ಕಾಂಗ್ರೆಸ್ ಅವಧಿಯಲ್ಲಿ ಕೇಸು ಮುಚ್ಚಲು ಸಿದ್ದರಾಮಯ್ಯ ಪರವಾನಗಿ ಪಡೆದಿದ್ರಾ? ಆರಗ ಪ್ರಶ್ನೆ
ಬೆಂಗಳೂರು, ಜು. 07: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಶಾಮೀಲಾಗಿರುವ ಎಲ್ಲಾ ಭ್ರಷ್ಟರನ್ನು ಮಟ್ಟ ಹಾಕುವ ವರೆಗೂ ವಿಶ್ರಾಂತಿ ಪಡೆಯುವುದಿಲ್ಲ.'
ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕೊಟ್ಟಿರುವ ಹೇಳಿಕೆಯಿದು. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ನಿಪ್ಪಾಣಿ ಶಹರ ಹಾಗೂ ಗ್ರಾಮೀಣ ಪೊಲೀಸ್ ಠಾಣೆಗಳ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.
ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳನ್ನು ಕಾನೂನಿನ ಕಕ್ಷೆಗೆ ತಂದು ಮಟ್ಟ ಹಾಕುವ ವರೆಗೂ ಸುಮ್ಮನಿರಲ್ಲ. ಪಿಎಸ್ಐ ಅಕ್ರಮದ ತನಿಖೆಯಲ್ಲಿ ಯಾವುದೇ ಹಸ್ತಕ್ಷೇಪ ವಿಲ್ಲ. ಅತ್ಯಂತ ಪಾರದರ್ಶಕವಾಗಿ ತನಿಖೆ ನಡೆಯುತ್ತಿದೆ ಎಂದು ಜ್ಞಾನೇಂದ್ರ ತಿಳಿಸಿದರು.

ತನಿಖೆಯ ಅತ್ಯಂತ ಪ್ರಾಮಾಣಿಕವಾಗಿ ನಡೆಯುತ್ತಿದೆ. ಆದರೆ ಕಾಂಗ್ರೆಸ್ ನಾಯಕರು ಹತಾಶರಾಗಿ ನ್ಯಾಯಾಂಗ ತನಿಖೆಗೆ ಒತ್ತಾಯಿಸುತ್ತಿದ್ದಾರೆ. ಕಾಂಗ್ರೆಸ್ ಸರಕಾರದ ಅವಧಿಯಲ್ಲಿ, ಸಿಐಡಿ ತನಿಖೆಗೆ ವಹಿಸಲಾದ ಹಲವಾರು ದೂರುಗಳ ಬಗ್ಗೆ FIR ದಾಖಲಾಗಿಲ್ಲ, FIR ಆದ ಪ್ರಕರಣ ಗಳಲ್ಲಿ ಚಾರ್ಜ್ ಶೀಟ್ ಸಲ್ಲಿಸಲಾಗಿಲ್ಲ, ಆದರೆ ಪ್ರಾಮಾಣಿಕವಾಗಿ ತನಿಖೆ ಆಗುತ್ತಿರುವ PSI ವಿಷಯದಲ್ಲಿ ನಮ್ಮ ಸರಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ಅವಧಿಯಲ್ಲಿ ಪಿಎಸ್‌ಐ ಅಕ್ರಮ ನಡೆದಿದ್ದರೆ ಆಗ ಬಿಜೆಪಿ ವಿರೋಧ ಪಕ್ಷವಾಗಿ ಕಡ್ಲೆಪುರಿ ತಿನ್ನುತ್ತಿದ್ದರಾ? ಎಂಬ ಸಿದ್ದರಾಮಯ್ಯ ಹೇಳಿಕೆಗೆ ಖಾರವಾಗಿ ಉತ್ತರಿಸಿದ ಸಚಿವರು "ನಾವು ಕೇಳಿದ್ದೆವು. ಆದರೆ ಅವರು ಸ್ಪಂದಿಸಿರಲಿಲ್ಲ. ಹಾಗಾದರೆ ನಾವುಗಳು ಕೇಳದೇ ಇರುವುದನ್ನು, ಸಿದ್ದರಾಮಯ್ಯ ಅವರು ಕೇಸು ಗಳನ್ನು ಮುಚ್ಚಿ ಹಾಕುವುದಕ್ಕೆ ಸಿಕ್ಕಿದ ಪರವಾನಿಗೆ ಎಂದು ತಿಳಿದಿದ್ದರೇ? ಸರಿಯಾದ ದಿಕ್ಕಿನಲ್ಲಿ ಸಾಗುತ್ತಿರುವ ಸಿಐಡಿ ತನಿಖೆಯ ಹಳಿ ತಪ್ಪಿಸಿ, ಭ್ರಷ್ಟರ ರಕ್ಷಣೆಗೆ, ಕಾಂಗ್ರೆಸ್ ನಾಯಕರು ಪ್ರಯತ್ನಿಸುತ್ತಿದ್ದಾರೆ," ಎಂದು ಆರೋಪಿಸಿದ್ದಾರೆ.

ನನ್ನ ಹಾಗೂ ಮುಖ್ಯಮಂತ್ರಿಯವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಕಾಂಗ್ರೆಸ್ ನಾಯಕರಿಗೆ ಯಾವ ನೈತಿಕತೆ ಇದೆ ? ಎಂದು ಆರಗ ಜ್ಞಾನೇಂದ್ರ ಇದೇ ವೇಳೆ ಪ್ರಶ್ನಿಸಿದ್ದಾರೆ.
Recommended Video
-
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications