ನಾಯಕತ್ವ ಬದಲಾವಣೆ; ಮುಂದಿನ ಚುನಾವಣೆ ಸಿದ್ದರಾಮಯ್ಯ ನಾಯಕತ್ವದಲ್ಲೇ: ಬಿಗ್ ಅಪ್‌ಡೇಟ್ ಕೊಟ್ಟ ಡಿ ಕೆ ಸುರೇಶ್
ಬೆಂಗಳೂರು, ನವೆಂಬರ್ 05: ಸಿದ್ದರಾಮಯ್ಯ ಅವರು ಎಷ್ಟು ದಿನ ಮುಖ್ಯಮಂತ್ರಿಯಾಗಿರುತ್ತಾರೋ ಅಷ್ಟೂ ದಿನ ಅವರೇ ಸಿಎಂ. ಮುಂದೆಯೂ ಅವರೇ ಇರಬಹುದು. ಅವರು ನಮ್ಮ ನಾಯಕರು. ಅವರ ನಾಯಕತ್ವದಲ್ಲಿ ಪಕ್ಷ ಸಂಘಟಿಸಿ, ಪಕ್ಷ ಕಟ್ಟುತ್ತಿದ್ದೇವೆ ಎಂದು ಮಾಜಿ ಸಂಸದ ಹಾಗೂ ಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ ಅವರು ತಿಳಿಸಿದರು.
ನಾಯಕತ್ವ ಬದಲಾವಣೆ, ಅಧಿಕಾರ ಹಸ್ತಾಂತರ ವಿಚಾರವಾಗಿ ನಡೆಯುತ್ತಿರುವ ಚರ್ಚೆ ಕುರಿತು ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಜೊತೆಗೆ ಡಿ ಕೆ ಸುರೇಶ್ ಅವರು ಮಾತನಾಡಿ, ಇದೆಲ್ಲವೂ ಊಹಾಪೋಹ. ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿರುವ ವಿಚಾರಗಳು ಪಕ್ಷದ ಮುಂದೆ ಇಲ್ಲ. ಸಿದ್ದರಾಮಯ್ಯ ಅವರಿಗೆ ಇನ್ನು ವಯಸ್ಸಾಗಿಲ್ಲ. ಮುಂದಿನ ದಿನಗಳಲ್ಲಿ ಬರುವ ಎಲ್ಲಾ ಚುನಾವಣೆಗಳು ಅವರ ನೇತೃತ್ವದಲ್ಲೇ ನಡೆಯಲಿವೆ" ಎಂದರು.

ಡಿಸಿಎಂ ಡಿ ಕೆ ಶಿವಕುಮಾರ್ ದೆಹಲಿ ಪ್ರವಾಸದ ಕುರಿತು ಮಾತನಾಡಿ, ಮೇಕೆದಾಟು ಯೋಜನೆ ಸಂಬಂಧ ನ್ಯಾಯಾಲಯದಲ್ಲಿ ಗುರುವಾರ (ಡಿ.6) ವಿಚಾರಣೆ ನಡೆಯಲಿದೆ. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿಗಳು ವಿಶೇಷ ಪೀಠ ರಚಿಸಿರುವಂತೆ ಕಾಣಿಸುತ್ತದೆ. ಈ ವಿಚಾರಣೆ ವೇಳೆ ನಮ್ಮ ನಿಲುವು ಏನಿರಬೇಕು ಎಂಬುದರ ಬಗ್ಗೆ ಅಧಿಕಾರಿಗಳು ಮತ್ತು ವಕೀಲರ ಜೊತೆ ಚರ್ಚೆ ನಡೆಸಲು ದೆಹಲಿಗೆ ತೆರಳಿದ್ದಾರೆ ಎಂದರು.
ವರಿಷ್ಠರೂ ದೆಹಲಿಯಲ್ಲಿರುವ ಕಾರಣ ಈ ಪ್ರವಾಸದ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ ಎಂದು ಕೇಳಿದಾಗ, "ವರಿಷ್ಠರು ದೆಹಲಿಯಲ್ಲಿ ಇರದೇ ಎಲ್ಲಿ ಹೋಗುತ್ತಾರೆ. ಬಿಹಾರ ಚುನಾವಣೆಗೂ ಇದಕ್ಕೂ ಸಂಬಂಧ ವಿಲ್ಲ. ಶಿವಕುಮಾರ್ ಅವರು ಈ ಹಿಂದಿನಿಂದಲೂ ದೆಹಲಿಗೆ ಹೋದಾಗೆಲ್ಲಾ ಕಾಂಗ್ರೆಸ್ ಕಚೇರಿಗೆ ಹೋಗುತ್ತಾರೆ, ವರಿಷ್ಠರು ಸಿಕ್ಕರೆ ಮಾತನಾಡುತ್ತಾರೆ, ಬರುತ್ತಾರೆ. ತುರ್ತಾಗಿ ಮೇಕೆದಾಟು ಪ್ರಕರಣ ವಿಚಾರಣೆಗೆ ಬಂದಿದೆ. ವಿಶೇಷ ಪೀಠ ರಚನೆಗೆ ತಮಿಳುನಾಡು ವಿರೋಧ ವ್ಯಕ್ತಪಡಿಸಿತ್ತು. ಹೀಗಾಗಿ ಈ ಪೀಠ ರಚನೆಯಿಂದ ಯಾವ ರೀತಿ ಲಾಭ ಆಗಲಿದೆ, ನಮ್ಮ ನಿಲುವು ಹೇಗಿರಬೇಕು ಎಂದು ಚರ್ಚೆ ಮಾಡಲು ತೆರಳಿದ್ದಾರೆ. ನಾಳೆ ಹೆಚ್ಚು ಕಮ್ಮಿ ಆದರೆ ಯಾಕೆ ಸರಿಯಾಗಿ ನಿಭಾಯಿಸಲಿಲ್ಲ ಎಂದು ನೀವುಗಳೇ ಪ್ರಶ್ನೆ ಮಾಡುತ್ತೀರಿ. ಇದು ರಾಜಕೀಯ ಕೆಲಸ ಅಲ್ಲ. ಕರ್ನಾಟಕ ರಾಜ್ಯದ ಹಿತ ಕಾಪಾಡುವ ಕೆಲಸ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರಿಗೆ ಪರ್ಯಾಯ ನಾಯಕರು ಇಲ್ಲ ಎಂಬ ಪ್ರಶ್ನೆಗೆ ಉತ್ತರಿಸಿ, ಎಲ್ಲಾ ನಾಯಕರೂ ಸೇರಿ ಕಾಂಗ್ರೆಸ್ ಪಕ್ಷವಾಗಿದೆ. ಸಿದ್ದರಾಮಯ್ಯ ಅಥವಾ ಡಿ.ಕೆ. ಶಿವಕುಮಾರ್ ಅವರಿಂದ ಮಾತ್ರ ಪಕ್ಷವಿಲ್ಲ. ಎಂ.ಬಿ ಪಾಟೀಲ್, ಪರಮೇಶ್ವರ್, ಸತೀಶ್ ಜಾರಕಿಹೋಳಿ, ಮಹದೇವಪ್ಪ ಸೇರಿದಂತೆ ಎಲ್ಲಾ ಸಮುದಾದ ನಾಯಕರು ಸೇರಿ ಪಕ್ಷ ಕಟ್ಟಿಕೊಂಡು ಬಂದಿದ್ದೇವೆ ಎಂದು ಹೇಳಿದರು.
ಕಾಂಗ್ರೆಸ್ ಕಚೇರಿಗಳ ಶಂಕುಸ್ಥಾಪನೆ ವಿಚಾರಾಗಿ ರಾಹುಲ್ ಗಾಂಧಿ ಅವನ್ನು ಭೇಟಿ ಮಾಡುವ ಸಾಧ್ಯತೆ ಇದೆಯೇ ಎಂದು ಕೇಳಿದಾಗ, ಆ ವಿಚಾರವಾಗಿ ನನಗೆ ಮಾಹಿತಿ ಇಲ್ಲ. ಈ ವಿಚಾರವಾಗಿ ಈಗಾಗಲೇ ಮಾಹಿತಿ ನೀಡಲಾಗಿದೆ. ಅವರು ಸಮಯ ನಿಗದಿ ಮಾಡಿದ ಬಳಿಕ ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಲಿದೆ. ಎಐಸಿಸಿ ಅಧ್ಯಕ್ಷರು ಹಾಗೂ ರಾಹುಲ್ ಗಾಂಧಿ ಅವರನ್ನು ಕರೆದು ಒಂದೇ ಸ್ಥಳದಲ್ಲಿ ಎಲ್ಲ ಕಡೆ ಶಂಕುಸ್ಥಾಪನೆ ನೆರವೇರಿಸುವ ಕಾರ್ಯ ಮಾಡುವ ಆಲೋಚನೆ ಇದೆ ಎಂದು ತಿಳಿಸಿದರು.
ರಾಜ್ಯ ನಾಯಕರು ಸಧ್ಯಕ್ಕೆ ದೆಹಲಿ ಕಡೆ ಬರಬೇಡಿ ಎಂಬ ಹೈಕಮಾಂಡ್ ಸಂದೇಶ ರವಾನಿಸಿದೆಯೇ ಎಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಡಿ ಕೆ ಸುರೇಶ್ ಅವರು, ನಾನು ಅಷ್ಟು ದೊಡ್ಡ ನಾಯಕನಲ್ಲ. ನನಗೆ ಬೇಕಾದಾಗ ಹೋಗಿ ಬರುತ್ತೇನೆ ಎಂದು ತಿಳಿಸಿದರು. ಸರ್ಕಾರ ಬರಲು ಶಿವಕುಮಾರ್ ಅವರ ಪಾತ್ರವಿದೆ. ಹೀಗಾಗಿ ಅವರಿಗೆ ಅವಕಾಶ ನೀಡಬೇಕು ಎಂಬ ಹೇಳಿಕೆ ಕುರಿತು ಮಾತನಾಡಿ, ಕಾರ್ಯಕರ್ತರು ಹಾಗೂ ಸಾರ್ವಜನಿಕವಾಗಿ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ ಎಂದು ತಿಳಿಸಿದರು.
-
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು











Click it and Unblock the Notifications