ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಎಸ್ವೈ ವಿಶ್ವಾಸಮತಕ್ಕೂ ಮುನ್ನ ಇದೇನು ಶೋಭಾ ಕರಂದ್ಲಾಜೆ ಹೇಳಿಕೆ

|
Google Oneindia Kannada News

Recommended Video

ಬಿಎಸ್ವೈ ವಿಶ್ವಾಸಮತಕ್ಕೂ ಮುನ್ನ ಇದೇನು ಶೋಭಾ ಕರಂದ್ಲಾಜೆ ಹೇಳಿಕೆ | Oneindia Kannada

ಬೆಂಗಳೂರು, ಜುಲೈ 27: ಆಷಾಢ ಕೊನೆಯ ಶುಕ್ರವಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಯಡಿಯೂರಪ್ಪ, ಸೋಮವಾರ, ಜುಲೈ 29ರಂದು ಬಹುಮತ ಸಾಬೀತು ಪಡಿಸುವುದಾಗಿ ಹೇಳಿದ್ದಾರೆ.

ಈ ನಡುವೆ, ಜೆಡಿಎಸ್ ಪಕ್ಷದ ಕೆಲವು ಶಾಸಕರು, ಬಿಜೆಪಿಗೆ ಬಾಹ್ಯ ಬೆಂಬಲ ನೀಡೋಣ ಎಂದು ಒತ್ತಾಯಿಸಿದ್ದಾರೆ ಎನ್ನುವ ಸುದ್ದಿಯ ನಡುವೆ, ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿಗೆ ಬಾಹ್ಯ ಬೆಂಬಲ ನೀಡಲು ಕುಮಾರಸ್ವಾಮಿಗೆ ಶಾಸಕರ ಸಲಹೆ ಬಿಜೆಪಿಗೆ ಬಾಹ್ಯ ಬೆಂಬಲ ನೀಡಲು ಕುಮಾರಸ್ವಾಮಿಗೆ ಶಾಸಕರ ಸಲಹೆ

' ನಮ್ಮ ಪಕ್ಷ ಸುಲಭವಾಗಿ ಬಹುಮತ ಸಾಬೀತು ಪಡಿಸಲಿದೆ. ಸ್ವತಂತ್ರವಾಗಿ ಅಧಿಕಾರ ರಚಿಸುವುದು ನಮ್ಮ ಆದ್ಯತೆ. ನಮಗೆ ಜೆಡಿಎಸ್ ಬಾಹ್ಯ ಬೆಂಬಲ ಬೇಕಾಗಿಲ್ಲ, ಅದರ ಅವಶ್ಯಕತೆಯೂ ನಮಗಿಲ್ಲ' ಎಂದು ಶೋಭಾ ಹೇಳಿದ್ದಾರೆ.

We Dont Want Outside Support From Jds, Bjp Mp Shobha Karandlaje Statement

'ಅತೃಪ್ತ ಶಾಸಕರ ರಾಜೀನಾಮೆ ಆಂಗೀಕಾರವಾದರೆ, ಅವರನ್ನು ಗೆಲ್ಲಿಸುವ ಹೊಣೆ ನಮ್ಮ ಮೇಲಿದೆ. ಯಾವ ಸಮಯದಲ್ಲೂ ಚುನಾವಣೆ ನಡೆದರೆ, ಜನತೆ ಬಿಜೆಪಿಯನ್ನು ಬೆಂಬಲಿಸಿದ್ದಾರೆ ಎನ್ನುವ ವಿಶ್ವಾಸ ನಮಗಿದೆ' ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಬೇಕೆಂದು ಕೆಲವು ಶಾಸಕರು ಹೇಳಿದ್ದರೆ ಇನ್ನು ಕೆಲವರು ಬಾಹ್ಯ ಬೆಂಬಲವನ್ನು ನೀಡಿ ಸರ್ಕಾರ ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳೋಣ ಎನ್ನುವ ಸಲಹೆಯನ್ನು ನೀಡಿದ್ದಾರೆ ಎನ್ನುವ ವಿಚಾರದಲ್ಲಿ ಶೋಭಾ ಪ್ರತಿಕ್ರಿಯೆ ನೀಡಿದ್ದಾರೆ.

ಸಿಎಂ ಆಗುತ್ತಿದ್ದಂತೆ ರೈತರಿಗೆ, ನೇಕಾರರಿಗೆ ಉಡುಗೊರೆ ಕೊಟ್ಟ ಯಡಿಯೂರಪ್ಪ ಸಿಎಂ ಆಗುತ್ತಿದ್ದಂತೆ ರೈತರಿಗೆ, ನೇಕಾರರಿಗೆ ಉಡುಗೊರೆ ಕೊಟ್ಟ ಯಡಿಯೂರಪ್ಪ

ಜೆಡಿಎಸ್ ಶಾಸಕಾಂಗ ಸಭೆಯ ನಂತರ, ಕೆಲವು ಶಾಸಕರು ಬಿಜೆಪಿ ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡೋಣ ಎಂದು, ಇನ್ನು ಕೆಲವರು ವಿರೋಧ ಪಕ್ಷದಲ್ಲಿ ಕೂತು, ಪಕ್ಷವನ್ನು ಗಟ್ಟಿಗೊಳಿಸಿಕೊಳ್ಳೋಣ ಎಂದು ಸಲಹೆ ನೀಡಿದ್ದಾರೆ.

ನಿರ್ಧಾರವು ಕುಮಾರಸ್ವಾಮಿ ಹಾಗೂ ದೇವೇಗೌಡ ಅವರಿಗೆ ಬಿಟ್ಟಿದ್ದಾಗಿದ್ದು, ಈ ಇಬ್ಬರೂ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆಂದು ಕಾದು ನೋಡಬೇಕಿದೆ ಎಂದು ಜಿ ಟಿ ದೇವೇಗೌಡ್ರು ಹೇಳಿಕೆಯನ್ನು ನೀಡಿದ್ದರು.

English summary
We don't want outside support from JDS, BJP MP Shobha Karandlaje statement. She said, we have sufficient numbers to prove the majortity.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X