ಬಿಜೆಪಿ ವಿರುದ್ದ ಸಿಡಿದೆದ್ದ ಹೆಚ್ಚಿಕೆ; ನನಗೂ ಬಿಜೆಪಿ ಜೊತೆ ಹೋಗುವ ದಾರಿದ್ರ್ಯ ಬಂದಿಲ್ಲ: ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರು, ಆಗಸ್ಟ್ 05: ನಮಗೂ ಬಿಜೆಪಿ ಜತೆ ಹೋಗುವ ದಾರಿದ್ಯ್ರ ಬಂದಿಲ್ಲ. ನಾನು ಕಾರ್ಯಕರ್ತರಿಗೆ ಹೇಳುತ್ತೆನೆ, ಸದನದಲ್ಲಿ ಸರ್ಕಾರದ ವಿರುದ್ದ ಹೋರಾಟ ಮಾಡುತ್ತಿದ್ದೇನೆ ಎಂದು ಬಿಜೆಪಿ ವಿರುದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಜೆ ಪಿ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಜೊತೆ ಹೋಗುವ ದಾರಿದ್ರ್ಯ ಬಂದಿಲ್ಲ ಎಂದು ಬಿಜೆಪಿಯ ಮಾಜಿ ಸಚಿವರೊಬ್ಬರು ನೀಡಿರುವ ಹೇಳಿಕೆ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಬಿಜೆಪಿ ಅಧಿಕೃತ ವಿರೋಧ ಪಕ್ಷ, ಕೆಲವೊಮ್ಮೆ ಅವರ ಜತೆ ಸೇರಿ ಹೋರಾಟ ಮಾಡಬೇಕಾಗುತ್ತದೆ. ಹಾಗೆಂದ ಮಾತ್ರಕ್ಕೆ ಯಾರ ಬಳಿಗೂ ಭಿಕ್ಷೆ ಬೇಡುವ ಪರಿಸ್ಥಿತಿ ಇಲ್ಲ. ನಾನು ಯಾರ ಮನೆಯ ಬಾಗಿಲಿಗೂ ಹೋಗಲ್ಲ. ನಮ್ಮ ರಾಜ್ಯಕ್ಕೆ ಕಾಂಗ್ರೆಸ್ ಎಷ್ಟು ದ್ರೋಹ ಮಾಡಿದೆಯೋ ಅಷ್ಟೇ ದ್ರೋಹವನ್ನು ಬಿಜೆಪಿ ಕೂಡ ಮಾಡಿದೆ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ ಅವರು, ನಾನು ಹಿಟ್ ಅಂಡ್ ರನ್ ಮಾಡುವ ವ್ಯಕ್ತಿ ಅಲ್ಲ. ನಡೆದಿರುವುದನ್ನು ನಾನು ಹೇಳಿದ್ದೇನೆ. ಮಿಸ್ಟರ್ ಸಿದ್ದರಾಮಯ್ಯ ನಿಮ್ಮಂತೆ ನಾನು ಮುಖ್ಯಮಂತ್ರಿ ಆಗಿದ್ದಾಗ ನನ್ನ ಸಹಿಯನ್ನು ಮಾರಾಟಕ್ಕೆ ಇಟ್ಟಿರಲಿಲ್ಲ ಎಂದು ಸಿದ್ದರಾಮಯ್ಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ನಾನು ಹಿಟ್ ಅಂಡ್ ರನ್ನಾ? ಯಾವುದರಲ್ಲಿ ಹಿಟ್ ಅಂಡ್ ರನ್? ತೋರಿಸಿ ನೋಡೋಣ. ಸುಮ್ಮನೆ ನನ್ನನ್ನು ಕೆಣಕಬೇಡಿ. ಹಿಟ್ ಅಂಡ್ ರನ್ ಮಾಡ್ತಾ ಇರೋದು ನೀವು. ಬಿಜೆಪಿ ಸರಕಾರದ ಮೇಲೆ 40% ಆರೋಪ ಮಾಡಿದಿರಿ. ಆ ಆರೋಪಗಳ ಕಥೆ ಏನಾಯಿತು? ಒಂದು ದಾಖಲೆಯನ್ನಾದರೂ ಹೊರಗೆ ಬಿಟ್ರಾ? ನಿಮ್ಮ ಯೋಗ್ಯತೆ ನನಗೆ ಗೊತ್ತಿಲ್ಲವೆ? ಎಂದು ಕಿಡಿಕಾರಿದರು.
ಬೆಂಗಳೂರು -ಮೈಸೂರು ಮೂಲಸೌಕರ್ಯ ಕಾರಿಡಾರ್ ಯೋಜನೆ (ನೈಸ್) ಅಕ್ರಮಗಳ ಕುರಿತ ಎಲ್ಲಾ ದಾಖಲೆಗಳನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಖುದ್ದು ಭೇಟಿಯಾಗಿ ಸಲ್ಲಿಸುತ್ತೇನೆ .ಅವರ ಭೇಟಿಯ ನಂತರ ಅದೇ ದಿನದಂದು ದೆಹಲಿಯಲ್ಲಿ ಈ ಅಕ್ರಮಗಳ ಎಲ್ಲಾ ದಾಖಲೆಗಳನ್ನು ಮಾಧ್ಯಮಗಳ ಮುಂದೆ ಬಿಡುಗಡೆ ಮಾಡುತ್ತೇನೆ ಹಾಗೂ ಈ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯ ಮಾಡುತ್ತೇನೆ ಎಂದು ಹೇಳಿದರು.
ರಾಜ್ಯ ವಿಧಾನಸಭೆಯಲ್ಲಿ ಈ ಬಗ್ಗೆ ಎಲ್ಲಾ ಮಾಹಿತಿಯನ್ನು ಬಿಚ್ಚಿಡುವ ಪ್ರಯತ್ನ ಮಾಡಿದೆ. ಅದಕ್ಕೆ ಅವಕಾಶ ಸಿಗಲಿಲ್ಲ. ರಾಜ್ಯದ ಹಿತ ಮತ್ತು ಈ ಯೋಜನೆಗಾಗಿ ಭೂಮಿ ಕಳೆದುಕೊಂಡ ರೈತರಿಗೆ ನ್ಯಾಯ ಕೊಡಿಸುವ ದೃಷ್ಟಿಯಿಂದ ನೇರವಾಗಿ ಪ್ರಧಾನಿ ಅವರನ್ನೇ ಭೇಟಿ ಆಗಲಿದ್ದೇನೆ. ಒಂದೆರಡು ದಿನದಲ್ಲಿ ಪ್ರಧಾನಿಗಳು ಹಾಗೂ ಗೃಹ ಸಚಿವರ ಭೇಟಿಗೆ ಸಮಯಾವಕಾಶ ಕೋರಲಾಗುವುದು ಎಂದರು.
ಮೂಲಸೌಕರ್ಯ ಹಾಗೂ ರೈತರ ಹೆಸರಿನಲ್ಲಿ ಕೋಟಿ ಕೋಟಿ ಲೂಟಿ ಹೊಡೆದಿದ್ದಾರೆ. ಹಣ ಮತ್ತು ಭೂಮಿಯನ್ನು ಕೊಳ್ಳೆ ಹೊಡೆದಿದ್ದಾರೆ. ಆ ಬಗ್ಗೆ ಎಲ್ಲಾ ದಾಖಲೆ ಸಂಗ್ರಹ ಮಾಡಿದ್ದಿನಿ. ನೇರವಾಗಿ ಪ್ರಧಾನಿ ಅವರಲ್ಲಿಯೇ ನ್ಯಾಯ ಕೇಳುತ್ತೇನೆ, ಅವರನ್ನೇ ಪ್ರಶ್ನೆ ಮಾಡುತ್ತೇನೆ. ನಮ್ಮ ರೈತರಿಗೆ ನ್ಯಾಯ ಕೊಡಿಸಿ ಎಂದು ಒತ್ತಾಯ ಮಾಡುತ್ತೇನೆ ಎಂದು ಹೇಳಿದರು.
ಈ ಸರಕಾರದಲ್ಲಿರುವ ಅತ್ಯಂತ ಪ್ರಭಾವಿಯೊಬ್ಬರು ಫೆರಿಫಿರಲ್ ರಿಂಗ್ ರೋಡ್ ಮಾಡಲು ನೈಸ್ ಜತೆ ಸೇರಿಕೊಂಡು ಏನೆಲ್ಲಾ ಕರ್ಮಕಾಂಡ ಮಾಡಿದ್ದಾರೆ ಎನ್ನುವುದು ಗೊತ್ತಿದೆ. ಸಣ್ಣಪುಟ್ಟ ಮನೆಗಳನ್ನು ಕಟ್ಟಿಕೊಂಡಿದ್ದ ಬಡವರನ್ನು ಒಕ್ಕಲೆಬ್ಬಿಸಲು ಹೊರಟಿದ್ದಾರೆ. ಆ ಮಹಾನುಭಾವರು ನನಗೂ ಒಮ್ಮೆ ಪೆನ್ ಹಿಡಿಯುವ ಅವಕಾಶ ಕೊಡಿ ಎಂದು ಕೇಳಿದ್ದು ಇದಕ್ಕೇನಾ? ಎಂದು ಪ್ರಶ್ನಿಸಿದರು.
ನೈಸ್ ಯೋಜನೆಯಲ್ಲಿ ಅಕ್ರಮಗಳ ಸರಣಿಯೇ ನಡೆದಿದೆ. ಯೋಜನೆಗೆ ಸ್ವಾಧೀನಕ್ಕೆ ಗುರುತಿಸಲಾಗಿದ್ದ, ಪ್ರಾಥಮಿಕ ಅಧಿಸೂಚನೆ ಮಾಡಲಾಗಿದ್ದ ಭೂಮಿಯನ್ನೇ ಖರೀದಿ ಮಾಡಿದ್ದ ಆ ಮಹಾನುಭಾವರಿಗೆ ಇದೆಲ್ಲವನ್ನೂ ಜೀರ್ಣ ಮಾಡುವ ತಾಕತ್ತು ಇದೆ. ನಾನು ಇಲ್ಲ ಎನ್ನಲು ಆಗುತ್ತದೆಯೇ ಎಂದು ಹೇಳಿದರು.












Click it and Unblock the Notifications