ರೈತರಿಗೆ ಗುಡ್ ನ್ಯೂಸ್: ಪ್ರತಿನಿತ್ಯ 7 ತಾಸು ವಿದ್ಯುತ್​ ಕೊಡುತ್ತೇವೆ ಎಂದ ಸಿದ್ದರಾಮಯ್ಯ

ಬೆಂಗಳೂರು, ನವೆಂಬರ್‌ 06: ರಾಜ್ಯದಾದ್ಯಂತ ಪಂಪ್​ಸೆಟ್​ಗಳಿಗೆ ನಿರಂತರ ಏಳು ಗಂಟೆಗಳ ಅವಧಿಗೆ ವಿದ್ಯುತ್‌ ಒದಗಿಸಲು 600 ಮೆಗಾವ್ಯಾಟ್‌/ಗಂಟೆ ಹಾಗೂ ಪ್ರತಿದಿನಕ್ಕೆ 14 ಮಿಲಿಯನ್‌ ಯುನಿಟ್‌ಗಳ ಅಗತ್ಯವಿದೆ. ಇಂದಿನಿಂದ ರೈತರ ಪಂಪ್​ಸೆಟ್​ಗಳಿಗೆ 7 ತಾಸು ವಿದ್ಯುತ್ ಪೂರೈಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಈ ಕುರಿತು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಇಂಧನ ಇಲಾಖೆ ಪರಿಶೀಲನಾ ಸಭೆಯನ್ನ ನಡೆಸಿದ್ದು, ಸಭೆಯ ಬಳಿಕ ಮಾತನಾಡಿದ ಅವರು, ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಪ್ರತಿದಿನ ಏಳು ತಾಸು ವಿದ್ಯುತ್‌ ನೀಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಯಿತು. ಇದಕ್ಕಾಗಿ ಸುಮಾರು 1500 ಕೋಟಿ ರೂ. ಅಗತ್ಯವಿದೆ ಎಂದು ಅಂದಾಜಿಸಲಾಗಿದೆ. ಅನುದಾನದ ಉಳಿತಾಯ, ಮರುಹಂಚಿಕೆಯ ಮೂಲಕ ಈ ವೆಚ್ಚ ಭರಿಸಲಾಗುವುದು ಎಂದು ಹೇಳಿದ್ದಾರೆ.

We Will Provide 7 Hour Electricity To The Pump Sets Says CM Siddaramaiah

ಮೂರು ವಾರಗಳ ಹಿಂದೆ ಇದೇ ಇಲಾಖೆ ಜೊತೆ ಸಭೆ ಮಾಡಿ ಶಾರ್ಟೇಜ್‌ ಇದೆ ಅಂತೇಳಿ ಪಂಪ್ ಸೆಟ್ ಗಳಿಗೆ 7 ಗಂಟೆ ವಿದ್ಯುತ್ ನೀಡುವುದಾಗಿ ಹೇಳಿದ್ದೆವು. ಇನ್ನೂ ಕೆಲವು ಕಡೆ ಜನ ನಿರಂತರವಾಗಿ 5 ಗಂಟೆ ವಿದ್ಯುತ್ ಕೊಟ್ರೆ ಸಾಕು ಅಂದಿದ್ದರು. ಆಗ 3 ಪೇಸ್ 5 ಗಂಟೆ ವಿದ್ಯುತ್ ನೀಡುವಂತೆ ಸೂಚನೆ ಕೊಟ್ಟಿದ್ದೆ. ರಾಯಚೂರು, ಕೊಪ್ಪಳ, ಯಾದಗಿರಿ ಜನರು ಭೇಟಿ ಮಾಡಿ‌ 7 ಗಂಟೆ ವಿದ್ಯುತ್ ಕೊಡ್ಬೇಕು ಅಂದ್ರು. ಈ ಭಾಗದಲ್ಲಿ 7 ಗಂಟೆ ಕೊಡ್ಬೇಕು ಅಂತ‌ ಅಧಿಕಾರಿಗಳಿಗೆ ಹೇಳಿದ್ದೆ, ರಾಯಚೂರು, ಬಳ್ಳಾರಿ‌ನಲ್ಲಿ ಥರ್ಮಲ್ ಪವರ್ ಉತ್ಫಾದನೆ ಆಗುತ್ತೆ. ಅದು ಈಗ ಒಂದು‌ ಸಾವಿರ ಮೆಗಾ ವ್ಯಾಟ್ ಉತ್ಪತ್ತಿ ಆಗುತ್ತಿದೆ. ಮೂರು ಸಾವಿರದ ಇನ್ನೂರು ಮೆಗಾ ವ್ಯಾಟ್ ಉತ್ಪಾದನೆ ಹೆಚ್ಚು ಮಾಡಿದ್ದೇವೆ. ರಾಜ್ಯದ ವಿದ್ಯುತ್ ಬೇರೆಯವರಿಗೆ ಕೊಡಬಾರದು. ಇವತ್ತಿನಿಂದ 7 ತಾಸು ವಿದ್ಯುತ್ ಪಂಪ್‌ ಸೆಟ್ ಗಳಿಗೆ ಕೊಡ್ತೇವೆ ಎಂದು ಹೇಳಿದರು.

ಮುಂದಿನ ವರ್ಷದಲ್ಲಿ ಐಪಿ ಸೆಟ್‌ಗಳಿಗೆ ವಿದ್ಯುತ್‌ ಪೂರೈಕೆಯನ್ನು ಸೌರವಿದ್ಯುತ್‌ ಮೂಲದಿಂದ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ (Solarisation of EIP Feeders). ಟೆಂಡರ್‌ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮುಂದಿನ ವರ್ಷದ ವೇಳೆಗೆ ಹಗಲು ವೇಳೆಯಲ್ಲಿಯೇ ರೈತರಿಗೆ ವಿದ್ಯುತ್‌ ನೀಡಲು ಇದರಿಂದ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

We Will Provide 7 Hour Electricity To The Pump Sets Says CM Siddaramaiah

2022 ನೇ ಇಸವಿಗೆ ಹೋಲಿಸಿದರೆ 2023 ರಲ್ಲಿ ವಿದ್ಯುತ್‌ ಬೇಡಿಕೆ ಸರಾಸರಿ ಶೇ. 43 ರಷ್ಟು ಹೆಚ್ಚಿದೆ. ಅಕ್ಟೋಬರ್‌ ತಿಂಗಳಲ್ಲಿ 15,978 ಮೆಗಾವ್ಯಾಟ್‌ ಬೇಡಿಕೆ ದಾಖಲಾಗಿದೆ. ವಿದ್ಯುತ್‌ ಬಳಕೆಯಲ್ಲಿ ಕಳೆದ ವರ್ಷಕ್ಕಿಂತ ಶೇ. 45 ರಷ್ಟು ಹೆಚ್ಚಿದೆ. ಕೃಷಿ ಬಳಕೆಯಲ್ಲಿ ಶೇ. 55ರಿಂದ 119 ರಷ್ಟು ಹೆಚ್ಚಳವಾಗಿದೆ. ಇತರ ವಿಭಾಗಗಳಲ್ಲಿ ಶೇ. 9 ರಿಂದ 14 ರಷ್ಟು ಹೆಚ್ಚಳವಾಗಿದೆ. ಮಳೆ ಕೊರತೆ, ವಾಡಿಕೆಗಿಂತ ಮೊದಲೇ ಐಪಿ ಸೆಟ್‌ ಗಳ ಬಳಕೆ ಪ್ರಾರಂಭವಾಗಿರುವುದು ಹಾಗೂ ಕೋವಿಡ್‌ 19 ರ ನಂತರದ ಆರ್ಥಿಕ ಪುನಶ್ಚೇತನ ಇದಕ್ಕೆ ಕಾರಣವಾಗಿದೆ ಎಂದು ಹೇಳಿದರು.

ಕಳೆದ ಬಾರಿ ಪ್ರಗತಿ ಪರಿಶೀಲನೆಯ ನಂತರ ರಾಯಚೂರು, ಬಳ್ಳಾರಿ ಉಷ್ಣವಿದ್ಯುತ್‌ ಸ್ಥಾವರಗಳ ಉತ್ಪಾದನೆ ಹೆಚ್ಚಾಗಿದೆ. ಉತ್ತರ ಪ್ರದೇಶ, ಪಂಜಾಬ್‌ ಮತ್ತು ಹಿಮಾಚಲ ಪ್ರದೇಶಗಳಿಂದ ವಿದ್ಯುತ್‌ ಪಡೆಯಲಾಗುತ್ತಿದೆ. ಸೆಕ್ಷನ್‌ 11 ಅಡಿ ಬೇರೆ ರಾಜ್ಯಗಳಿಗೆ ವಿದ್ಯುತ್‌ ನೀಡದಂತೆ ಆದೇಶ ಹೊರಡಿಸಿ, ವಿದ್ಯುತ್‌ ಪಡೆಯಲಾಗುತ್ತಿದೆ. ಆ ಮೂಲಕ ವಿದ್ಯುತ್‌ ವಿತರಣೆ ಸಹಜ ಸ್ಥಿತಿಗೆ ಬಂದಿದೆ. ನೋಡಲ್‌ ಅಧಿಕಾರಿಗಳು ನಿರಂತರವಾಗಿ ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ. ವಿವಿಧ ವಿದ್ಯುತ್‌ ಸರಬರಾಜು ಕಂಪೆನಿಗಳ ವ್ಯಾಪ್ತಿಯಲ್ಲಿ ರೈತರ ಅಗತ್ಯತೆಗನುಗುಣವಾಗಿ ಐದರಿಂದ ಏಳು ಗಂಟೆಗಳ ಅವಧಿಗೆ ನಿರಂತರ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+