HD Deve Gowda: ಮೇಕೆದಾಟು ಕಟ್ಟುತ್ತೇವೆ ಎಂದು ಜೆಡಿಎಸ್ ಪ್ರಣಾಳಿಕೆಯಲ್ಲಿ ಹಾಕುತ್ತೇವೆ ಎಂದು ಗುಡುಗಿದ ದೇವೇಗೌಡ್ರು
ಬೆಂಗಳೂರು,ಮಾರ್ಚ್ 24: ರಾಜ್ಯಕ್ಕೆ ಅತ್ಯಗತ್ಯವಾಗಿ ಬೇಕಿರುವ ಮೇಕೆದಾಟು ಕುಡಿಯುವ ನೀರಿನ ಯೋಜನೆಯನ್ನು ತನ್ನ ಲೋಕಸಭೆ ಚುನಾವಣೆಯ ಪ್ರಣಾಳಿಕೆಯಲ್ಲಿಯೇ ವಿರೋಧಿಸಿರುವ ಡಿಎಂಕೆ ಪಕ್ಷದ ನಡೆಯನ್ನು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಕಠಿಣ ಶಬ್ದಗಳಲ್ಲಿ ಖಂಡಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ರಾಜಕೀಯ ಪಕ್ಷಗಳು ಮೇಕೆದಾಟು ಯೋಜನೆಯನ್ನು ಬೆಂಬಲಿಸಿ ಅದನ್ನು ಕಾರ್ಯಗತಗೊಳಿಸುವ ಅಚಲ ನಿರ್ಧಾರವನ್ನು ಇದೇ ಚುನಾವಣೆಯ ಪ್ರಣಾಳಿಕೆಯಲ್ಲಿ ಪ್ರಕಟಿಸಲಿ. ಜೆಡಿಎಸ್, ಬಿಜೆಪಿ, ಕಾಂಗ್ರೆಸ್ ಸೇರಿ ಎಲ್ಲಾ ಪಕ್ಷಗಳು ದೃಢ ಹೆಜ್ಜೆಯನ್ನು ಇಡಲಿ ಎಂದು ಆಗ್ರಹಪಡಿಸಿದರು.

ತಮಿಳುನಾಡಿನ ಮುಖ್ಯಮಂತ್ರಿ ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಮೇಕೆದಾಟು ವಿರೋಧಿ ಅಂಶವನ್ನು ಸೇರಿಸುವುದನ್ನು ಜೆಡಿಎಸ್ ಖಂಡಿಸುತ್ತದೆ. ನಾವು ಕೂಡ ಜೆಡಿಎಸ್ ಪಕ್ಷದ ಪ್ರಣಾಳಿಕೆಯಲ್ಲಿ ಮೇಕೆದಾಟು ಬೆಂಬಲಿಸಿ ಆ ಕುಡಿಯುವ ನೀರಿನ ಯೋಜನೆಯನ್ನು ಜಾರಿ ಮಾಡುತ್ತೇವೆ ಎಂದು ಜನರಿಗೆ ತಿಳಿಸುತ್ತೇವೆ ಎಂದು ಗುಡುಗಿದರು.
ಇಂತಹ ಬೆದರಿಕೆಗಳಿಗೆ ಯಾವುದೇ ರೀತಿಯ ಭಯ ಪಡಬೇಕಾಗಿಲ್ಲ. ಚುನಾವಣೆ ಮುಗಿದ ಮೇಲೆ ಮೇಕೆದಾಟು ಅಣೆಕಟ್ಟು ಕಟ್ಟಲು ನಾನೊಬ್ಬನೇ ಅಲ್ಲ, ರಾಜ್ಯ ಸರಕಾರ, ಮುಖ್ಯಮಂತ್ರಿಗಳು, ಬಿಜೆಪಿ ನಾಯಕರಾದ ಯಡಿಯೂರಪ್ಪ ಸಮೇತ ಹೋರಾಟ ಮಾಡೋಣ.
ಅದಕ್ಕೂ ಮೊದಲು ಮೇಕೆದಾಟು ಕಟ್ಟಲು ಮ್ಯಾನಿಫೆಸ್ಟೋದಲ್ಲಿ ಹಾಕೋಣ ಹಾಗೂ ಆ ನಿಟ್ಟಿನಲ್ಲಿ ಸಮಸ್ತ ಕನ್ನಡಿಗರಿಗೆ ಭರವಸೆ ನೀಡೋಣ. ಡಿಎಂಕೆ ಮಿತ್ರಪಕ್ಷವಾದ ಕಾಂಗ್ರೆಸ್ ಕೂಡ ಮೇಕೆದಾಟು ಯೋಜನೆ ಬೆಂಬಲಿಸಿ ಪ್ರಣಾಳಿಕೆಯಲ್ಲಿ ಜನತೆಗೆ ಭರವಸೆ ನೀಡಲಿ ಎಂದು ಆಗ್ರಹಪಡಿಸಿದರು.
ತಮಿಳುನಾಡು ಪರ ವಕೀಲ ಶೇಖರ್ ನಫಾರ್ಡ್ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸುವಾಗ ಮೇಕೆದಾಟು ಅಣೆಕಟ್ಟು ಕಟ್ಟಲಿ. ನಮ್ಮದೇನೂ ಅಭ್ಯಂತರ ಇಲ್ಲ ಎಂದು ಹೇಳಿದ್ದಾರೆ. ಅದರಿಂದ ನಾನು ರಾಜ್ಯ ಸರಕಾರಕ್ಕೆ ಮನವಿ ಮಾಡುತ್ತೇನೆ. ಡಿಎಂಕೆ ಅವರು ಪ್ರಣಾಳಿಕೆಯಲ್ಲಿ ಮೇಕೆದಾಟು ವಿರೋಧಿ ನಿಲುವು ಪ್ರಕಟಿಸದಂತೆ, ಇವರು ಕೂಡ ಪ್ರಣಾಳಿಕೆಯಲ್ಲಿ ಮೇಕೆದಾಟು ಪರವಾಗಿ ನಿಲುವು ಪ್ರಕಟಿಸಲಿ ಎಂದರು.
ನಾನು ದೆಹಲಿಗೆ ಯಾಕಾಗಿ ಹೋದೆ? ಮೇಕೆದಾಟು ಮಾಡಲು ಬಿಡೋದೇ ಇಲ್ಲ ಅಂತಾರೆ. ನಾವು ನಮ್ಮ ಮ್ಯಾನಿಫೆಸ್ಟೋದಲ್ಲಿ ಹಾಕ್ತೀವಿ. ಮೇಕೆದಾಟು ನಮ್ಮ ರಾಜ್ಯದಲ್ಲಿದೆ. ಇದರಲ್ಲಿ ಎರಡನೇ ಮಾತಿಲ್ಲ ಎಂದು ಅವರು ನೇರ ಮಾತುಗಳಲ್ಲಿ ಹೇಳಿದರು.
ನಮ್ಮ ಪ್ರಣಾಳಿಕೆಯಲ್ಲಿ ಮೇಕೆದಾಟು ಪ್ರವಾದ ಅಂಶ ಸೇರಿಸುತ್ತೇವೆ. ಇದರಲ್ಲಿ ಯಾವುದೇ ರಾಜಿ ಇಲ್ಲ. ರಾಜ್ಯದ ಬಗ್ಗೆ ರಾಜಿ ಮಾಡಿಕೊಳ್ಳುವ ಪ್ರಶ್ನೆ ಬರುವುದೇ ಇಲ್ಲ. ಆದರೆ, ಸಿದ್ದರಾಮಯ್ಯ ಅವರು ತಮ್ಮ ಬಜೆಟ್ ನಲ್ಲಿಯೇ ಮೇಕೆದಾಟು ಯೋಜನೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಬಿಜೆಪಿ ಕೂಡ ಪ್ರಣಾಳಿಕೆಯಲ್ಲಿ ಹಾಕಲಿ. ನಾವು ಮೂರು ಪಕ್ಷಗಳು ಒಟ್ಟುಗೂಡಿಯೇ ಹೋರಾಡಬೇಕು. ದೇವೇಗೌಡರು ಒಬ್ಬರು ಮಾತ್ರ ವೈಯಕ್ತಿಕವಾಗಿ ಹೆಸರು ತಗೋಬೇಕಿಲ್ಲ ಎಂದು ತಿಳಿಸಿದರು.
ಇದು ಕಾಂಗ್ರೆಸ್, ಬಿಜೆಪಿ, ಡಿಎಂಕೆ ಅಥವಾ ಯಾವ ಪಕ್ಷದ ಯೋಜನೆ ಅಲ್ಲ. ಜನಪರವಾದ ಯೋಜನೆ. ಕುಡಿಯುವ ನೀರಿಗಾಗಿ ಜನ ಸಮಸ್ಯೆಗೆ ಒಳಗಾಗಿದ್ದಾರೆ. ಕಾವೇರಿ ಕೊಳ್ಳದ ಒಂಬತ್ತು ಜಿಲ್ಲೆಗಳಲ್ಲಿ ಜಲ ಸಂಕಷ್ಟ ಎದುರಾಗಿದೆ. ನಾನು ಕೈ ಮುಗಿದು ಎಲ್ಲರಿಗೂ ಮನವಿ ಮಾಡುತ್ತೇನೆ. ಮೇಕೆದಾಟು ಯೋಜನೆಯಿಂದ ಐದು ಸಾವಿರ ಎಕರೆ ಮುಳುಗಡೆ ಆಗಲ್ಲ. ಈ ಅಂಶವನ್ನು ಪರಿಸರ ನಿಪುಣರು ಅರ್ಥ ಮಾಡಿಕೊಳ್ಳಬೇಕು ಎಂದರು.
ಅಧಿಕಾರಿಗಳು, ನೀರಾವರಿ ತಜ್ಞರು ಮೇಕೆದಾಟು ಯೋಜನೆಯಿಂದ 30 ಟಿಎಂಸಿ ನೀರು ಬಳಕೆ ಮಾಡಿಕೊಳ್ಳಬಹುದು ಎಂದು ಹೇಳಿದ್ದಾರೆ. ಈ ಯೋಜನೆಯ ಬಗ್ಗೆ 2018ರಲ್ಲಿಯೆ ಕೇಂದ್ರ ಸರ್ಕಾರ ಈ ಯೋಜನೆಯ ಕಾರ್ಯ ಸಾಧ್ಯತೆಯ ವರದಿಯನ್ನು ಕೇಂದ್ರೀಯ ಜಲ ಆಯೋಗಕ್ಕೆ ಸಲ್ಲಿಸಿತ್ತು. ಈ ವರದಿಯನ್ನು ಒಪ್ಪಿದ ನಂತರ ಸಮಗ್ರ ಯೋಜನಾ ವರದಿ (DPR) ಸಲ್ಲಿಸುವಂತೆ ರಾಜ್ಯಕ್ಕೆ ಸೂಚಿಸಿತ್ತು. ಅದರಂತೆ 2019ರಲ್ಲಿ ರಾಜ್ಯ ಸರ್ಕಾರ DPR ಸಲ್ಲಿಸಿದೆ. ಇದಕ್ಕೆ ಪ್ರಧಾನಮಂತ್ರಿಗಳು ಅನುಮತಿ ಕೊಡಿಸಬೇಕು ಹಾಗೂ ಈ ಮೇಕೆದಾಟು ಯೋಜನೆ ವಿಷಯದಲ್ಲಿ ಪ್ರಧಾನಮಂತ್ರಿಗಳು ಮಧ್ಯಸ್ಥಿಕೆ ವಹಿಸಬೇಕು ಎಂದು ಮಾಜಿ ಪ್ರಧಾನಿಗಳು ಮನವಿ ಮಾಡಿಕೊಂಡರು.
ಪ್ರಧಾನಿ ಮೋದಿ ಮತ್ತು ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಶೇಖಾವತ್ ಅವರಿಗೆ ವಿವರವಾಗಿ ಮೇಕೆದಾಟು ಯೋಜನೆ ಬಗ್ಗೆ ಪತ್ರ ಬರೆದಿದ್ದೇನೆ. ಬೆಂಗಳೂರಿಗೆ ಕುಡಿಯುವ ನೀರಿಗಾಗಿ ಮೇಕೆದಾಟು ಯೋಜನೆಗೆ ಅವಕಾಶ ನೀಡಬೇಕು ಎಂದು ಮನವರಿಕೆ ಮಾಡಿಕೊಟ್ಟಿದ್ದೇನೆ. ತಮಿಳುನಾಡಿಗೆ ನೀರು ಬಿಡುವುದನ್ನು ನಿಯಂತ್ರಿಸಬೇಕು ಎಂದು ಪತ್ರ ಬರೆದಿದ್ದೇನೆ ಎಂದು ಇದೇ ವೇಳೆ ಅವರು ಮಾಹಿತಿ ನೀಡಿದರು.
ಮೇಕೆದಾಟು ಯೋಜನೆ ವಿಚಾರದಲ್ಲಿ ರಾಜಕೀಯ ಆನಗತ್ಯ. ಯಾರೂ ಇದರಲ್ಲಿ ರಾಜಕೀಯ ಬೆರೆಸಬೇಡಿ. ಕುಡಿಯುವ ನೀರಿಗೆ ಮೊದಲ ಆದ್ಯತೆ ಕೊಡಬೇಕು. ಮಾನವೀಯತೆಯಿಂದ ಮೇಕೆದಾಟು ಬಗ್ಗೆ ಎಲ್ಲರೂ ಯೋಚನೆ ಮಾಡಬೇಕು. ಇಲ್ಲಿ ರಾಜ್ಯ ಸರಕರದ ವೈಫಲ್ಯ ಅಂತಲ್ಲ. ತಮಿಳುನಾಡು ರಾಜ್ಯದವರು ಪ್ರತೀ ದಿನ ಕೋರ್ಟಿಗೆ ಪಿಟಿಷನ್ ಹಾಕ್ತಿದ್ದಾರೆ ಎಂದು ಉತ್ತರ ನೀಡಿದರು.
ಕಾವೇರಿ ಕೊಳ್ಳದ 9 ಜಿಲ್ಲೆಯ 22 ತಾಲೂಕು, ಬೆಂಗಳೂರು ನಗರವೂ ಸೇರಿ ಅನೇಕ ಕಡೆ ಕುಡಿಯುವ ನೀರಿನ ಸಮಸ್ಯೆ ತುಂಬಾ ಭೀಕರವಾಗಿದೆ. ಕಳೆದ ಐದು ದಿನಗಳಿಂದ ಕೆಲವರು ಮನೆಗಳಿಗೆ ಬೀಗ ಹಾಕಿ ವಲಸೆ ಹೋಗಿದ್ದಾರೆ. ಕುಡಿಯಲು ನೀರಿಲ್ಲ, ಈ ಭೀಕರ ಸಮಸ್ಯೆಗೆ ಪರಿಹಾರ ಒದಗಿಸಲು ರಾಜ್ಯ ಸರಕಾರದಿಂದ ಸಾಧ್ಯವಾಗಿಲ್ಲ. ಹೀಗಾಗಿ ಜನರು ತಮ್ಮ ಮನೆಗಳಿಗೆ ಬೀಗ ಹಾಕಿ ಬೇರೆ ಊರುಗಳಿಗೆ ಹೋಗ್ತಿದ್ದಾರೆ ಎಂದು ರಾಜ್ಯದ ಜಲ ಸಂಕಷ್ಟವನ್ನು ಎಳೆಎಳೆಯಾಗಿ ಬಿಡಿಸಿಟ್ಟರು.
ತಮಿಳುನಾಡು ಸಿಎಂ ಬಹಳ ಕಠೋರವಾದ ನಿಲುವು ತೆಗೆದುಕೊಂಡಿದ್ದಾರೆ. ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಕರ್ನಾಟಕಕ್ಕೆ ಮೇಕೆದಾಟು ಅಣೆಕಟ್ಟು ಕಟ್ಟಲು ಬಿಡಲ್ಲ ಅಂತಾ ಕಠಿಣವಾದ ಅಂಶ ಸೇರಿಸಿದ್ದಾರೆ. ನಾನೂ ಬೇರೆ ಶಬ್ದ ಬಳಕೆ ಮಾಡಬಹುದು. ಆದರೆ 'ಕಠಿಣವಾದ' ಎನ್ನುವ ಪದವನ್ನಷ್ಟೇ ತೆಗೆದುಕೊಂಡಿದ್ದೇನೆ ಎಂದು ಖಾರವಾಗಿ ತಿರುಗೇಟು ಕೊಟ್ಟ ಅವರು, 1964ರಲ್ಲಿ ವಿಧಾನಸಭೆಯಲ್ಲಿ ಒಂದು ಖಾಸಗಿ ನಿರ್ಣಯ ಮಂಡನೆ ಮಾಡಿದ್ದೆ ನಾನು. ನಮ್ಮ ರಾಜ್ಯದ ಸಂಪನ್ಮೂಲಗಳಿಂದ ಹೇಮಾವತಿ, ಹಾರಂಗಿ, ಕಬಿನಿ ಯೋಜನೆಗಳನ್ನು ಕಾರ್ಯಗತ ಮಾಡಬೇಕು ಎಂದು ನಾನು ವಾದ ಮಂಡನೆ ಮಾಡಿದ್ದೆ. ಅದು ಸಾಧ್ಯ ಆಯಿತು. ಇದನ್ನು ಅವರು ತಿಳಿದುಕೊಳ್ಳಬೇಕು ಎಂದು ಹೇಳಿದರು.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು












Click it and Unblock the Notifications