'ಬೇಡಿಕೆಗೆ ಸರ್ಕಾರ ಬಗ್ಗದಿದ್ದರೆ, ವೃತ್ತಿ ತೊರೆಯುವ ಬೆದರಿಕೆ'

Posted By:
Subscribe to Oneindia Kannada

ಬೆಂಗಳೂರು, ನವೆಂಬರ್ 03: ಕರ್ನಾಟಕ ಸರ್ಕಾರ 'ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಮಸೂದೆ (ತಿದ್ದುಪಡಿ) 2017'ನ್ನು ಕೈಬಿಡಬೇಕು ಎಂದು ಆಗ್ರಹಿಸಿ ಖಾಸಗಿ ಆಸ್ಪತ್ರೆಗಳ ವೈದ್ಯರು ಹಮ್ಮಿಕೊಂಡಿರುವ ಒಂದು ದಿನದ ಮುಷ್ಕರ ಆರಂಭವಾಗಿದೆ. ಬೇಡಿಕೆಗಳು ಈಡೇರದಿದ್ದರೆ ವೃತ್ತಿಯನ್ನು ತೊರೆಯುವುದಾಗಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರ, ಸರ್ಕಾರಿ ಆಸ್ಪತ್ರೆಯೇ ದಿಕ್ಕು

ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆ 2017ಕ್ಕೆ (ಕೆಪಿಎಂಇ) ಮಾಡಿರುವ ತಿದ್ದುಪಡಿಯಲ್ಲಿನ ಕೆಲವು ಅಂಶಗಳನ್ನು ಕೈಬಿಡುವಂತೆ ಆಗ್ರಹಿಸಿ ಭಾರತೀಯ ವೈದ್ಯ ಸಂಘದ (ಐಎಂಎ) ರಾಜ್ಯ ಘಟಕದ ಸದಸ್ಯರು ಶುಕ್ರವಾರ ಹೊರ ರೋಗಿಗಳ ಚಿಕಿತ್ಸಾ ಸೇವೆಯನ್ನು ಸ್ಥಗಿತಗೊಳಿಸಿ ಪ್ರತಿಭಟನೆ, ಮುಷ್ಕರ ನಡೆಸಿದ್ದಾರೆ.

In Pics : ವೈದ್ಯರ ಮುಷ್ಕರದಿಂದ ರೋಗಿಗಳ ನೀಗದ ಸಂಕಷ್ಟ

DR Ravindra

ತುರ್ತು ಸೇವೆಗಳನ್ನು ಹೊರತು ಪಡಿಸಿ ಹೊರ ರೋಗಿಗಳ ಸೇವೆಗಳು ಸ್ಥಗಿತಗೊಂಡಿವೆ. ಕರ್ನಾಟಕದಲ್ಲಿ ಶೇ 70ರಷ್ಟು ಹೊರರೋಗಿಗಳ ಪ್ರಕರಣಗಳನ್ನು ಖಾಸಗಿ ಆಸ್ಪತ್ರೆಗಳು ನಿರ್ವಹಿಸುತ್ತಿವೆ.

ಖಾಸಗಿ ಆಸ್ಪತ್ರೆಗಳ ಮುಷ್ಕರ : ಡಾ.ದೇವಿ ಪ್ರಸಾದ್ ಶೆಟ್ಟಿ ಖಡಕ್ ಸಂದೇಶ

ಈ ಕಾಯ್ದೆಯಿಂದ ಡಾಕ್ಟರ್ ಗಳ ಆತ್ಮವಿಶ್ವಾಸಕ್ಕೆ ಧಕ್ಕೆ ಉಂಟಾಗುತ್ತದೆ. ನವೆಂಬರ್ 10ರೊಳಗೆ ನಮ್ಮ ಬೇಡಿಕೆಗಳಿಗೆ ಸರ್ಕಾರದಿಂದ ಸಮರ್ಪಕ ಪರಿಹಾರ ಸಿಗದಿದ್ದರೆ, ಸಾಮೂಹಿಕವಾಗಿ ವೃತ್ತಿ ತೊರೆಯುವ ಮೂಲಕ ಪ್ರತಿಭಟನೆ ಮುಂದುವರೆಸಲಾಗುವುದು ಇಂಡಿಯನ್ ಮೆಡಿಕಲ್ ಅಸೋಸಿಯೆಷನ್ ನ ಕರ್ನಾಟಕ ಘಟಕದ ಚುನಾಯಿತ ಅಧ್ಯಕ್ಷ ಡಾ. ರವೀಂದ್ರ ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
'If the government does not listen to us, we will quit our profession by November 10' Dr Ravindra, President-elect of the Indian Medical Association (IMA), Karnataka. All Private hospitals in Karnataka on one day strike.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ