ಬೀದಿಗೆ ಬಂದ ಸಿಎಂ ಕುರ್ಚಿ ಕದನ: ಹೈಕಮಾಂಡ್ ನಾಯಕರ ಜೊತೆ ಮಹತ್ವದ ಸಭೆ: ಡಿ ಕೆ ಶಿವಕುಮಾರ್ ಹೇಳಿದ್ದೇನು?
ಬೆಂಗಳೂರು, ನವೆಂಬರ್ 27: ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಕದನ ತೀವ್ರಗೊಂಡಿದೆ. ಈ ಹೊತ್ತಿನಲ್ಲೇ ಸಿಎಂ ಸಿದ್ಧರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನುಡೆವ ನಡೆಯುತ್ತಿರುವ ಕುರ್ಚಿ ಕಿತ್ತಾಟ ಈಗ ಬೀದಿಗೆ ಬಂದಿದ್ದು, ಇದಕ್ಕೆ ಸಾಕ್ಷಿ ಎನ್ನುವಂತೆ ಡಿ ಕೆ ಶಿವಕುಮಾರ್ ಹಾಗೂ ಸಿಎಂ ಸಿದ್ಧರಾಮಯ್ಯ ನಡುವೆ ಪೋಸ್ಟ್ ವಾರ್ ಶುರುವಾಗಿದೆ. ಇನ್ನೂ ಸಿಎಂ ಪಟ್ಟದ ಜಟಾಪಟಿ ಕುರಿತು ಮಲ್ಲಿಕಾರ್ಜುನ್ ಖರ್ಗೆ ಮಹತ್ವ ಮಾಹಿತಿ ನೀಡಿದ್ದಾರೆ.
ಪಕ್ಷದಲ್ಲಿನ ಗೊಂದಲಗಳನ್ನು ಶೀಘ್ರದಲ್ಲಿಯೇ ಬಗೆಹರಿಸಲಾಗುವುದು. ಇನ್ನೆರೆಡು ದಿನಗಳಲ್ಲಿ ನಡೆಯಲಿರುವ ಈ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಇನ್ನಿತರ ಮುಖಂಡರು ಇರಲಿದ್ದಾರೆ, ಈ ಗೊಂದಲ ಬಗೆಹರಿಯಲಿದೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಹೈಕಮಾಂಡ್ ನಾಯಕರು ದಿಲ್ಲಿಗೆ ಕರೆದರೆ ಹೋಗುತ್ತೇನೆ. ಹೈಕಮಾಂಡ್ ನನ್ನನ್ನು ಹಾಗೂ ಮುಖ್ಯಮಂತ್ರಿಗಳನ್ನು ಕರೆದರೆ ನಾವು ಮಾತನಾಡಿಕೊಂಡು ದೆಹಲಿಗೆ ಹೋಗುತ್ತೇವೆ ಎಂದರು.

ಇದುವರೆಗೂ ಯಾರೂ ನನ್ನನ್ನು ದೆಹಲಿಗೆ ಕರೆದಿಲ್ಲ. ಇಂದಿರಾ ಗಾಂಧಿ ಅವರು ಆರಂಭಿಸಿದ ಅಂಗನವಾಡಿ ಯೋಜನೆಯ 50 ವರ್ಷದ ಕಾರ್ಯಕ್ರಮವಿದೆ. ಮುಂಬೈನಲ್ಲಿ ನನಗೆ ಖಾಸಗಿ ಕಾರ್ಯಕ್ರಮವಿದ್ದು, ಅಲ್ಲಿಗೆ ಹೋಗಿ ಇಂದೇ (ಗುರುವಾರ) ಮರಳುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.
ಎರಡು ತಿಂಗಳ ಹಿಂದೆ ದೆಹಲಿಯಲ್ಲಿ ಎಐಸಿಸಿ ಕಾನೂನು ಘಟಕದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ಅಂದು ರಾಹುಲ್ ಗಾಂಧಿ ಅವರು ಮನದಾಳದ ಮಾತುಗಳನ್ನಾಡಿದ್ದರು. ನೀವೆಲ್ಲರೂ ಅದನ್ನು ಕೇಳಬೇಕು. ಮತಕಳ್ಳತನ ನಡೆಯುತ್ತಿರುವ ಸಧ್ಯದ ಪರಿಸ್ಥಿತಿಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಬ್ಲಡ್ ಬ್ಯಾಂಕ್ ಮಾದರಿಯಲ್ಲಿ ಲೀಗಲ್ ಬ್ಯಾಂಕ್ ಸ್ಥಾಪಿಸಬೇಕು ಎಂದು ಕರೆ ನೀಡಿದರು.
ನಾನು ರಾಜ್ಯ ಕಾನೂನು ಘಟಕದ ಅಧ್ಯಕ್ಷರಾದ ಧನಂಜಯ ಅವರಿಗೆ ಆರು ತಿಂಗಳು ಕಾಲಾವಕಾಶ ನೀಡಿದ್ದು, 224 ಕ್ಷೇತ್ರಗಳಲ್ಲಿ ಕನಿಷ್ಠ 10 ವಕೀಲರಿರುವ ಲೀಗಲ್ ಬ್ಯಾಂಕ್ ಅನ್ನು ಸ್ಥಾಪಿಸಬೇಕು ಎಂದು ನಿರ್ದೇಶನ ನೀಡಿದ್ದೇನೆ. ಈ ವಕೀಲರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಪಕ್ಷದ ಆಚಾರ ವಿಚಾರ ರಕ್ಷಣೆಗೆ ಕೆಲಸ ಮಾಡಬೇಕು. ಮುಂದಿನ ದಿನಗಳಲ್ಲಿ ರಾಜ್ಯಮಟ್ಟದ ಸಮಿತಿ ರಚಿಸಬೇಕು ಎಂದು ತಿಳಿಸಿದರು. ವಕೀಲರು ಏನೇ ವಾದ ಮಾಡಿದರೂ ಸಂವಿಧಾನ ಪುಸ್ತಕ, ರಾಷ್ಟ್ರಧ್ವಜ, ರಾಷ್ಟ್ರಗೀತೆ ಮೇಲೆ ಮಂಡಿಸುತ್ತಾರೆ. ಇದೆಲ್ಲವನ್ನು ಕೊಟ್ಟಿರುವುದು ಕಾಂಗ್ರೆಸ್ ಪಕ್ಷ. ಇದನ್ನು ಉಳಿಸಿಕೊಳ್ಳಬೇಕು. ಅದಕ್ಕಾಗಿ ಲೀಗಲ್ ಬ್ಯಾಂಕ್ ಸ್ಥಾಪಿಸಬೇಕಿದೆ ಎಂದರು.
ಕಾನೂನು ಘಟಕದವರಿಗೆ ಸೂಕ್ತ ಸ್ಥಾನ ಮಾನ ನೀಡಬೇಕು ಎಂಬ ನಿಮ್ಮ ಬೇಡಿಕೆಯನ್ನು ನಾನು ಒಪ್ಪುತ್ತೇನೆ. ಪಕ್ಷ ಇದ್ದರೆ ಸರ್ಕಾರ, ಪಕ್ಷವೇ ಇಲ್ಲದಿದ್ರೆ ಸರ್ಕಾರ ಇಲ್ಲ. ಕಾರ್ಯಕರ್ತರು ಬಲಿಷ್ಠವಾಗಿದ್ದರೆ ನಾವು ಬಲಿಷ್ಠವಾಗಿರುತ್ತೇವೆ. ಕೆಪಿಸಿಸಿ ಆಸ್ತಿಗಳ ಬಗ್ಗೆ ಚರ್ಚೆ ಮಾಡುತ್ತಿದ್ದೆ. ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿರುವವರ ಪಟ್ಟಿಯನ್ನು ಕೊಡಿ. ಈ ಆಸ್ತಿಗಳನ್ನು ಕಾನೂನು ಸಮಿತಿಗೆ ಸೇರಿಸಲು ನಾನು ಸಿದ್ಧನಿದ್ದೇನೆ. ಆದರೆ ಅವರು ಇದನ್ನು ಸೇವೆಯಂತೆ ಜವಾಬ್ದಾರಿ ತೆಗೆದುಕೊಂಡು ಕೆಲಸ ಮಾಡಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ವಿಚಾರವಾಗಿ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸುತ್ತಾರೆ. ನನ್ನ ವಿರುದ್ಧ ಪಕ್ಷದ ನಾಯಕರ ವಿರುದ್ಧ ಅವಹೇಳನವಾಗಿ ಪೋಸ್ಟ್ ಮಾಡುತ್ತಾರೆ. ಇಂತಹ ವಿಚಾರಗಳನ್ನು ಸರಿಯಾಗಿ ನಿಭಾಯಿಸಬೇಕು ಎಂದು ತಿಳಿಸಿದರು.
ಕಾರ್ಯಾಧ್ಯಕ್ಷರಾದ ಜಿ.ಸಿ ಚಂದ್ರಶೇಖರ್ ಅವರು ಕಾನೂನು ಘಟಕದ ಬಗ್ಗೆ ಚರ್ಚೆ ಮಾಡಿದರು. ನಾನು ನನ್ನ ಇಲಾಖೆಗಳಲ್ಲಿರುವ ನ್ಯಾಯಾಲಯ ಪ್ರಕರಣಗಳ ಬಗ್ಗೆ ಪರಿಶೀಲನೆ ಮಾಡಿದೆ. ಸುಮಾರು 60 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಬಾಕಿ ಇವೆ. ಕೆಲವು ಪ್ರಕರಣಗಳಲ್ಲಿ ವಕೀಲರು ಅರ್ಜಿದಾರರ ಜೊತೆ ರಾಜಿ ಮಾಡಿಕೊಂಡು ಭೂಸ್ವಾಧೀನ ಪ್ರಕ್ರಿಯೆಯಲ್ಲಿ 10 ಲಕ್ಷ ಪರಿಹಾರ ನಿಗದಿಯಾಗಿದ್ದರೆ, ನ್ಯಾಯಾಲಯದಲ್ಲಿ ಅರ್ಜಿದಾರರಿಗೆ 8-10 ಕೋಟಿ ಪರಿಹಾರ ನೀಡುವಂತೆ ತೀರ್ಪು ಬರುವಂತೆ ಮಾಡಿದ್ದಾರೆ. ಈ ರೀತಿ ಆದರೆ ಸರ್ಕಾರದ ಗತಿ ಏನು? ಈ ರೀತಿ ಕರ್ತವ್ಯ ಲೋಪ ಎಸಗಿದ ವಕೀಲರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಗಳಲ್ಲಿ ನಮ್ಮ ಪರ ವಾದ ಮಾಡುವ ವಕೀಲರು ಮಂಡಿಸುವ ವಾದಗಳನ್ನು ದಾಖಲು ಮಾಡುವ ವ್ಯವಸ್ಥೆ ತರಲಾಗಿದೆ. ಈ ವಿಚಾರದಲ್ಲಿ ಜವಾಬ್ದಾರಿ ಹೊತ್ತುಕೊಳ್ಳದವರನ್ನು ಬದಲಿಸಬೇಕು ಎಂದು ಹೇಳಿದ್ದೇನೆ. ಸಂವಿಧಾನ ಬಳಸಿಕೊಂಡರೆ ನಾಯಕರಾಗಬಹುದು, ಮಾರಿಕೊಂಡರೆ ಗುಲಾಮರಾಗುತ್ತೀರಿ ಎಂದು ಅಂಬೇಡ್ಕರ್ ಅವರು ಹೇಳಿದ್ದಾರೆ ಎಂದರು.
-
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ












Click it and Unblock the Notifications