ಅಭಿವೃದ್ಧಿ ಆಧಾರದಲ್ಲಿ ಚುನಾವಣೆ ಎದುರಿಸುತ್ತೇವೆ: ಜೆ.ಪಿ.ನಡ್ಡಾ

ಕೊಪ್ಪಳ, ಡಿಸೆಂಕಬರ್ 15 : ಅಭಿವೃದ್ಧಿಯ ರಿಪೋರ್ಟ್ ಕಾರ್ಡ್ ಜೊತೆ ಬಿಜೆಪಿ ಜನರ ಮುಂದೆ ಹೋಗಲಿದೆ ಎಂದು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ತಿಳಿಸಿದರು.

ಕೊಪ್ಪಳದಲ್ಲಿ ರಾಜ್ಯದ 10 ಜಿಲ್ಲೆಗಳ ನೂತನ ಕಾರ್ಯಾಲಯ ಭವನಗಳ ಉದ್ಘಾಟನೆ ಮತ್ತು 3 ಜಿಲ್ಲೆಗಳ ಕಾರ್ಯಾಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಬಳಿಕ ಮಾತನಾಡಿದ ಅವರು, ಸಮರ್ಥ ಪ್ರಧಾನಿ ನರೇಂದ್ರ ಮೋದಿಜಿ ನೇತೃತ್ವ, ಯಡಿಯೂರಪ್ಪ, ಬೊಮ್ಮಾಯಿ ಅವರ ನೇತೃತ್ವದಲ್ಲಿ ದೇಶ- ರಾಜ್ಯದಲ್ಲಿ ಮಹಿಳಾ ಸಶಕ್ತೀಕರಣ ಕಾರ್ಯ ನಡೆಯಿತು ಎಂದು ಹೇಳಿದರು.

We will face elections on the basis of development JP Nadda said

ಆಯುಷ್ಮಾನ್ ಭಾರತ್ ಮೂಲಕ 5 ಲಕ್ಷ ರೂಪಾಯಿಯ ಸ್ವಾಸ್ಥ್ಯ ರಕ್ಷಣೆ ಲಭಿಸಿದೆ. ಜಲ ಜೀವನ್ ಮಿಷನ್ ಅಡಿಯಲ್ಲಿ ಹರ್ ಘರ್ ಜಲ್ ಲಭಿಸುತ್ತಿದೆ. ಉಜ್ವಲ ಯೋಜನೆಯಡಿ 9 ಕೋಟಿ ಸಿಲಿಂಡರ್ ಸಂಪರ್ಕ ಕೊಡಲಾಗಿದೆ. ರೈತರ ಮಕ್ಕಳಿಗೆ ವಿದ್ಯಾನಿಧಿಯನ್ನು ಕರ್ನಾಟಕ ಸರಕಾರ ನೀಡಿದೆ. ನೂತನ ಶಿಕ್ಷಣ ನೀತಿಯನ್ನು ಜಾರಿ ಮಾಡಿದ ಮೊದಲ ರಾಜ್ಯ ಕರ್ನಾಟಕ. ಸಂಕಷ್ಟದಲ್ಲಿರುವ ಸಮಾಜದ ಎಲ್ಲರಿಗೂ ಯಡಿಯೂರಪ್ಪ- ಬೊಮ್ಮಾಯಿ ಸರಕಾರ ನೆರವಾಗಿದೆ ಎಂದು ಮೆಚ್ಚುಗೆ ಸೂಚಿಸಿದರು.

ಕಾರ್ಯಕರ್ತರು ಜನರ ಕಡೆ ತೆರಳಬೇಕು. ಬಿಜೆಪಿ ಸಮಾಜದ ಎಲ್ಲರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಬಗ್ಗೆ ಜನರಿಗೆ ತಿಳಿಸಬೇಕು. ಇತರ ಪಕ್ಷಗಳು ಭ್ರಷ್ಟಾಚಾರಕ್ಕಾಗಿಯೇ ಕೆಲಸ ಮಾಡುತ್ತಿವೆ ಎಂಬುದನ್ನು ಮನವರಿಕೆ ಮಾಡಬೇಕು ಎಂದು ವಿನಂತಿಸಿದರು.

We will face elections on the basis of development JP Nadda said

ರಾಹುಲ್ ಗಾಂಧಿಯವರು ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರಾ ಮಾಡಿದ್ದರು. ಅದು ಭಾರತ್ ಜೋಡೋ ಯಾತ್ರೆ ಅಲ್ಲ; ಅದು ಪ್ರಾಯಶ್ಚಿತ್ತ ಯಾತ್ರೆ. ಇವರ ಪೂರ್ವಜರೇ ಭಾರತದ ಒಡೆಯುವಿಕೆಗೆ ಕಾರಣರಾಗಿದ್ದರು ಎಂದು ಟೀಕಿಸಿದರು. ದೇಶದ್ರೋಹಿಗಳ ಜೊತೆ ಅವರು ಯಾತ್ರೆ ಮಾಡಿದ್ದರು ಎಂದು ಆಕ್ಷೇಪಿಸಿದರು. ವಿಕಾಸ ಎಂಬುದು ಕಾಂಗ್ರೆಸ್ಸಿಗರಿಗೆ ಗೊತ್ತೇ ಇಲ್ಲ. ಭ್ರಷ್ಟತೆಯೇ ಕಾಂಗ್ರೆಸ್ ಹಿನ್ನೆಲೆ ಮತ್ತು ಇತಿಹಾಸ. ಅದೇ ಇತಿಹಾಸವನ್ನು ಇಲ್ಲಿಯೂ ಕಾಂಗ್ರೆಸ್ಸಿಗರು ಹೊಂದಿದ್ದಾರೆ ಎಂದ ಅವರು, ಬಿಜೆಪಿಯನ್ನು ಬೆಂಬಲಿಸಿದರೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇವೆ ಎಂದು ತಿಳಿಸಿದರು.

ಕೋವಿಡ್‍ನಿಂದ ಚೀನಾ ಮುಕ್ತವಾಗಿಲ್ಲ. ಯುರೋಪ್‍ನಲ್ಲಿ, ಅಮೇರಿಕಾದಲ್ಲೂ ಇದೇ ಸ್ಥಿತಿ ಇದೆ. ಭಾರತವು ಎಲ್ಲರಿಗೂ ಕೋವಿಡ್ ಲಸಿಕೆ ನೀಡಿ ಕೋವಿಡ್‍ಮುಕ್ತ ದೇಶÀವನ್ನಾಗಿ ಮಾಡಿದ್ದೇವೆ. ಬಿಜೆಪಿ ಸಾಧನೆಯ ಜೊತೆ ಮುನ್ನಡೆದಿದೆ. ಸಿದ್ದರಾಮಯ್ಯ ಕರ್ನಾಟಕಕ್ಕಾಗಿ ಏನು ಮಾಡಿದ್ದಾರೆ ಎಂದು ಹೇಳಲು ಅವರಲ್ಲಿ ವಿಷಯವೇ ಇಲ್ಲ ಎಂದು ಟೀಕಿಸಿದರು. ಶಿವಕುಮಾರ್ ಅವರದೂ ಇದೇ ಸ್ಥಿತಿ ಎಂದರು. ವಂದೇ ಭಾರತ್ ರೈಲು ಭಾರತದ ವಿಕಾಸಕ್ಕೆ ಪೂರಕ ಎಂದರು.

We will face elections on the basis of development JP Nadda said

370ನೇ ವಿಧಿ ರದ್ದು, ಲಾಲ್ ಚೌಕದಲ್ಲಿ ತ್ರಿವರ್ಣ ಧ್ವಜಾರೋಹಣ, ತುಷ್ಟೀಕರಣ ಇಲ್ಲದೆ ಎಲ್ಲರಿಗೂ ನ್ಯಾಯ ದೊರಕಿಸಿ ಕೊಡುವ ಕಡೆ ಬಿಜೆಪಿ ಮುನ್ನಡೆದಿದೆ. ನಮ್ಮಲ್ಲಿ ಪಕ್ಷ ಎಂದು ಒಂದು ಕುಟುಂಬ. ಇತರ ಪಕ್ಷಗಳಲ್ಲಿ ಒಂದು ಕುಟುಂಬವೇ ಪಕ್ಷ ಎಂಬ ಸ್ಥಿತಿ ಇದೆ. ಭಾರತ ಜಿ20 ಅಧ್ಯಕ್ಷತೆ ವಹಿಸಿದೆ. ಇದು ಹೆಮ್ಮೆಯ ವಿಚಾರ ಎಂದು ತಿಳಿಸಿದರು. 2014ರಲ್ಲಿ ಮೋದಿಜಿ ಮತ್ತು ಅಮಿತ್ ಶಾ ಅವರು ಜಿಲ್ಲಾ ಸ್ವಂತ ಕಾರ್ಯಾಲಯದ ವಿಚಾರವನ್ನು ಮಂಡಿಸಿದ್ದರು. ಬಿಜೆಪಿ ಪ್ರತಿ ಜಿಲ್ಲೆಯಲ್ಲಿ ಕಾರ್ಯಾಲಯ ಹೊಂದುವತ್ತ ಮುನ್ನಡೆದಿದೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+