದ ನಂತರ ಈ ಕುರಿತ ಸಲಹೆಗಳನ್ನು ಜಾರಿಗೊಳಿಸಲಾಗುವುದು" ಎಂದರು.
"ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಬೃಹತ್ ಬೆಂಗಳೂರು ಸಮನ್ವಯ ಸಮಿತಿ ರಚನೆ ಮಾಡಲಾಗುವುದು. ಸರ್ಕಾರದ ಮುಖ್ಯಕಾರ್ಯದರ್ಶಿಗಳ ಮಟ್ಟದಲ್ಲಿ ಬೃಹತ್ ಬೆಂಗಳೂರು ಕಾರ್ಯಕಾರಿ ಸಮಿತಿ ಮಾಡಿ ಬೆಂಗಳೂರನ್ನು ಹೊಸ ದಿಕ್ಕಿನಲ್ಲಿ ತೆಗೆದುಕೊಂಡು ಹೋಗಲು ನಮ್ಮ ಉಪಮುಖ್ಯಮಂತ್ರಿಗಳು ಮುಂದಾಗಿದ್ದಾರೆ. ನಾವು ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಮುಂದೆ ಕೆಲಸ ಮಾಡುತ್ತೇವೆ ಎಂದು ಹೇಳುತ್ತಿದ್ದು, ಇದು ವಿರೋಧ ಪಕ್ಷದ ನಾಯಕರಿಗೆ ಅರ್ಥವಾಗುತ್ತಿಲ್ಲ.
ಬೆಂಗಳೂರಿನ ಅಭಿವೃದ್ಧಿಯನ್ನು ಯೋಜನಾ ಬದ್ಧವಾಗಿ ಮಾಡಲು ನಾವು ಬದ್ಧ. ಇದಕ್ಕೆ ಎಲ್ಲಾ ಪಕ್ಷಗಳ ಸಹಕಾರ ಮುಖ್ಯ. ಬೆಂಗಳೂರಿನ ಅಭಿವೃದ್ಧಿ ವಿಚಾರದಲ್ಲಿ ಏನೂ ಕೆಲಸ ಆಗಿಲ್ಲ ಎನ್ನುತ್ತೀರಿ. ನಿಮ್ಮ ಸರ್ಕಾರ 25 ಸಾವಿರ ಕೋಟಿ ಸಾಲ ಮಾಡಿಟ್ಟು ಹೋಗಿದ್ದೀರಿ. ಅದರ ಜೊತೆಗೆ ಬಿಲ್ ಬಾಕಿ. ನಗರೊತ್ಥಾನ, ವಾರ್ಡ್ ಅನುದಾನ ಸೇರಿದಂತೆ ಸಾಲ ಹೆಚ್ಚು ಮಾಡಿದ್ದೀರಿ. ಮುನಿರತ್ನ ಅವರು ಮೆಲ್ಸೇತುವೆ ವಿಚಾರವಾಗಿ ಮಾತನಾಡುತ್ತಿದ್ದರು. ಇದೇ ಚಾಲುಕ್ಯ ಸರ್ಕಲ್ ಮೇಲ್ಸೆತುವೆಗೆ ವಿರೋಧ ಮಾಡಿದವರೇ ಬಿಜೆಪಿಯವರು" ಎಂದು ವಿರೋಧ ಪಕ್ಷಗಳ ಟೀಕೆಗೆ ತಿರುಗೇಟು ನೀಡಿದರು.
-
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್












Click it and Unblock the Notifications