ಗೃಹ ಲಕ್ಷ್ಮಿಯರಿಗೆ ಬಿಗ್‌ ಶಾಕ್;‌ ಇನ್ಮುಂದೆ ಮೂರು ತಿಂಗಳಿಗೊಮ್ಮೆ 2000 ಹಣ ಕೊಡ್ತೇವೆ: ಗ್ಯಾರಂಟಿ ಸಮಿತಿ ಅಧ್ಯಕ್ಷ ಘೋಷಣೆ

ಮೈಸೂರು, ಜುಲೈ 11: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಒಂದಾಗಿದೆ. ಮಹಿಳೆಯರನ್ನು ಬೆಂಬಲಿಸಲು ಮತ್ತು ಅವರ ಜೀವನೋಪಾಯವನ್ನು ಸುಧಾರಿಸುವ ಉದ್ದೇಶದಿಂದ ಗೃಹಲಕ್ಷ್ಮಿ ಯೋಜನೆಯನ್ನು ರಾಜ್ಯ ಸರ್ಕಾರ ಪ್ರಾರಂಭಿಸಲಾಗಿದ್ದು, ಮಹಿಳೆಯರು ಈ ಯೋಜನೆಯಿಂದ ಬಂದ 2000 ರೂ. ಹಣವನ್ನು ಕೂಡಿಟ್ಟು ಮಕ್ಕಳ ಶಿಕ್ಷಣಕ್ಕೆ, ಗೃಹ ಬಳಕೆಯ ಉಪಕರಣಗಳ ಖರೀದಿಗೆ ಬಳಕೆ ಮಾಡಿದ ಹಲವಾರು ನಿದರ್ಶನಗಳನ್ನು ನಾವು ನೋಡಿದ್ದೇವೆ. ಸರ್ಕಾರ ರಚನೆಯ ಸಂದರ್ಭದಲ್ಲಿ ಸಿಎಂ ಹಾಗೂ ಡಿಸಿಎಂ ಪ್ರತಿ ತಿಂಗಳು 2000 ಹಣ ನಿಮ್ಮ ಖಾತೆಗೆ ಜಮಾ ಆಗುತ್ತೆ ಎಂದು ಹೇಳಿದ್ರು, ಆದರೆ ಇದೀಗ ಗೃಹಲಕ್ಷ್ಮಿಯರಿಗೆ ಬಿಗ್‌ ಶಾಕ್‌ ಎದುರಾಗಿದೆ.

ಹೌದು, ರಾಜ್ಯ ಕಾಂಗ್ರೆಸ್‌ ತಂದ ಐದು ಗ್ಯಾರಂಟಿ ಯೋಜನೆಗಳ ಫೈಕಿ ರಾಜ್ಯದ ಪ್ರತಿ ಮನೆಯ ಯಜಮಾನಿಗೆ 2000 ಹಣವನ್ನ ನೀಡಲಾಗುತ್ತಿತ್ತು. ಕಳೆದ ಎರಡು ವರ್ಷದಲ್ಲಿ ರಾಜ್ಯ ಸರ್ಕಾರ ಒಂದು ವರ್ಷಮಾತ್ರ ಮಹಿಳೆಯರ ಖಾತೆಗೆ 2000 ಹಣವನ್ನ ಜಮಾ ಮಾಡುತ್ತಾ ಬಂದಿದೆ. ಕಳದೆ ಐದಾರು ತಿಂಗಳಿನಿಂದ ಮಹಿಳೆಯರ ಖಾತೆಗೆ ಹಣ ಜಮಾ ಆಗುತ್ತಿಲ್ಲ. ಸರ್ಕಾರ ರಚನೆಯಾಗಿ ಎರಡು ವರ್ಷ ಪೂರೈಸಿದರು ಸಹ. ಗೃಹ ಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಒಂದಲ್ಲ ಒಂದು ಕಾರಣವನ್ನ ಸರ್ಕಾರ ನೀಡುತ್ತಲೇ ಇದೆ.

We deposit Rs 2000 into women s accounts every three months HM Revanna

ಈಗಾಗಲೇ ಹಲವು ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಸಾಮಾಜಿಕವಾಗಿ ಮಾದರಿಯಾಗಿದ್ದಾರೆ. ಆದರೆ ಇದೀಗ ಮೂರು ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಹಣ ಹಾಕುತ್ತೇವೆ ಪ್ರತಿ ತಿಂಗಳು ಹಣ ಹಾಕೋಕೆ ಕೆಲವು ತೊಡಕುಗಳಿವೆ ಎಂದು ಗ್ಯಾರಂಟಿ ಸಮಿತಿ ಅಧ್ಯಕ್ಷ ಹೆಚ್ಎಂ ರೇವಣ್ಣ ಅವರು ಶಾಕಿಂಗ್‌ ಹೇಳಿಕೆ ನೀಡಿದ್ದಾರೆ.

ಮೂರು ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಹಣ ಕೊಡುತ್ತಿದ್ದೇವೆ. ಜಿಎಸ್‌ಟಿ ವಿಚಾರದಲ್ಲಿ 1 ಲಕ್ಷ 20 ಸಾವಿರ ಜನರಿಗೆ ಹಣ ಹೋಗಿರಲಿಲ್ಲ. ಅದರಲ್ಲಿ ಈಗ 58 ಸಾವಿರ ಜನರ ಸಮಸ್ಯೆಯನ್ನ ಬಗೆಹರಿಸಿದ್ದೇವೆ. ಉಳಿದ ಜನರ ಸಮಸ್ಯೆ ಬಗೆ ಹರಿಸುತ್ತೇವೆ. ನಾವು ಅಧಿಕಾರಕ್ಕೆ ಬಂದಾಗಿನಿಂದ ಗೃಹಲಕ್ಷ್ಮಿ ಹಣ ನಿಲ್ಲಿಸಿಲ್ಲ. ಪ್ರತಿ ತಿಂಗಳು ಹಣ ಕೊಡೋದಕ್ಕೆ ಕೆಲವು ತೊಡಕುಗಳಿವೆ. ಹೀಗಾಗಿ ಪ್ರತಿ ತಿಂಗಳು ಹಣ ಕೊಡಲು ಆಗುತ್ತಿಲ್ಲ ಎನ್ನುವ ಮೂಲಕ ಪ್ರತಿ ತಿಂಗಳ ಗೃಹಲಕ್ಷ್ಮಿ ಹಣ ಕೊಡಲು ಆಗಲ್ಲ ಎಂದು ಪರೋಕ್ಷವಾಗಿ ಸ್ಪಷ್ಟಪಡಿಸಿದ್ದಾರೆ.

ಇನ್ನೂ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಿಎಂ ಬದಲಾವಣೆ ವಿಚಾರ ಹೈಕಮಾಂಡ್ ಮಟ್ಟದಲ್ಲಿ ಈ ಚರ್ಚೆ ನಡೆದಿಲ್ಲ. ಕೆಲವೊಂದಿಷ್ಟು ಗೊಂದಲಗಳು ಇತ್ತು. ಗೊಂದಲಗಳನ್ನು ಹೈಕಮಾಂಡ್ ಬಗೆಹರಿಸಿದೆ. ಸಿಎಂ ಕುರ್ಚಿಯ ವಿಚಾರದಲ್ಲಿ ನಾವು ಮಾಧ್ಯಮಗಳ ಮುಂದೆ ಮಾತನಾಡದಂತೆ ಹೈಕಮಾಂಡ್‌ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ. ಇನ್ನೂ ಸಭೆಗಳಲ್ಲಿ ಒಂದಿಬ್ಬರು ಶಾಸಕರ ಹೇಳಿಕೆಯ ಬಗ್ಗೆ ಚರ್ಚೆಯಾಗಿದೆ. ಯಾವ ಶಾಸಕರ ಬೆಂಬಲ ಯಾರಿಗೆ ಇದೆ ಎಂಬ ಪ್ರಶ್ನೆ ಈಗ ಯಾಕೆ ಬಂತು ಗೊತ್ತಿಲ್ಲ. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಜೋಡೆತ್ತಿನ ರೀತಿ ಪಕ್ಷ ಕಟ್ಟಿ ಪಕ್ಷವನ್ನ ಅಧಿಕಾರಕ್ಕೆ ತಂದಿದ್ದಾರೆ. ರಾಜಕಾರಣದಲ್ಲಿ ಎಲ್ಲರಿಗೂ ಆಸೆ ಇರುತ್ತದೆ. ಅಂತಿಮ ತೀರ್ಮಾನಗಳು ಹೈಕಮಾಂಡ್‌ಗೆ ಬಿಟ್ಟದ್ದು ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+