ಎಕ್ಸಿಟ್ ಪೋಲ್ ಆಧರಿಸಿ ನಾವು ಚುನಾವಣೆಗೆ ಹೋಗಲ್ಲ: ಬೊಮ್ಮಾಯಿ

ಬೆಳಗಾವಿ, ಏಪ್ರಿಲ್‌ 26: ಬಿಜೆಪಿ ಪಕ್ಷವು ಚುನಾವಣಾ ಸಮೀಕ್ಷೆಗಳನ್ನು ಎಕ್ಸಿಟ್ ಪೋಲ್ ಆಧಾರದ ಮೇಲೆ ಸ್ಪರ್ಧಿಸುವುದಿಲ್ಲ. ಬದಲಾಗಿ ತನ್ನದೇ ಆದ ಮಾಹಿತಿ ವ್ಯವಸ್ಥೆಯಲ್ಲಿ ಮತ್ತು ಅದಕ್ಕೆ ತಕ್ಕಂತೆ ಕಾರ್ಯತಂತ್ರವನ್ನು ಸಿದ್ಧಪಡಿಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಾವು ಗ್ರೌಂಡ್ ರಿಯಾಲಿಟಿಗಳ ಅರಿವು ಹೊಂದಿದ್ದು, ರಾಜ್ಯದಲ್ಲಿ ಬಿಜೆಪಿ ಸುನಾಮಿ ಬೀಸುವ ಮೂಲಕ ಚುನಾವಣೆಯಲ್ಲಿ ಬಹುಮತ ಗಳಿಸುತ್ತೇವೆ. ಎಕ್ಸಿಟ್ ಪೋಲ್‌ಗಳು ಹಳೆಯ ಸರಕುಗಳಾಗಿವೆ. ನಾವು ಪ್ರಚಾರದ ಸಮಯದಲ್ಲಿ ಗ್ರೌಂಡ್‌ ರಿಯಾಲಿಟಿಗಳನ್ನು ಸಂಗ್ರಹಿಸುತ್ತೇವೆ. ನಾನು ರಾಜ್ಯದ ದಕ್ಷಿಣ ಭಾಗದಿಂದ ನನ್ನ ಅಭಿಯಾನವನ್ನು ಪ್ರಾರಂಭಿಸಿದೆ. ಬಳಿಕ ಉತ್ತರವನ್ನು ತಲುಪಿದೆ ಇಲ್ಲಿ ಜನರ ಪ್ರತಿಕ್ರಿಯೆಯು ಅಗಾಧವಾಗಿದೆ ಎಂದರು.

We will not go for elections based on exit polls: Basavaraj Bommai

ನಾಮಪತ್ರ ಹಿಂಪಡೆಯುವ ಪ್ರಕ್ರಿಯೆ ಮುಗಿದ ಬಳಿಕ ರಾಜ್ಯದಲ್ಲಿ ಬಿಜೆಪಿ ಪರ ಅಲೆ ಎದ್ದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆದರೆ ಜನರ ಅಭಿಪ್ರಾಯವನ್ನು ಬದಲಿಸುವಲ್ಲಿ ಯಶಸ್ವಿಯಾಗಲಿಲ್ಲ, ಒಂದೂವರೆ ವರ್ಷಗಳಿಂದ ಇಂತಹ ಕೆಲಸಗಳಲ್ಲಿ ತೊಡಗಿದ್ದಾರೆ. ಕಾಂಗ್ರೆಸ್ ಮತ್ತು ಭ್ರಷ್ಟಾಚಾರ ಸಮಾನಾರ್ಥಕ. ಮಾಜಿ ಮುಖ್ಯಮಂತ್ರಿ ನಮ್ಮ ಬಗ್ಗೆ ಪ್ರತಿಕ್ರಿಯಿಸುವ ಹಕ್ಕು ಅವರಿಗೆ ಇಲ್ಲ ಎಂದರು.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಬಸವರಾಜ ಬೊಮ್ಮಾಯಿ ಹಾಗೂ ಸಿದ್ದರಾಮಯ್ಯ ಇಬ್ಬರು ಭೇಟಿಯಾಗಿ ಉಭಯಕುಶಲೋಪರಿ ವಿಚಾರಿಸಿದರು. ಸಿದ್ದರಾಮಯ್ಯ ಅವರೇ ಲಿಂಗಾಯತ ಸಮುದಾಯದ ಬಗ್ಗೆ ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿಸಿದ್ದಾರೆ ಮತ್ತು ಸ್ಪಷ್ಟನೆಗಳನ್ನು ನೀಡುತ್ತಿದ್ದಾರೆ ಎಂದು ಬೊಮ್ಮಾಯಿ ಅವರು ಹೇಳಿದರು.

We will not go for elections based on exit polls: Basavaraj Bommai

ಬಿಜೆಪಿ ಸರ್ಕಾರದಲ್ಲಿ ಶೇಕಡ 40ರಷ್ಟು ಕಮಿಷನ್‌ ನೀಡಿರುವುದು ಸತ್ಯ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ತನಿಖೆ ನಡೆಸಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ, ಸವದಿ ಅವರು ಬಿಜೆಪಿಯಲ್ಲಿದ್ದಾಗ ಈ ಹೇಳಿಕೆ ನೀಡಬಹುದಿತ್ತು. ಈಗ ನೀಡುತ್ತಿದ್ದಾರೆ.

ಅವರ ಹೇಳಿಕೆಗಳಿಗೆ ಯಾವುದೇ ಬೆಲೆಯಿಲ್ಲ. ಅವರು ನಿರ್ದಿಷ್ಟ ನಿದರ್ಶನಗಳಿಗೆ ಸಂಬಂಧಿಸಿದ ಹೇಳಿಕೆಗಳು ಅಥವಾ ಆರೋಪಗಳನ್ನು ಮಾಡಬೇಕು. ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿ ಸುಮಾರು 15 ವಿಧಾನಸಭಾ ಸ್ಥಾನಗಳನ್ನು ಗೆಲ್ಲಲಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+