ಕರ್ನಾಟಕದಲ್ಲಿ 13.2 ಲಕ್ಷ ಮಕ್ಕಳಿಗೆ ಕೊವಿಡ್-19 ಮೊದಲ ಡೋಸ್!
ಬೆಂಗಳೂರು, ಜನವರಿ 6: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ತೀವ್ರತೆಯನ್ನು ತಗ್ಗಿಸುವ ನಿಟ್ಟಿನಲ್ಲಿ 15 ರಿಂದ 17 ವರ್ಷದ ಮಕ್ಕಳಿಗೆ ಶರವೇಗದಲ್ಲಿ ಲಸಿಕೆಯನ್ನು ವಿತರಿಸಲಾಗುತ್ತಿದೆ.
ಗುರುವಾರವೊಂದೇ ದಿನದಲ್ಲಿ 15 ರಿಂದ 17 ವರ್ಷದ 2 ಲಕ್ಷ ಮಕ್ಕಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ರಾಜ್ಯದಲ್ಲಿ ಮಕ್ಕಳಿಗೆ ಲಸಿಕೆ ವಿತರಿಸಿರುವ ಬಗ್ಗೆ ಸಚಿವರು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಕರ್ನಾಟಕದಲ್ಲಿ ಇದುವರೆಗೂ 13.2 ಲಕ್ಷ ಮಕ್ಕಳಿಗೆ ಕೊವಿಡ್-19 ಲಸಿಕೆಯ ಮೊದಲ ಡೋಸ್ ಅನ್ನು ವಿತರಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ 5,000ಕ್ಕೂ ಹೆಚ್ಚು ಮಂದಿಗೆ ಸೋಂಕು:
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ನಡುವೆ ರಾಜ್ಯದಲ್ಲಿ ಒಂದೇ ದಿನ 5,000ಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 5031 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ ಒಬ್ಬರು ಮೃತಪಟ್ಟಿದ್ದು, 271 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ರಾಜ್ಯದಲ್ಲಿ ಈವರೆಗೂ 3022603 ಸೋಂಕಿತರು ಗುಣಮುಖರಾಗಿದ್ದರೆ, 2962043 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 22173 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.












Click it and Unblock the Notifications