ಕರಸೇವಕರ ಬಂಧನ: ತಪ್ಪು ಮಾಡಿದವರನ್ನು ಬಿಟ್ಟು ಬಿಡಬೇಕಾ?: ಸಿದ್ದರಾಮಯ್ಯ ಹೇಳಿದಿಷ್ಟು

ಕೊಪ್ಪಳ, ಜನವರಿ 02: ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನದಲ್ಲಿ ನಾವು ಯಾವುದೇ ದ್ವೇಷದ ರಾಜಕಾರಣ ಮಾಡುವುದಾಗಲಿ, ನಿರಪರಾಧಿಗಳನ್ನು ಬಂಧಿಸುವ ಕೆಲಸವಾಗಲಿ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಮಂಗಳವಾರ ಕೊಪ್ಪಳ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ತಪ್ಪು ಮಾಡಿದವರಿಗೆ ಏನು ಮಾಡಬೇಕು ಎಂದು ಪ್ರಶ್ನಿಸಿದ ಅವರು, ಸುಮ್ಮನೆ ಬಿಟ್ಟುಬಿಡಬೇಕೇ? ಹಳೇ ಪ್ರಕರಣಗಳನ್ನು ವಿಲೇವಾರಿ ಮಾಡಲು ಸೂಚಿಸಲಾಗಿದೆ. ಅದರ ಮೇಲೆ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ ಎಂದರು. ನ್ಯಾಯಾಲಯದ ಸೂಚನೆ ಇದ್ದರೆ, ಅದರಂತೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

We Have Not Done Any Politics Of Hatred In The Detention Of Karsevaks Says Siddaramaiah

ಅತಿಥಿ ಉಪನ್ಯಾಸಕರು ಪಾದಯಾತ್ರೆ ಮಾಡುವ ಬಗ್ಗೆ ಮಾತನಾಡಿ ಅವರೊಂದಿಗೆ ಮಾತನಾಡಿದ್ದರೂ ಪಾದಯಾತ್ರೆ ಮಾಡುತ್ತಿದ್ದಾರೆ. ಅವರನ್ನು ಖಾಯಂ ಮಾಡಿ ಎಂದು ಬೇಡಿಕೆ ಇದೆ. ಖಾಯಂ ಮಾಡುವುದು ಕಷ್ಟದ ಕೆಲಸ ಎಂದು ಹೇಳಿದರು.

ರಾಮಮಂದಿರ ಉದ್ಘಾಟನೆಗೆ ಕೇವಲ ರಾಮಭಕ್ತರಿಗೆ ಮಾತ್ರ ಆಹ್ವಾನ ನೀಡಲಾಗಿದೆ ಎಂದು ರಾಮಮಂದಿರದ ಮುಖ್ಯ ಅರ್ಚಕರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಯಾರಿಗೆ ಆಹ್ವಾನ ಹೋಗಿದೆ , ಬಿಟ್ಟಿದೆ ಎಂದು ಗೊತ್ತಿಲ್ಲ ಆಹ್ವಾನ ಕೊಟ್ಟವರು ಹೋಗುತ್ತಾರೆ, ಇಲ್ಲದವರು ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ 2 ಸಾವಿರ ರೂ.ಗಳನ್ನು ಒದಗಿಸಲಾಗಿದೆ. ಆಧಾರ್ ಲಿಂಕ್ ಮಾಡಿದ ನಂತರ ಮೊತ್ತ ರೈತರಿಗೆ ತಲುಪಲಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+