Siddaramaiah: ಗಡಿ ಭಾಗದ ಶಾಲೆಗಳಲ್ಲಿ ಮಲಯಾಳಂ ಕಲಿಕೆ ಕಡ್ಡಾಯ: ಹೋರಾಟ ಮಾಡುತ್ತೇವೆ ಎಂದ ಸಿದ್ದರಾಮಯ್ಯ
ಬೆಂಗಳೂರು: ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಲಿಕೆ ಕಡ್ಡಾಯಗೊಳಿಸುವ ಮಸೂದೆಯನ್ನು ಸಿಎಂ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ, ಒಂದು ವೇಳೆ ಮಸೂದೆ ಜಾರಿಯಾದರೆ ಕರ್ನಾಟಕ ಸಾಂವಿಧಾನಿಕವಾಗಿ ವಿರೋಧಿಸುವುದಾಗಿ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಇದೀಗ ಕೇರಳದ ಗಡಿ ಭಾಗಗಳ ಶಾಲೆಗಳಲ್ಲಿ ಮಲಯಾಳಂನ್ನು ಮೊದಲ ಭಾಷೆಯಾಗಿ ಕಲಿಯುವುದನ್ನು ಕಡ್ಡಾಯಗೊಳಿಸಿರುವ ಬಗ್ಗೆ ಕೇರಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಹೋರಾಟವನ್ನೇ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ
ಇಂದು ರೇಸ್ ಕೋರ್ಸ್ ರಸ್ತೆಯ KEB ಇಂಜಿನಿಯರ್ ಅಸೋಸಿಯೇಷನ್ ನಲ್ಲಿ ಕಾರ್ಯಕ್ರಮ ದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದ್ವೇಷ ಭಾಷಣಕ್ಕೆ ಸಂಬಂಧಿಸಿದ ಬಿಲ್ಲು ರಾಜ್ಯಪಾಲರ ಬಳಿಯೇ ಉಳಿದಿರುವ ಬಗ್ಗೆ ರಾಜ್ಯಪಾಲರನ್ನು ಒಮ್ಮೆ ಭೇಟಿಯಾಗಿ ವಿವರಣೆ ನೀಡಲಾಗುವುದು ಎಂದು ಹೇಳಿದರು.

ಬಿಜೆಪಿಯವರು ರಾಜ್ಯಕ್ಕೆ ಎಷ್ಟೇ ಅನ್ಯಾಯವಾದರೂ ಕೇಂದ್ರ ಸರ್ಕಾರ ಮಾಡಿದ್ದನ್ನೆಲ್ಲಾ ಸಮರ್ಥಿಸಿಕೊಳ್ಳುವುದು ಮಹಾ ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಕರ್ನಾಟಕಕ್ಕೆ ಅನ್ಯಾಯವಾದದ್ದನೆಲ್ಲ ನ್ಯಾಯ ಎನ್ನುವುದು ಮಹಾ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಕಾಯ್ದೆ ಕುರಿತಂತೆ ಚರ್ಚೆಗೆ ಆಹ್ವಾನಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಚರ್ಚೆಗೆ ನಾವು ಸಿದ್ಧವಾಗಿದ್ದು, ದೊಡ್ಡ ಆಂದೋಲನವನ್ನೇ ಮಾಡುತ್ತೇವೆ ಎಂದರು. ಹೆಚ್. ಡಿ.ಕುಮಾರಸ್ವಾಮಿಯವರು ಅವರ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಲು ಸಿಎಂ ನಿರಾಕರಿಸಿದರು. ಬಿಜೆಪಿ ಜೆಡಿಎಸ್ ಅವರು ಕೇವಲ ಸುಳ್ಳು ಹೇಳುತ್ತಾರೆ ಎಂದರು.
ಅಭಿಯೋಜಕರು ನ್ಯಾಯ ಸಂರಕ್ಷಕರು. ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಇವೆಲ್ಲವೂ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ ಸಾಧ್ಯ. ಸಮಾಜದ ಜನರ ಹಿತ ಕಾಪಾಡುವುದು ನಮ್ಮೆಲ್ಲರ ಕೆಲಸ. ನಾಗರಿಕ ಸುರಕ್ಷಾ ಸಂಹಿತೆಯನ್ನು ಕೇಂದ್ರ ಸರ್ಕಾರ ಜಾರಿ ಮಾಡಿದೆ. ಕಾಯ್ದೆಯ ಸೆಕ್ಷನ್ 8 ಮತ್ತು 9 ರ ಪ್ರಕಾರ ಅಭಿಯೋಜಕರನ್ನು ವಿಂಗಡಿಸಿ, ಕರ್ತವ್ಯಗಳನ್ನು ಹೇಳಿದ್ದಾರೆ. ಆರೋಪಿಗಳ ಹಕ್ಕುಗಳನ್ನು ಸಂರಕ್ಷಿಸಬೇಕೆಂದು ನಿಯಮ ರೂಪಿಸಿದೆ. ನೂರು ಅಪರಾಧಿಗಳು ಶಿಕ್ಷೆಯಿಂದ ತಪ್ಪಿಸಿಕೊಂಡರೂ, ಒಬ್ಬ ನಿರಪರಾಧಿಗೆ ಶಿಕ್ಷೆಯಾಗಬಾರದು ಎಂದರು.
ಆರೋಪಿಗಳ ಪರವಾಗಿರುವ ಸಾಕ್ಷ್ಯಾಧಾರಗಳನ್ನೂ ನ್ಯಾಯಾಲಯದ ಗಮನಕ್ಕೆ ತರುವುದು ಅಭಿಯೋಜಕರ ಆದ್ಯ ಕರ್ತವ್ಯ. ತನಿಖಾಧಿಕಾರಿಗಳ ಜೊತೆ ಮಾತನಾಡುವುದು, ಸಾಕ್ಷಿಗಳ ವಿಚಾರಣೆ, ಪಾಟಿ ಸವಾಲು ಮಾಡುವಾಗ ಎಚ್ಚರಿಕೆಯಿಂದ ಮಾಡಿದರೆ ಶಿಕ್ಷೆ ಪ್ರಮಾಣ ಹೆಚ್ಚಾಗಲು ಸಾಧ್ಯ ಎಂದರು.
ಎನ್.ಸಿ.ಆರ್.ಬಿ ವರದಿ ಪ್ರಕಾರ ಶಿಕ್ಷೆ ಪ್ರಮಾಣ ದರದಲ್ಲಿ ಕರ್ನಾಟಕ, ಬಿಹಾರ ಮತ್ತು ರಾಜಸ್ಥಾನ 22 ನೇ ಸ್ಥಾನದಲ್ಲಿದೆ. ಕೇರಳದಲ್ಲಿ 87% ರಷ್ಟಿದೆ., ಮಿಜೋರಾಂ 92%, ಗುಜರಾತ್ ಮತ್ತು ತೆಲಂಗಾಣ 57%, , ಉತ್ತರ ಪ್ರದೇಶದಲ್ಲಿ 72%, ದೆಹಲಿ 89% ರಷ್ಟಿದೆ. ನಾವು ಕೇರಳ ರಾಜ್ಯದೊಂದಿಗೆ ಹೋಲಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಕಿವಿ ಮಾತು ಹೇಳಿದರು.
ಸಮಸ್ಯೆಗಳ ಹೊರತಾಗಿಯೂ ನ್ಯಾಯ ಒದಗಿಸಬೇಕು. ಸೈಬರ್ ಅಪರಾಧಗಳು, ಆರ್ಥಿಕ , ಅಪರಾಧಗಳು ಶುರುವಾಗಿದ್ದು ಇದಕ್ಕೆ ತರಬೇತಿ ಅತ್ಯಂತ ಅವಶ್ಯಕ. ಅಭಿಯೋಜಕರು ನಿರಂತರ ಅಧ್ಯಯನ ಮಾಡಬೇಕು ಎಂದರು.












Click it and Unblock the Notifications