'ಯಡಿಯೂರಪ್ಪ ಮಾತ್ರ ಏಕೆ, ಅಮಿತ್ ಶಾ ಬೇಕಾದರೂ ಸ್ಪರ್ಧಿಸಲಿ'
ಬೆಂಗಳೂರು, ಸೆಪ್ಟೆಂಬರ್ 18 : 'ಉತ್ತರ ಕರ್ನಾಟಕದಿಂದ ಬಿ.ಎಸ್.ಯಡಿಯೂರಪ್ಪ ಮಾತ್ರವಲ್ಲ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸ್ಪರ್ಧಿಸಿದರೂ ನಾವು ಹೆದರುವುದಿಲ್ಲ. 2018ರಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೇರುವುದು ಖಚಿತ' ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್ ಹೇಳಿದರು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಮಾತನಾಡಿದ ಅವರು, 'ಉತ್ತರ ಕರ್ನಾಟಕ ಭಾಗದಲ್ಲಿ 2013ಕ್ಕಿಂತಲೂ ಈಗ ಕಾಂಗ್ರೆಸ್ ಪಕ್ಷ ಗಟ್ಟಿಯಾಗಿದೆ. ಯಡಿಯೂರಪ್ಪ ಏಕೆ, ಅಮಿತ್ ಶಾ ಬಂದು ಸ್ಪರ್ಧಿಸಿದರೂ ಹೆದರುವುದಿಲ್ಲ' ಎಂದರು.

'ಯಡಿಯೂರಪ್ಪ ಉತ್ತರ ಕರ್ನಾಟಕದಿಂದ ಸ್ಪರ್ಧಿಸುವುದಾದರೆ ಸಿದ್ದರಾಮಯ್ಯ ಅವರಿಗೂ ಬಾಗಲಕೋಟೆಯಿಂದ ಸ್ಪರ್ಧಿಸುವಂತೆ ಆಹ್ವಾನ ನೀಡುತ್ತೇವೆ. ಅವರು ಸ್ಪರ್ಧಿಸುವುದಾದರೆ ನಮ್ಮ ಪಕ್ಷದ ಅಭ್ಯರ್ಥಿಗಳು ಕ್ಷೇತ್ರ ಬಿಟ್ಟು ಕೊಡಲು ಸಿದ್ಧರಾಗಿದ್ದಾರೆ' ಎಂದು ಎಸ್.ಆರ್.ಪಾಟೀಲ್ ತಿಳಿಸಿದರು.
'ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಜನಪರ ಯೋಜನೆಗಳ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ?, 2018ರಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾಕ್ಕೆ ಬರುವುದು ಅಷ್ಟೇ ಸತ್ಯ' ಎಂದು ಹೇಳಿದರು.
2018ರ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಕರ್ನಾಟಕ ಭಾಗದಿಂದ ಸ್ಪರ್ಧಿಸುವಂತೆ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಷ್ಟ್ರೀಯ ನಾಯಕರು ಸಲಹೆ ನೀಡಿದ್ದಾರೆ. ಯಡಿಯೂರಪ್ಪ ಯಾವ ಕ್ಷೇತ್ರದಿಂದ ಸ್ಪರ್ಧಿಸಬಹುದು? ಎಂದು ಚರ್ಚೆ ನಡೆಯುತ್ತಿದೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications