ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಸಭಾ ಚುನಾವಣೆ ಮೈತ್ರಿ, ಮೌನ ಮುರಿದ ಸಿದ್ದರಾಮಯ್ಯ

|
Google Oneindia Kannada News

Recommended Video

Lok Sabha Elections 2019: ಲೋಕಸಭಾ ಚುನಾವಣೆ ಮೈತ್ರಿ, ಮೌನ ಮುರಿದ ಸಿದ್ದರಾಮಯ್ಯ | Oneindia Kannada

ಬೆಂಗಳೂರು, ಫೆಬ್ರವರಿ 21 : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯ ಬಗ್ಗೆ ಭಾರಿ ಚರ್ಚೆಗಳು ನಡೆಯುತ್ತಿದೆ. ಉಭಯ ಪಕ್ಷಗಳು ಸೀಟು ಹಂಚಿಕೆ ಸಂಬಂಧ ಇನ್ನೂ ಪ್ರಾಥಮಿಕ ಚರ್ಚೆಯನ್ನು ನಡೆಸಿವೆ.

ಮಾಜಿ ಮುಖ್ಯಮಂತ್ರಿ ಮತ್ತು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಬಗ್ಗೆ ಮೌನ ಮುರಿದಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ 'ವಿ ಆರ್ ನಾಟ್ ಬೆಗ್ಗರ್ಸ್' ಹೇಳಿಕೆ ಬಳಿಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್‌ ಜೊತೆಗಿನ ಮೈತ್ರಿ ಮುರಿಯುವ ಮಾತನಾಡಿದ ರೇವಣ್ಣ!ಕಾಂಗ್ರೆಸ್‌ ಜೊತೆಗಿನ ಮೈತ್ರಿ ಮುರಿಯುವ ಮಾತನಾಡಿದ ರೇವಣ್ಣ!

ಗುರುವಾರ @siddaramaiah ಟ್ವಿಟರ್ ಖಾತೆ ಮೂಲಕ ಸರಣಿ ಟ್ವೀಟ್‌ಗಳನ್ನು ಮಾಡಿರುವ ಸಿದ್ದರಾಮಯ್ಯ ಅವರು ಮೈತ್ರಿ ಬಗ್ಗೆ ಹಲವು ಸ್ಪಷ್ಟನೆಗಳನ್ನು ನೀಡಿದ್ದಾರೆ. ಎರಡು ದಿನದಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಸುವುದಾಗಿ ಹೇಳಿದ್ದಾರೆ.

ಲೋಕಸಭಾ ಚುನಾವಣೆ ಮೈತ್ರಿ : ಜೆಡಿಎಸ್‌ಗೆ ಸಿಗುವ 7 ಕ್ಷೇತ್ರಗಳ ಪಟ್ಟಿಲೋಕಸಭಾ ಚುನಾವಣೆ ಮೈತ್ರಿ : ಜೆಡಿಎಸ್‌ಗೆ ಸಿಗುವ 7 ಕ್ಷೇತ್ರಗಳ ಪಟ್ಟಿ

ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು, 'ಕಾಂಗ್ರೆಸ್ ನಾಯಕರಿಗೆ ಮೈತ್ರಿ ಇಷ್ಟವಿಲ್ಲದಿದ್ದರೆ ಫ್ರೆಂಡ್ಲಿ ಫೈಟ್' ಎಂದು ಬುಧವಾರ ಹೇಳಿಕೆ ನೀಡಿದ್ದರು. ಆದ್ದರಿಂದ, ಸಿದ್ದರಾಮಯ್ಯ ಅವರು ಟ್ವೀಟರ್ ಮೂಲಕ ಸ್ಪಷ್ಟನೆ ನೀಡಿರುವ ಸಾಧ್ಯತೆ ಇದೆ.

ಲೋಕಸಭಾ ಚುನಾವಣೆ : ಕಾಂಗ್ರೆಸ್ ಸಂಭಾವ್ಯ ಪಟ್ಟಿಯಲ್ಲಿ ಅಚ್ಚರಿಯ ಹೆಸರುಗಳುಲೋಕಸಭಾ ಚುನಾವಣೆ : ಕಾಂಗ್ರೆಸ್ ಸಂಭಾವ್ಯ ಪಟ್ಟಿಯಲ್ಲಿ ಅಚ್ಚರಿಯ ಹೆಸರುಗಳು

2 ದಿನದಲ್ಲಿ ಸಭೆ

'ಲೋಕಸಭಾ ಚುನಾವಣೆ ಸಿದ್ಧತೆ ಆರಂಭಿಸಿದ್ದೇವೆ. ಚುನಾವಣಾ ಸಮಿತಿ ಸಭೆಯನ್ನು ಒಮ್ಮೆ ನಡೆಸಲಾಗಿದೆ. ಸೀಟು ಹಂಚಿಕೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಎರಡು ದಿನದಲ್ಲಿ ಮತ್ತೆ ಸಭೆ ನಡೆಸಲಾಗುತ್ತದೆ' ಎಂದು ಟ್ವೀಟ್ ಮಾಡಿದ್ದಾರೆ.

ಸಿದ್ದರಾಮಯ್ಯ ಹೇಳಿದ್ದೇನು?

'ಸೀಟು ಹಂಚಿಕೆ ಬಗ್ಗೆ ಜೆಡಿಎಸ್ ನಾಯಕರು ಅತೃಪ್ತಿಗೊಂಡಿದ್ದಾರೆ ಎಂಬ ಪ್ರಶ್ನೆಯೇ ಇಲ್ಲ. ನಾವು ಈ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಇನ್ನೂ ಪ್ರಾಥಮಿಕ ಹಂತದ ಚರ್ಚೆ ನಡೆದಿದೆ. ಎಚ್.ಡಿ.ದೇವೇಗೌಡರ ಜೊತೆ ಇನ್ನು ಚರ್ಚೆ ಮಾಡಬೇಕಿದೆ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಯಾರೂ ಬೆಗ್ಗರ್ಸ್‌ ಅಲ್ಲ

'ಸಮ್ಮಿಶ್ರ ಸರ್ಕಾರದಲ್ಲಿ ಯಾರೂ ಬೆಗ್ಗರ್ಸ್‌ಗಳಿಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ವಿಷಯಗಳಿದ್ದೂ ಚರ್ಚಿಸಿ ತೀರ್ಮಾನಿಸುತ್ತೇವೆ' ಎಂದು ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

ಜೆಡಿಎಸ್‌ ಬೇಡಿಕೆ ಏನು?

ಜೆಡಿಎಸ್‌ ಬೇಡಿಕೆ ಏನು?

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಂಡರೆ 12 ಸೀಟುಗಳನ್ನು ನೀಡಬೇಕು ಎಂದು ಜೆಡಿಎಸ್ ಪಟ್ಟು ಹಿಡಿದಿದೆ. ಆದರೆ, 7 ಸೀಟುಗಳನ್ನು ಬಿಟ್ಟುಕೊಡಲು ಕಾಂಗ್ರೆಸ್ ಬಯಸಿದೆ. ಅದರಲ್ಲೂ ಹಾಲಿ ಕಾಂಗ್ರೆಸ್ ಸಂಸದರು ಇರುವ ಸೀಟುಗಳನ್ನು ಬಿಟ್ಟುಕೊಡುವುದಿಲ್ಲ ಎಂದು ಕಾಂಗ್ರೆಸ್ ಹೇಳುತ್ತಿದೆ.

English summary
In a tweet Former Chief Minister Siddaramaiah said that, Our election committee had also met once but we have not decided anything about seat allocation & candidate selection.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X