ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಜರಾತ್ ಮಾದರಿಯಲ್ಲಿ ಕರ್ನಾಟಕದಲ್ಲಿ ಕೂಡ ಅಧಿಕಾರಕ್ಕೆ ತರುತ್ತೇವೆ ಎಂದ ಸುನೀಲ್ ಕುಮಾರ್

|
Google Oneindia Kannada News

ಬೆಂಗಳೂರು, ಡಿಸೆಂಬರ್ 8: ಗುಜರಾತ್ ಮಾದರಿಯಲ್ಲಿ ಕರ್ನಾಟಕದಲ್ಲಿ ಕೂಡ ಅಧಿಕಾರಕ್ಕೆ ತರುತ್ತೇವೆ. ಗುಜರಾತ್ ಚುನಾವಣಾ ಫಲಿತಾಂಶ ಕರ್ನಾಟಕದ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಿಸಿದೆ ಹಾಗೂ ಅವರಲ್ಲಿನ ದೃಢತೆಯನ್ನು ಹೆಚ್ಚಿಸಲಿದೆ ಎಂದು ಸಚಿವ ವಿ.ಸುನೀಲ್‍ಕುಮಾರ್ ಹೇಳಿದ್ದಾರೆ

ಈ ಕುರಿತು ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ಗುಜರಾತ್‍ನಲ್ಲಿ ಅತಿ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಿದ ಜನತೆ ಅಭಿವೃದ್ಧಿ ಪರವಾಗಿ ಮತ ನೀಡಿದ್ದಾರೆ. ಗುಜರಾತ್‍ನಲ್ಲಿ ಏಳನೇ ಬಾರಿಗೆ ಬಿಜೆಪಿ ಅಧಿಕಾರ ಗಳಿಸಿದೆ. ಚುನಾವಣೆಯಲ್ಲಿ ಗೆಲ್ಲಲು ನಾವು ಬೇರೆ ಏನೇನೋ ತಂತ್ರಗಾರಿಕೆ ಮಾಡಿಲ್ಲ. ಕೇವಲ ಅಭಿವೃದ್ಧಿಯನ್ನು ಕಣ್ಮುಂದೆ ಇಟ್ಟುಕೊಂಡು, ಮುಂದಿನ 5 ವರ್ಷಗಳ ಅಭಿವೃದ್ಧಿಯ ಪರಿಕಲ್ಪನೆಯನ್ನು ಜನರ ಮುಂದೆ ಇಟ್ಟಿದ್ದರಿಂದ ಈ ಅತ್ಯುತ್ತಮ ಫಲಿತಾಂಶ ಲಭಿಸಿದೆ. ಸಹಜವಾಗಿ ಕರ್ನಾಟಕದ ಮುಂದಿನ ಚುನಾವಣೆಗೆ ಇದು ಸ್ಪೂರ್ತಿಯನ್ನು ಕೊಟ್ಟಿದೆ ಎಂದು ತಿಳಿಸಿದರು.

ಗುಜರಾತ್, ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ 2022 - ಲೈವ್ ಫಲಿತಾಂಶಗಳುಗುಜರಾತ್, ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ 2022 - ಲೈವ್ ಫಲಿತಾಂಶಗಳು

ಕರ್ನಾಟಕದ ಚುನಾವಣೆಯೂ ಅಭಿವೃದ್ಧಿ, ಹಿಂದುತ್ವ, ಬೂತ್ ಕಾರ್ಯದ ಆಧಾರದಲ್ಲಿ ನಡೆಯಲಿದೆ. ಯಡಿಯೂರಪ್ಪ- ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿನ ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರದ ಯೋಜನೆಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ಕರ್ನಾಟಕದಲ್ಲಿ 'ನವ ಕರ್ನಾಟಕ ನಿರ್ಮಾಣ'ದ ಸಂಕಲ್ಪದೊಂದಿಗೆ ನಾವು ಮಾಡಿದ್ದೇವೆ. ಹಿಂದುತ್ವದ ಚಟುವಟಿಕೆಗಳಿಗೆ ಕಾನೂನು ಸ್ವರೂಪ ಕೊಡುವಂಥ ಕಾರ್ಯ ನಡೆದಿದೆ. ನಮ್ಮ ಭಾವನೆಗಳನ್ನು ಗೌರವಿಸುವ ಬೇರೆಬೇರೆ ಯೋಜನೆಗಳನ್ನು ನಾವು ಅನುಷ್ಠಾನಕ್ಕೆ ತಂದಿದ್ದೇವೆ ಎಂದು ವಿವರಿಸಿದರು.

We will be power in Karnataka on Gujarat model says minister sunil kumar

ಅಭಿವೃದ್ಧಿ, ಹಿಂದುತ್ವ, ಪಕ್ಷದ ಬೂತ್ ಕಾರ್ಯವು ಪಕ್ಷದ ಗೆಲುವಿಗೆ ಪೂರಕವಾಗಲಿದೆ. ಇವತ್ತಿನಿಂದಲೇ ಕರ್ನಾಟಕದ ಚುನಾವಣೆ ಆರಂಭವಾಗಿದೆ. ಗುಜರಾತ್ ಗೆಲುವು ಕರ್ನಾಟಕದ ವಿಜಯದಲ್ಲೂ ಮುಂದುವರಿಯಲಿದೆ. ನಾವು ಡಬಲ್ ಎಂಜಿನ್ ಸರಕಾರದ ಮೂಲಕ ಜನರಿಗೆ ಇನ್ನಷ್ಟು ಯೋಜನೆಗಳನ್ನು ಕೊಡಲು ಮುಂದಿನ 5 ವರ್ಷಕ್ಕಾಗಿ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು.

ಹಿಮಾಚಲ ಪ್ರದೇಶದಲ್ಲಿ ಮತದಾರರ ತೀರ್ಪನ್ನು ನಾವು ಗೌರವಿಸುತ್ತೇವೆ. ಅಲ್ಲಿ ನಮಗೆ ಹಿನ್ನಡೆ ಆಗಿದೆ. ಅಲ್ಲಿನ ರಾಜ್ಯ ಘಟಕ ಮತ್ತು ರಾಷ್ಟ್ರೀಯ ತಂಡವು ಈ ಹಿನ್ನಡೆಯ ಕುರಿತ ಅವಲೋಕನ ಮಾಡಲಿದೆ. ನಾವು ಯಾವತ್ತೂ ಸೋಲಿನ ಹೊಣೆಯನ್ನು ಬೇರೆಯವರ ಮೇಲೆ ಹೊರಿಸುವುದಿಲ್ಲ. ರಾಜ್ಯದ ಚುನಾವಣಾ ಗೆಲುವಿಗೆ ಅಗತ್ಯವಾದ ಎಲ್ಲ ತಂತ್ರಗಾರಿಕೆಯನ್ನು ಪಕ್ಷ ಅನುಸರಿಸಲಿದೆ. ಹಿರಿಯರಿಗೆ ಮನ್ನಣೆ, ಹೊಸಬರಿಗೆ ಅವಕಾಶವನ್ನು ಗಮನದಲ್ಲಿ ಇಟ್ಟುಕೊಂಡು ಚುನಾವಣಾ ತಂತ್ರಗಾರಿಕೆ ರೂಪಿಸುತ್ತೇವೆ ಎಂದರು.

English summary
We will be power in Karnataka on Gujarat model says minister sunil kumar
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X