Puneeth Rajkumar: ಪುನೀತ್ ರಾಜಕುಮಾರ್ ಅವರ ಹೆಸರಿನಲ್ಲಿ ಹೃದಯ ಜ್ಯೋತಿ ಯೋಜನೆ!
ಬೆಂಗಳೂರು, ಅಕ್ಟೋಬರ್ 31: ಪುನಿತ್ ರಾಜಕುಮಾರ್ ಅವರ ಹೆಸರಿನಲ್ಲೇ ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯನ್ನ ನಾವು ಅನುಷ್ಠಾನಕ್ಕೆ ತರ್ತಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು,ಇತ್ತಿಚೆಗೆ ಯುವಕರು ಹೆಚ್ಚು ಹೃದಯಾಘಾತಕ್ಕೆ ಒಳಗಾಗ್ತಿರೋದನ್ನ ನಾವು ನೋಡ್ತಿದ್ದೇವೆ. ಅದ್ಯಾಯನದ ಪ್ರಕಾರ ಹೃದಯಾಘಾತಕ್ಕೆ ಈಡಾಗುವರಲ್ಲಿ ಶೇ 35 ರಷ್ಟು ಮಂದಿ 40 ರ ಆಸುಪಾಸಿನ ವಯಸ್ಸಿನವರು ಎಂಬುದು ಕಳವಳಿಕಾರಿ ಸಂಗತಿ ಎಂದು ಗುಂಡೂರಾವ್ ಹೇಳಿದರು.

ಹೃದಯಾಘಾತ ಸಂದರ್ಭಗಳಲ್ಲಿ ಸಾಧ್ಯವಾದಷ್ಟು ಜೀವಗಳನ್ನ ಉಳಿಸಬೇಕು. ಮತ್ತೆ ಗೋಲ್ಡನ್ hour ಒಳಗೆ, ಸಕಾಲಕ್ಕೆ ಅವರಿಗೆ ಚಿಕಿತ್ಸೆ ದೊರೆಯಬೇಕು. ಈ ನಿಟ್ಟಿನಲ್ಲಿ ನಮ್ಮ ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆಯಿಟ್ಟಿದೆ. ಎರಡು ರೀತಿಯಲ್ಲಿ ಕಾರ್ಯಕ್ರಮ ಜಾರಿಗೆ ತರಲಾಗ್ತಿದೆ. Hub ಅಂಡ್ spoke ಮಾದರಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ AED ಸಾಧನಗಳಗಳನ್ನ ಅಳವಡಿಸುವುದು. Hub ಮತ್ತು spoke ಕೇಂದ್ರಗಳ ಮಾದರಿ, ಹಠಾತ್ ಹೃದಯಾಘಾತಗಳನ್ನ ತಡೆಯುವಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಲಿದೆ.
85 ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳನ್ನ SPOKE ಕೇಂದ್ರಗಳನ್ನಾಗಿ ರೂಪಿಸುತ್ತಿದ್ದೇವೆ. ಜಯದೇವಾ ಹೃದ್ರೋಗ ಸಂಸ್ಥೆ ಹಾಗೂ ವೈದ್ಯಕೀಯ ಕಾಲೇಜು ಆಸ್ಪತ್ರೆಗಳು ಸೇರಿದಂತೆ ಒಟ್ಟು 16 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ 10 hub ಗಳನ್ನ ರಚಿಸಲಾಗಿದೆ.
ಯಾರಿಗೇ ಎದೆನೋವು ಕಾಣಿಸಿಕೊಂಡ್ರೂ, ಅವರು ನಮ್ಮ SPOKE ಕೇಂದ್ರಗಳಿಗೆ ಭೇಟಿ ನೀಡಿದರೆ ತಕ್ಷಣ ECG ಮಾಡಲಾಗುತ್ತೆ. ಜೊತೆಗೆ AI ತಂತ್ರಜ್ಞಾನದ ಮೂಲಕ ಅವರ ಪರಿಸ್ಥಿತಿ ಕ್ರಿಟಿಕಲ್ ಇದೆಯಾ, ಇಲ್ವಾ ಅನ್ನೋದನ್ನ ಸ್ಥಳದಲ್ಲಯೇ ನಾಲ್ಕರಿಂದ ಐದು ನಿಮಿಷದೊಳಗೆ ಪತ್ತೆ ಹಚ್ಚಲಾಗುತ್ತೆ. Tricog ಸಂಸ್ಥೆಯವರ AI ತಂತ್ರಜ್ಞಾನದ ಸಹಾಯ ಪಡೆದು ಕ್ರಿಟಿಕಲ್ ಅಥವಾ ನಾನ್ ಕ್ರಿಟಿಕಲ್ ಅನ್ನೋದನ್ನ ಪತ್ತೆ ಹಚ್ಚುವ ವ್ಯವಸ್ಥೆ ಕಲ್ಪಿಸಲಾಗಿದೆ.

ಯಾರು ಕ್ರಿಟಿಕಲ್ ಹಂತದಲ್ಲಿದ್ದಾರೆ, ಅವರಿಗೆ SPOKE ಕೇಂದ್ರಗಳಲ್ಲೇ ಅಂದ್ರೆ ತಾಲೂಕು ಆಸ್ಪತ್ರೆಗಳಲ್ಲೇ ಉಚಿತವಾಗಿ Tenecteplase ಇಂಜೆಕ್ಷನ್ ನ ಕೊಡಲಾಗುತ್ತೆ.. ಈ ಇಂಜೆಕ್ಷನ್ ಹಠಾತ್ ಹೃದಯಾಘಾತ ಆಗುವುದನ್ನ ತಡೆಯುವಲ್ಲಿ ಅತ್ಯಂತ ಪರಿಣಾಮಕಾರಿಯಾಗಿದೆ. ಹೀಗಾಗಿ ಕ್ರಿಟಿಕಲ್ ಹಂತದಲ್ಲಿ ಇರುವವರಿಗೆ ತಕ್ಷಣಕ್ಕೆ ಹಾರ್ಟ್ ಅಟ್ಯಾಕ್ ಆಗದಂತೆ ನೋಡಿಕೊಳ್ಳುವಲ್ಲಿ ಈ ಚಿಕಿತ್ಸೆ ಸಹಕಾರಿಯಾಗಲಿದೆ.
ತಾಲೂಕು ಅಥವಾ ಜಿಲ್ಲಾಸ್ಪತ್ರೆಯ Spoke ಕೇಂದ್ರಗಳಲ್ಲಿ ಚಿಕಿತ್ಸೆ ಪಡೆದ ನಂತರ ಹೆಚ್ಚಿನ ಚಿಕಿತ್ಸೆಗೆ ನಾವು ಸೂಪರ್ ಸ್ಪಾಷಾಲಿಟಿ ಆಸ್ಪತ್ರೆಯ Hub ಕೇಂದ್ರಗಳಿಗೆ ಅಂಬ್ಯುಲೆನ್ಸ್ ಸಹಾಯದೊಂದಿಗೆ ಕಳಿಸಿಕೊಡ್ತೇವೆ. ಅಲ್ಲಿ ರೋಗಿಗಳಿಗೆ ಹೆಚ್ಚಿನ ವೈದ್ಯಕೀಯ ಸೇವೆಯನ್ನ ಕಲ್ಪಿಸಲಾಗುತ್ತೆ. ಆಂಜಿಯೋಗ್ರಾಮ್ ಅಥವಾ ಆ್ಯಂಜಿಯೋಪ್ಲ್ಯಾಸ್ಟಿ, ಸೇರಿದಂತೆ ಉನ್ನತ ಮಟ್ಟದ ಹೃದಯ ಚಿಕಿತ್ಸೆಯನ್ನ ಈ hub ಕೇಂದ್ರಗಳಲ್ಲಿ ಪಡೆಯಬಹುದು.
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ Hub ಗಳಲ್ಲೂ ಕೂಡಾ ಬಿ.ಪಿ.ಎಲ್ ಕಾರ್ಡುದಾರರಿಗೆ ಉಚಿತ ಚಿಕಿತ್ಸೆ ದೊರೆಯಲಿದೆ. APL ಕಾರ್ಡುದಾರರು ನಮ್ಮ ಆರೋಗ್ಯ ಕರ್ನಾಟಕ ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಅಡಿಯಲ್ಲಿ ಉಚಿತ ಚಿಕಿತ್ಸೆ ಪಡೆಯಬಹುದು. ಜಯದೇವಾ ಹೃದ್ರೋಗ ಸಂಸ್ಥೆಯ ಬೆಂಗಳೂರು, ಮೈಸೂರು ಮತ್ತು ಕಲಬುರಗಿ ಆಸ್ಪತ್ರೆಗಳ ಮೂರು ಹಬ್ ಗಳ ವ್ಯಾಪ್ತಿಗೆ 45 spoke ಕೇಂದ್ರಗಳನ್ನ ಸಂಪರ್ಕಿಸಲಾಗಿದೆ. ಇವುಗಳಲ್ಲಿ 35 ತಾಲೂಕು ಆಸ್ಪತ್ರೆಗಳು ಮತ್ತು 10 ಜಿಲ್ಲಾಸ್ಪತ್ರೆಗಳು ಸೇರಿವೆ.

ಇನ್ನು, ನಮ್ಮ ವೈದ್ಯಕೀಯ ಕಾಲೇಜು ಆಸ್ಪತ್ರೆಗಳು ಮತ್ತು ಕೆಲವು ಖಾಸಗಿ ವೈದ್ಯಕೀಯ ಸಂಸ್ಥೆಗಳ ಸಹಕಾರದಲ್ಲಿ 13 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನ ಒಳಗೊಂಡ 7 hub ಗಳನ್ನ ರಚಿಸಿದ್ದೇವೆ. ಇವುಗಳ ವ್ಯಾಪ್ತಿಗೆ, 40 spoke ಕೇಂದ್ರಗಳನ್ನ ಲಿಂಕ್ ಮಾಡಲಾಗಿದೆ. ಇದರಲ್ಲಿ 34 ತಾಲೂಕು ಮತ್ತು 6 ಜಿಲ್ಲಾಸ್ಪತ್ರೆಗಳು ಸೇರಿವೆ. ಈ ಕೇಂದ್ರಗಳ ಸಂಪೂರ್ಣ ವಿವರ ಹೀಗಿದೆ.
ದಕ್ಷಿಣ ಕನ್ನಡ ಹಬ್ - Yenepoya hospital/KMC manipal/father muller ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು.
Spoke ಕೇಂದ್ರಗಳು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಸ್ಪತ್ರೆ, ಸುಳ್ಯ, ಬೆಳ್ತಂಗಡಿ, ಕುಂದಾಪುರ, ಕಾರ್ಕಳ ತಾಲೂಕು ಆಸ್ಪತ್ರೆ.
ಶಿವಮೊಗ್ಗ ಹಬ್ : sahyadri narayana hospital/SIMS ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು
Spoke ಕೇಂದ್ರಗಳು : ಸಾಗರ, ತೀರ್ಥಹಳ್ಳಿ, ಸೊರಬ, ಕಡೂರು, ಕೊಪ್ಪ, ತರಿಕೆರೆ ತಾಲೂಕು ಆಸ್ಪತ್ರೆಗಳು
ದಾವಣಗೆರೆ ಹಬ್
NH shamanuru ShivaShankarappa institute/Basaveswara medical college ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು.
Spoke ಕೇಂದ್ರಗಳು : ಹರಿಹರ, ಜಗಳೂರು, ಹಾವೇರಿ, ಶಿಗ್ಗಾವ್, ಚಳ್ಳಕೆರೆ ತಾಲೂಕು ಆಸ್ಪತ್ರೆಗಳು ಮತ್ತು ಚಿತ್ರದುರ್ಗ ಜಿಲ್ಲಾಸ್ಪತ್ರೆ.
ಬಳ್ಳಾರಿ ಹಬ್
VIMS ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ.
Spoke ಕೇಂದ್ರಗಳು : ಸಿರಗುಪ್ಪ, ಕೂಡ್ಲಗಿ, ಹೊಸಪೇಟೆ, ಹೆಚ್.ಬಿ ಹಳ್ಳಿ ತಾಲೂಕು ಆಸ್ಪತ್ರೆಗಳು.
ಧಾರವಾಡ ಹಬ್
SDM Narayana Heart center/ KIMS Hubli ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ.
Spoke ಕೇಂದ್ರಗಳು : ಧಾರವಾಡ ಜಿಲ್ಲಾಸ್ಪತ್ರೆ, ಕುಂದಗೋಳ, ಯಲ್ಲಾಪುರ, ಹಳಿಯಾಳ, ನರಗುಂದ, ಶಿರಹಟ್ಟಿ ತಾಲೂಕು ಆಸ್ಪತ್ರೆಗಳು.
ಬಾಗಲಕೋಟೆ ಹಬ್
S Nijalingappa medical college hospital ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ.
Spoke ಕೇಂದ್ರಗಳು : ಬಾಗಲಕೋಟೆ ಜಿಲ್ಲಾಸ್ಪತ್ರೆ,
ಮೂದೋಳ್, ಹುನುಗುಂದ, ಯಲಬುರ್ಗಾ, ಕುಷ್ಟಗಿ ತಾಲೂಕು ಆಸ್ಪತ್ರೆಗಳು.
ಬೆಳಗಾವಿ ಹಬ್
KLE prabhakar kore hospital ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ.
Spoke ಕೇಂದ್ರಗಳು : ಬೈಲಹೊಂಗಲ, ಸವದತ್ತಿ, ರಾಮದುರ್ಗಾ, ಗೋಕಾಕ್, ನಿಪ್ಪಾಣಿ, ಹುಕ್ಕೇರಿ, ಖಾನಾಪುರ ತಾಲೂಕು ಆಸ್ಪತ್ರೆಗಳು.
ಬೆಂಗಳೂರು ಹಬ್
ಜಯದೇವಾ ಹೃದ್ರೋಗ ಸಂಸ್ಥೆ ಬೆಂಗಳೂರು.
Spoke ಕೇಂದ್ರಗಳು : ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ ಜಿಲ್ಲಾಸ್ಪತ್ರೆಗಳು.
ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ, ಕನಕಪುರ, ಮಾಗಡಿ, ತಾಲೂಕು ಆಸ್ಪತ್ರೆಗಳು.
ಚಿಂತಾಮಣಿ, ಕೊರಟಗೆರೆ, ಶಿರಾ, ಮಧುಗಿರಿ, ಮಾಲೂರು, ಶ್ರೀನಿವಾಸಪುರ ಸರ್ಕಾರ ಆಸ್ಪತ್ರೆಗಳು.
ಮೈಸೂರು ಹಬ್
ಜಯದೇವಾ ಆಸ್ಪತ್ರೆ, ಮೈಸೂರು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ.
Spoke ಕೇಂದ್ರಗಳು : ಮಂಡ್ಯ, ಹಾಸನ, ಮಡಿಕೆರಿ, ಚಾಮರಾಜನಗರ ಜಿಲ್ಲಾಸ್ಪತ್ರೆಗಳು
ಕೆ.ಆರ್ ನಗರ, ಹುಣಸೂರು, ಪಿರ್ಯಾಪಟ್ಟಣ, ಹೆಚ್.ಡಿ ಕೋಟೆ, ನಂಜನಗೂಡು, ಟಿ. ನರಸಿಪುರಾ, ತಾಲೂಕು ಆಸ್ಪತ್ರೆಗಳು. ಚೆನ್ನರಾಯಪಟ್ಟಣ, ಎಸ್.ಆರ್ ಪಾಟ್ನಾ, ಕೆ.ಆರ್ ಪೇಟೆ, ಪಾಂಡವಪುರ, ಹೊಳೆನರಸಿಪುರ ಸರ್ಕಾರಿ ಆಸ್ಪತ್ರೆಗಳು.
ಕಲಬುರಗಿ ಹಬ್
ಜಯದೇವಾ ಆಸ್ಪತ್ರೆ, ಕಲಬುರಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ.
Spoke ಕೇಂದ್ರಗಳು : ಬೀದರ್, ಯಾದಗಿರಿ ಜಿಲ್ಲಾಸ್ಪತ್ರೆಗಳು.
ಅಳಂದಾ, ಅಫ್ಜಲ್ ಪುರ, ಜೇವರ್ಗಿ, ಸೇಡಂ, ಚಿತ್ತಾಪುರ, ಚಿಂಚೋಳಿ, ಸಿಂದಗಿ, ಹುಮನಾಬಾದ್, ಬಾಲ್ಕಿ, ಬಸವಕಲ್ಯಾಣ, ಶೋಲಾಪುರ್, ಶಾಹಾಪುರ, ದೇವದುರ್ಗಾ ತಾಲೂಕು ಆಸ್ಪತ್ರೆಗಳು.
ಒಟ್ಟಾರೆ ರಾಜ್ಯದ 31 ಜಿಲ್ಲೆಗಳ ವ್ಯಾಪ್ತಿಯಲ್ಲಿ 10 ಹಬ್ಸ್, ಹಾಗೂ 85 ತಾಲೂಕು ಮತ್ತು ಜಿಲ್ಲಾಸ್ಪತ್ರೆಗಳಲ್ಲಿ spoke ಕೇಂದ್ರಗಳನ್ನ ರೂಪಿಸುವ ಮೂಲಕ, ಹಠಾತ್ ಹೃದಯಘಾತಕ್ಕೆ ಒಳಗಾಗುವವರ ಜೀವ ಉಳಿಸುವಂತ ಒಂದು ಪರಿಣಾಮಕಾರಿ ಚಿಕಿತ್ಸಾ ಕಾರ್ಯಕ್ರಮವನ್ನ ಪುನಿತ್ ರಾಜಕುಮಾರ್ ಹೆಸರಿನಲ್ಲಿ ಜಾರಿಗೆ ತರ್ತಿದ್ದೇವೆ.












Click it and Unblock the Notifications