ಜೆಡಿಎಸ್‌ ಅಧಿಕಾರಕ್ಕೆ ಬಂದರೆ ನೀಟ್‌ ವಿರುದ್ಧ ನಿರ್ಣಯ; ಎಚ್‌ಡಿಕೆ

ಬೆಂಗಳೂರು, ಮಾರ್ಚ್ 03: ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಎಚ್. ಡಿ. ಕುಮಾರಸ್ವಾಮಿ ನೀಟ್ ಪರೀಕ್ಷೆ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದರು. ವೈದ್ಯ ಶಿಕ್ಷಣದ ಕನಸು ಕಾಣುವ ಬಡ, ಮಧ್ಯಮ ವರ್ಗದ ಬದುಕನ್ನು ಛಿದ್ರಗೊಳಿಸುತ್ತಿರುವ ನೀಟ್ ವಿದ್ಯಾರ್ಥಿಗಳು & ಪೋಷಕರ ಪಾಲಿಗೆ ಮರಣಶಾಸನವಾಗಿದೆ ಎಂದು ಹೇಳಿದ್ದರು.

ಗುರುವಾರ ಅವರು ಮತ್ತೆ ನೀಟ್ ಪರೀಕ್ಷೆ ಬಗ್ಗೆ ಸರಣಿ ಟ್ವೀಟ್‌ ಮಾಡಿದ್ದಾರೆ. '2023ರಲ್ಲಿ ಜೆಡಿಎಸ್ ಸರಕಾರ ಬಂದರೆ ನೀಟ್ ವಿರುದ್ಧ ಅಸೆಂಬ್ಲಿಯಲ್ಲಿ ನಿರ್ಣಯ ಕೈಗೊಳ್ಳುತ್ತೇವೆ. ನಾವು ನೀಟ್ ವಿರೋಧಿಸುತ್ತೇವೆ. ಮಕ್ಕಳ ಜೀವಕ್ಕೆ ಕುಣಿಕೆ ಬಿಗಿದು ಕಂಡವರ ಜೇಬು ಭರ್ತಿ ಮಾಡುವ ಈ ದಂಧೆ ಬೇಕಿಲ್ಲ. ಅದಕ್ಕೆ ಚರಮಗೀತೆ ಹಾಡುತ್ತವೆ' ಎಂದು ಭರವಸೆ ನೀಡಿದ್ದಾರೆ.

ಉಕ್ರೇನ್‌ನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯಲು ಹೋಗಿ ಕರ್ನಾಟಕದ ನೂರಾರು ವಿದ್ಯಾರ್ಥಿಗಳು ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್) ಬಗ್ಗೆ ಪುನಃ ಚರ್ಚೆಗಳು ಆರಂಭವಾಗಿವೆ. ನಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ಇಲ್ಲೇ ಏಕೆ ವೈದ್ಯಕೀಯ ಶಿಕ್ಷಣ ಸಾಧ್ಯವಾಗುತ್ತಿಲ್ಲ? ಎಂಬ ಪ್ರಶ್ನೆ ಎದ್ದಿದೆ.

We Will Pass Resolution Against NEET Exam Says HD Kumaraswamy

ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿ, 'ನೀಟ್ ಬಂದ ಮೇಲೆ ಬಡ, ಮಧ್ಯಮ ವರ್ಗದ ಮಕ್ಕಳಿಗೆ ಅನ್ಯಾಯ ಆಗಿಲ್ಲವೇ? ಲಕ್ಷ ಲಕ್ಷ ಕಿತ್ತು ಪೋಷಕರ ರಕ್ತ ಹೀರುವ ಟ್ಯೂಷನ್ ಅಂಗಡಿಗಳು ಸರಕಾರದ ಕಣ್ಣಿಗೆ ಕಾಣುತ್ತಿಲ್ಲವೇ? ನೀಟ್ ಸುಳಿಗೆ ಸಿಕ್ಕಿ ಜೀವ ಕಳೆದುಕೊಂಡ ಮಕ್ಕಳ ಅತ್ಮರೋಧನೆ ಕೇಳುತ್ತಿಲ್ಲವೇ?' ಎಂದು ಪ್ರಶ್ನಿಸಿದ್ದಾರೆ.

'ಇದೆಲ್ಲವೂ ಸರಕಾರಗಳ ಕಣ್ಣಿಗೆ ಕಾಣುತ್ತಿಲ್ಲ, ವಿದ್ಯಾರ್ಥಿಗಳ ಆರ್ತನಾದ ಕೇಳುತ್ತಿಲ್ಲ ಎಂದರೆ ಸಚಿವರು ಮತ್ತು ಸರಕಾರಕ್ಕೆ ಕಣ್ಣು, ಕಿವಿ ಇಲ್ಲ ಎಂದು ಭಾವಿಸಬೇಕಾಗುತ್ತದೆ' ಎಂದು ಎಚ್. ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬುಧವಾರ ಟ್ವೀಟ್ ಮಾಡಿದ್ದ ಎಚ್. ಡಿ. ಕುಮಾರಸ್ವಾಮಿ, 'ಉಕ್ರೇನ್‌ಗೆ ಮೆಡಿಕಲ್ ಓದಲು ಹೋಗಿ ರಷ್ಯಾ ದಾಳಿಗೆ ತುತ್ತಾದ ವಿದ್ಯಾರ್ಥಿ ನವೀನ್ ದುರಂತ ಸಾವು ನೀಟ್ ವ್ಯವಸ್ಥೆಯ ನಿರ್ಲಜ್ಜ ಮುಖವನ್ನು ಇಡೀ ದೇಶಕ್ಕೆ ದರ್ಶನ ಮಾಡಿಸಿದೆ. ಅರ್ಹತೆ ನೆಪದಲ್ಲಿ ಪ್ರತಿಭಾವಂತ ಆರ್ಥಿಕ ದುರ್ಬಲ & ಗ್ರಾಮೀಣ ವಿದ್ಯಾರ್ಥಿಗಳಿಗೆ ಮಾಡಲಾಗುತ್ತಿರುವ ಅನ್ಯಾಯಕ್ಕೆ ಅಂತ್ಯ ಹಾಡಬೇಕಿದೆ' ಎಂದು ಹೇಳಿದ್ದರು.

'10ನೇ ತರಗತಿಯಲ್ಲಿ ಶೇ 96, 2ನೇ ಪಿಯುಸಿಯಲ್ಲಿ ಶೇ 97ರಷ್ಟು ಅಂಕ ಗಳಿಸಿದ್ದರೂ ನವೀನ್‌ಗೆ ಜಗತ್ತಿನ ಶಿಕ್ಷಣ ಕಾಶಿ ಭಾರತದಲ್ಲಿ ವೈದ್ಯಸೀಟು ಸಿಗಲ್ಲ. ಗ್ರಾಮೀಣ ವಿದ್ಯಾರ್ಥಿಯೊಬ್ಬ ಇಷ್ಟು ಉತ್ತಮ ಅಂಕ ಗಳಿಸುವುದು ಸುಲಭವಲ್ಲ. ಆದರೂ, ಆತನಿಗೆ ನಮ್ಮ ದೇಶದಲ್ಲಿ ವೈದ್ಯ ಶಿಕ್ಷಣವನ್ನು ನಿರಾಕರಿಸಲಾಗಿದೆ' ಎಂದರು.

'ಭಾರತದಲ್ಲಿ ನಿರಾಕರಿಸಲ್ಪಟ್ಟ ಶಿಕ್ಷಣವನ್ನು ಹುಡುಕಿಕೊಂಡು ಉಕ್ರೇನ್‌ಗೆ ಹೋಗಿ, ಅಲ್ಲಿ ಕಲಿತು ಇನ್ನೊಬ್ಬರ ಜೀವ ಉಳಿಸಲು ನೂರುಕಾಲ ಬಾಳಿ ಬದುಕಬೇಕಿದ್ದ ನವೀನ್ ಇಂದು ಜೀವ ಕಳೆದುಕೊಂಡು ವಿಶ್ವಗುರು ಆಗಬೇಕೆಂದು ಹಾತೊರೆಯುತ್ತಿರುವ ಭಾರತದ ಆತ್ಮಸಾಕ್ಷಿಗೆ ಪ್ರಶ್ನೆಯಾಗಿದ್ದಾನೆ. ಇದಕ್ಕೆ ಯಾರು ಹೊಣೆ?' ಎಂದು ಪ್ರಶ್ನಿಸಿದ್ದಾರೆ.

'ನೀಟ್ ಭಾರತದ ಮಧ್ಯಮ, ಬಡವರ್ಗದ ಮಕ್ಕಳ ಮೆಡಿಕಲ್ ಕನಸನ್ನು ಮರೀಚಿಕೆಯನ್ನಾಗಿಸಿದೆ. ಅದು ವಕ್ಕರಿಸಿದ ಮೇಲೆ ಟ್ಯೂಷನ್ ಅಂಗಡಿಗಳು ನಾಯಿಕೊಡೆಗಳಂತೆ ಮೇಲೆದ್ದಿವೆ. ಕೋಟಿ ಕೋಟಿ ವ್ಯಾಪಾರ ಆಗುತ್ತಿದೆ. ಅವು ವಿದ್ಯಾರ್ಥಿಗಳಿಂದ ಲಕ್ಷ ಲಕ್ಷ ಪೀಕುತ್ತಿವೆ ಮತ್ತೂ ಶೇ.99ರಷ್ಟು ಕೋಚಿಂಗ್ ಪಡೆದ ವಿದ್ಯಾರ್ಥಿಗಳೇ ನೀಟ್ ಪಾಸ್ ಮಾಡುತ್ತಿದ್ದಾರೆ. ಸರಕಾರಿ ಶಾಲೆ-ಕಾಲೇಜು ವಿದ್ಯಾರ್ಥಿಗಳಿಗೆ ನೀಟ್ ತೇರ್ಗಡೆ ಕಷ್ಟಸಾಧ್ಯ. ಈ ದೌರ್ಬಲ್ಯವನ್ನರಿತೇ ಟ್ಯೂಷನ್ ಅಂಗಡಿಗಳು ಮಾರುಕಟ್ಟೆ ವಿಸ್ತರಿಸಿ ನವೀನ್‌ರಂಥ ವಿದ್ಯಾರ್ಥಿಗಳ ಶವಗಳ ಮೇಲೆ ರಣಕೇಕೆ ಹಾಕುತ್ತಿವೆ' ಎಂದು ಕುಮಾರಸ್ವಾಮಿ ಆರೋಪಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+