ರಾಜ್ಯದ ಜನತೆಗೆ ಗುಡ್‌ ನ್ಯೂಸ್‌ ಕೊಟ್ಟ ಸಿಎಂ ಸಿದ್ದರಾಮಯ್ಯ: ಸಂಪೂರ್ಣ ಮಾಹಿತಿ ಇಲ್ಲಿದೆ

ಮೈಸೂರು ಮೇ 24: ಮೊದಲ ಬಾರಿ ಮುಖ್ಯಮಂತ್ರಿಯಾಗಿ ಇಂದಿರಾ ಕ್ಯಾಂಟೀನ್ ಗಳನ್ನು ಬಡವರು, ಕೂಲಿ ಕಾರ್ಮಿಕರು, ಆಸ್ಪತ್ರೆಗಳಿಗೆ ಬರುವ ಜನರ ಹಸಿವನ್ನು ಕಡಿಮೆ ದರದಲ್ಲಿ ನೀಗಿಸುವ ಉದ್ದೇಶದಿಂದ ಆರಂಭಿಸಿದೆ. ರಾಜ್ಯಾದ್ಯಂತ ಹೊಸದಾಗಿ ಇನ್ನೂ 184 ಕ್ಯಾಂಟೀನ್ ಗಳನ್ನು ಆರಂಭಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.

ಹಿನಕಲ್ ನಲ್ಲಿ 9 ಇಂದಿರಾ ಕ್ಯಾಂಟೀನ್ ಗಳನ್ನು ಜನಾರ್ಪಣೆಗೊಳಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಿನಕಲ್ ಗ್ರಾಮ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಗ್ರಾಮ. ಹಂತ ಹಂತವಾಗಿ ಹಿನಕಲ್ ನ ಸಂಪೂರ್ಣ ಅಭಿವೃದ್ಧಿಗೆ ನಾನು ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

We will open 184 more new canteens across the state Siddaramaiah Said

2017 ರಲ್ಲಿ ರಾಹುಲ್ ಗಾಂಧಿಯವರನ್ನು ಕರೆಸಿ ಇಂದಿರಾ ಕ್ಯಾಂಟೀನ್ ಆರಂಭಿಸಿದೆವು. ಆದರೆ ನಂತರ ಬಂದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಡವರ ಕ್ಯಾಂಟೀನ್ ಗಳು ಸೊರಗಿದವು. ಈಗ ನಾವೇ ಮತ್ತೆ ಅಧಿಕಾರಕ್ಕೆ ಬಂದು ಹಿನಕಲ್ ನಲ್ಲೇ ಇಂದಿರಾ ಕ್ಯಾಂಟೀನ್ ಗಳನ್ನು ಉದ್ಘಾಟಿಸಿರುವುದು ಮಾತ್ರವಲ್ಲದೆ, ಹೊಸದಾಗಿ ಇನ್ನೂ 184 ಕ್ಯಾಂಟೀನ್ ಗಳನ್ನು ಆರಂಭಿಸುತ್ತಿದ್ದೇವೆ ಎಂದರು. ಹಿನಕಲ್ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಗ್ರಾಮ. ಈ ಗ್ರಾಮದ ಅಭಿವೃದ್ಧಿಗೆ ಅಗತ್ಯ ಇರುವ ಎಲ್ಲವನ್ನೂ ಹಂತ ಹಂತವಾಗಿ ಮಾಡಲಾಗುವುದು, ಎಂಜಿನಿಯರ್ ಗಳ ನೇಮಕಾತಿ, ಪಿಯುಸಿ ಕಾಲೇಜು ಸೇರಿ ಎಲ್ಲ ಅಭಿವೃದ್ಧಿ ಕಾರ್ಯಗಳನ್ನೂ ನೆರವೇರಿಸಲಾಗುವುದು ಎಂದರು.

ನಮ್ಮ ಸರ್ಕಾರ ಆರಂಭಿಸಿರುವ 600 ಕೋಟಿಗೂ ಅಧಿಕ ವೆಚ್ಚದ ಅನುಭವ ಮಂಟಪವನ್ನು ಮುಂದಿನ ವರ್ಷ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸಕಲ ವೃತ್ತಿಗಳೂ ಪವಿತ್ರ ಎನ್ನುವ ಮಹಾನ್ ಮಾನವೀಯ ಸಂದೇಶವನ್ನು ಜಗತ್ತಿಗೆ ನೀಡಿದ ಬಸವಣ್ಣನವರು ಕ್ರಾಂತಿಪುರುಷ ಮಾತ್ರವಲ್ಲ, ವಿಶ್ವ ವಿಖ್ಯಾತ ಆರ್ಥಿಕ ತಜ್ಞರೂ ಆಗಿದ್ದರು. ಕಾಯಕ ಮತ್ತು ದಾಸೋಹದ ಶ್ರಮ ಸಂಸ್ಕೃತಿಯ ಮಹತ್ವವನ್ನು ಬಸವಣ್ಣ ಇಡೀ ವಿಶ್ವಕ್ಕೆ ನೀಡಿದರು ಎಂದು ವಿವರಿಸಿದರು.

ಬಸವಾದಿ ಶರಣರಿಂದ ಆದ ಜಾತಿ ವ್ಯವಸ್ಥೆ ವಿರುದ್ದದ ಸಾಮಾಜಿಕ ಕ್ರಾಂತಿ ಪ್ರಪಂಚದ ಬೇರೆ ಎಲ್ಲೂ ನಡೆದಿಲ್ಲ. ಸಮ ಸಮಾಜ ಮತ್ತು ಜಾತ್ಯತೀತ ಸಮಾಜ ನಿರ್ಮಾಣಕ್ಕಾಗಿ ಹೋರಾಡಿದ ಬಸವಾದಿ ಶರಣರು ನುಡಿದಂತೆ ನಡೆದರು ಎಂದು ವಿವರಿಸಿದರು. ಜಾತಿ, ವರ್ಗ ರಹಿತ ಮಾನವೀಯ ಸಮಾಜ ಅವರ ತುಡಿತವಾಗಿತ್ತು. ಬಸವಾದಿ ಶರಣರ ಅನುಭಾವವೇ ವಚನಗಳಾಗಿವೆ. ವಚನ‌ ಎಂದರೆ ಮಾತು. ಕನ್ನಡ ಸಾಹಿತ್ಯದಲ್ಲಿ ವಚನ ಮತ್ತು ದಾಸ ಸಾಹಿತ್ಯ ದೊಡ್ಡ ಮೈಲಿಗಲ್ಲು. ಅಕ್ಷರ ಸಂಸ್ಕೃತಿಯಿಂದ ವಂಚಿತರನ್ನಾಗಿ ಮಾಡಲಾಗಿದ್ದವರಿಗೆ ವಚನ ಸಾಹಿತ್ಯ ಆಡು ಮಾತಿನ ಮೂಲಕ ತಲುಪಿತು ಎಂದರು.

ಸಂಸ್ಕೃತ ಕಲಿಯುವ ಶೂದ್ರರ ಕಿವಿಗೆ ಕಾದ ಸೀಸ ಉಯ್ಯುವ ಶಿಕ್ಷೆ ಇದ್ದಿದ್ದರಿಂದ ಶೂದ್ರ ಸಮುದಾಯ ಶಿಕ್ಷಣದಿಂದ ವಂಚಿತರಾದರು. ನನ್ನ ಅಪ್ಪ, ಅಮ್ಮ ಇಬ್ಬರೂ ಶಿಕ್ಷಣದಿಂದ ವಂಚಿತರಾಗಿದ್ದರು. ರಾಜಪ್ಪ ಮೇಸ್ಟ್ರು ಕಾರಣದಿಂದ ನಾನು ನೇರವಾಗಿ ಐದನೇ ತರಗತಿಗೆ ದಾಖಲಾಗಿ ಶಿಕ್ಷಣ ಪಡೆದು ಎರಡು ಬಾರಿ ಮುಖ್ಯಮಂತ್ರಿಯಾದೆ. ಅಂಬೇಡ್ಕರ್ ಅವರ ಕಾರಣದಿಂದ ನನಗೆ ಶಿಕ್ಷಣ ಸಿಕ್ಕರೆ, ಸಂವಿಧಾನದ ಕಾರಣದಿಂದ ನಾನು ಮುಖ್ಯಮಂತ್ರಿಯಾದೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+