ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್ ಅವಧಿಯಲ್ಲಿ ಕೇಸು ಮುಚ್ಚಲು ಸಿದ್ದರಾಮಯ್ಯ ಪರವಾನಗಿ ಪಡೆದಿದ್ರಾ? ಆರಗ ಪ್ರಶ್ನೆ

|
Google Oneindia Kannada News

ಬೆಂಗಳೂರು, ಜು. 07: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಶಾಮೀಲಾಗಿರುವ ಎಲ್ಲಾ ಭ್ರಷ್ಟರನ್ನು ಮಟ್ಟ ಹಾಕುವ ವರೆಗೂ ವಿಶ್ರಾಂತಿ ಪಡೆಯುವುದಿಲ್ಲ.'

ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕೊಟ್ಟಿರುವ ಹೇಳಿಕೆಯಿದು. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ನಿಪ್ಪಾಣಿ ಶಹರ ಹಾಗೂ ಗ್ರಾಮೀಣ ಪೊಲೀಸ್ ಠಾಣೆಗಳ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳನ್ನು ಕಾನೂನಿನ ಕಕ್ಷೆಗೆ ತಂದು ಮಟ್ಟ ಹಾಕುವ ವರೆಗೂ ಸುಮ್ಮನಿರಲ್ಲ. ಪಿಎಸ್ಐ ಅಕ್ರಮದ ತನಿಖೆಯಲ್ಲಿ ಯಾವುದೇ ಹಸ್ತಕ್ಷೇಪ ವಿಲ್ಲ. ಅತ್ಯಂತ ಪಾರದರ್ಶಕವಾಗಿ ತನಿಖೆ ನಡೆಯುತ್ತಿದೆ ಎಂದು ಜ್ಞಾನೇಂದ್ರ ತಿಳಿಸಿದರು.

We will not leave anyone who involved in PSI Recruitment Scam: Araga Jnanendra

ತನಿಖೆಯ ಅತ್ಯಂತ ಪ್ರಾಮಾಣಿಕವಾಗಿ ನಡೆಯುತ್ತಿದೆ. ಆದರೆ ಕಾಂಗ್ರೆಸ್ ನಾಯಕರು ಹತಾಶರಾಗಿ ನ್ಯಾಯಾಂಗ ತನಿಖೆಗೆ ಒತ್ತಾಯಿಸುತ್ತಿದ್ದಾರೆ. ಕಾಂಗ್ರೆಸ್ ಸರಕಾರದ ಅವಧಿಯಲ್ಲಿ, ಸಿಐಡಿ ತನಿಖೆಗೆ ವಹಿಸಲಾದ ಹಲವಾರು ದೂರುಗಳ ಬಗ್ಗೆ FIR ದಾಖಲಾಗಿಲ್ಲ, FIR ಆದ ಪ್ರಕರಣ ಗಳಲ್ಲಿ ಚಾರ್ಜ್ ಶೀಟ್ ಸಲ್ಲಿಸಲಾಗಿಲ್ಲ, ಆದರೆ ಪ್ರಾಮಾಣಿಕವಾಗಿ ತನಿಖೆ ಆಗುತ್ತಿರುವ PSI ವಿಷಯದಲ್ಲಿ ನಮ್ಮ ಸರಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ಅವಧಿಯಲ್ಲಿ ಪಿಎಸ್‌ಐ ಅಕ್ರಮ ನಡೆದಿದ್ದರೆ ಆಗ ಬಿಜೆಪಿ ವಿರೋಧ ಪಕ್ಷವಾಗಿ ಕಡ್ಲೆಪುರಿ ತಿನ್ನುತ್ತಿದ್ದರಾ? ಎಂಬ ಸಿದ್ದರಾಮಯ್ಯ ಹೇಳಿಕೆಗೆ ಖಾರವಾಗಿ ಉತ್ತರಿಸಿದ ಸಚಿವರು "ನಾವು ಕೇಳಿದ್ದೆವು. ಆದರೆ ಅವರು ಸ್ಪಂದಿಸಿರಲಿಲ್ಲ. ಹಾಗಾದರೆ ನಾವುಗಳು ಕೇಳದೇ ಇರುವುದನ್ನು, ಸಿದ್ದರಾಮಯ್ಯ ಅವರು ಕೇಸು ಗಳನ್ನು ಮುಚ್ಚಿ ಹಾಕುವುದಕ್ಕೆ ಸಿಕ್ಕಿದ ಪರವಾನಿಗೆ ಎಂದು ತಿಳಿದಿದ್ದರೇ? ಸರಿಯಾದ ದಿಕ್ಕಿನಲ್ಲಿ ಸಾಗುತ್ತಿರುವ ಸಿಐಡಿ ತನಿಖೆಯ ಹಳಿ ತಪ್ಪಿಸಿ, ಭ್ರಷ್ಟರ ರಕ್ಷಣೆಗೆ, ಕಾಂಗ್ರೆಸ್ ನಾಯಕರು ಪ್ರಯತ್ನಿಸುತ್ತಿದ್ದಾರೆ," ಎಂದು ಆರೋಪಿಸಿದ್ದಾರೆ.

We will not leave anyone who involved in PSI Recruitment Scam: Araga Jnanendra

ನನ್ನ ಹಾಗೂ ಮುಖ್ಯಮಂತ್ರಿಯವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಕಾಂಗ್ರೆಸ್ ನಾಯಕರಿಗೆ ಯಾವ ನೈತಿಕತೆ ಇದೆ ? ಎಂದು ಆರಗ ಜ್ಞಾನೇಂದ್ರ ಇದೇ ವೇಳೆ ಪ್ರಶ್ನಿಸಿದ್ದಾರೆ.

Recommended Video

Bhagwant Mann Singhಗೆ ಮದುವೆಯಲ್ಲಿ Kejriwal ಮುಖ್ಯ ಅತಿಥಿ | *India | OneIndia Kannada

English summary
We will not leave anyone who involved in PSI Recruitment Scam says Home Minister Araga Jnanendra.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X