ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಮ್ಮ ಸರ್ಕಾರದ ಶಕ್ತಿ ತೋರಿಸುತ್ತೇವೆ : ಡಿ.ಕೆ.ಶಿವಕುಮಾರ್

|
Google Oneindia Kannada News

ಬೆಂಗಳೂರು, ಜನವರಿ 16 : '1 ರಿಂದ 2 ಶಾಸಕರನ್ನು ಹೊರತು ಪಡಿಸಿ ಎಲ್ಲರೂ ನಮ್ಮ ಜೊತೆ ಇದ್ದಾರೆ. ನಮ್ಮ ಸರ್ಕಾರದ ಶಕ್ತಿ ಏನು? ಎಂದು ತೋರಿಸುತ್ತೇವೆ' ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.

ಬುಧವಾರ ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, 'ಎಲ್ಲಾ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಯಾವುದೇ ಶಾಸಕರು ರಾಜೀನಾಮೆ ನೀಡುವುದಿಲ್ಲ' ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಮ್ಮಿಶ್ರ ಸರ್ಕಾರ ಉಳಿಸಲು ಕಾಂಗ್ರೆಸ್‌ನ 5 ತಂತ್ರಗಳು!ಸಮ್ಮಿಶ್ರ ಸರ್ಕಾರ ಉಳಿಸಲು ಕಾಂಗ್ರೆಸ್‌ನ 5 ತಂತ್ರಗಳು!

'ಎಲ್ಲಾ ಶಾಸಕರು ನಮ್ಮ ಜೊತೆಯೇ ಇದ್ದಾರೆ ಜನವರಿ 18ರಂದು ನಡೆಯುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲರೂ ಪಾಲ್ಗೊಳ್ಳಲಿದ್ದಾರೆ. ಸರ್ಕಾರದ ಶಕ್ತಿ ಏನು ಎಂಬುದನ್ನು ನಾವು ತೋರಿಸುತ್ತೇವೆ' ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ಯಡಿಯೂರಪ್ಪಗೆ ಸಿಎಂ ಆಗೋ ಆಸೆ ಇನ್ನೂ ಹೋಗಿಲ್ಲ : ಸಿದ್ದರಾಮಯ್ಯಯಡಿಯೂರಪ್ಪಗೆ ಸಿಎಂ ಆಗೋ ಆಸೆ ಇನ್ನೂ ಹೋಗಿಲ್ಲ : ಸಿದ್ದರಾಮಯ್ಯ

ಬಿಜೆಪಿಯ ಆಪರೇಷನ್ ಕಮಲದ ಯೋಜನೆ ಸದ್ಯಕ್ಕೆ ವಿಫಲವಾಗಿದೆ. ಗುರುಗ್ರಾಮದಲ್ಲಿರುವ ಬಿಜೆಪಿ ಶಾಸಕರು ಇಂದು ರಾತ್ರಿ ಬೆಂಗಳೂರಿಗೆ ವಾಪಸ್ ಆಗುವ ಸಾಧ್ಯತೆ ಇದೆ. ಜನವರಿ 18ರಂದು ನಡೆಯಲಿರುವ ಕಾಂಗ್ರೆಸ್ ಸಭೆ ಕುತೂಹಲಕ್ಕೆ ಕಾರಣವಾಗಿದೆ.

ರಮೇಶ್ ಜಾರಕಿಹೊಳಿಗೆ ಮತ್ತೆ ಸಚಿವ ಸ್ಥಾನ, ಕೇಳಿದ ಖಾತೆ?ರಮೇಶ್ ಜಾರಕಿಹೊಳಿಗೆ ಮತ್ತೆ ಸಚಿವ ಸ್ಥಾನ, ಕೇಳಿದ ಖಾತೆ?

ಮೈತ್ರಿ ಸರ್ಕಾರಕ್ಕೆ ಆತಂಕವಿಲ್ಲ

ಮೈತ್ರಿ ಸರ್ಕಾರಕ್ಕೆ ಆತಂಕವಿಲ್ಲ

'ಬಿಜೆಪಿ ಅವರು ಕುದುರೆ ವ್ಯಾಪಾರದಲ್ಲಿ ತೊಡಗಿದ್ದಾರೆ. ಆದರೆ, ಮೈತ್ರಿ ಸರ್ಕಾರ ಪತನಗೊಳ್ಳಲಿದೆ ಎಂಬ ಆತಂಕ ನಮಗಿಲ್ಲ. ಕೆ.ಸಿ.ವೇಣುಗೋಪಾಲ್ ಮತ್ತು ಡಾ.ಜಿ.ಪರಮೇಶ್ವರ ಅವರ ಜೊತೆ ಮಾತನಾಡಿ ಖಚಿತಪಡಿಸಿಕೊಂಡಿದ್ದೇನೆ. ಬಿಜೆಪಿಯವರು ಸುಭದ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಹೇಗೆ ಪ್ರಯತ್ನ ನಡೆಸಿದ್ದಾರೆ ಎಂಬುದನ್ನು ದೇಶದ ಜನರೂ ಗಮನಿಸಬೇಕು' ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಆಪರೇಷನ್ ಕಮಲ ವಿಫಲ

ಬಿಜೆಪಿಯ ಆಪರೇಷನ್ ಕಮಲ ಫ್ಲಾಪ್ ಆಗಿದೆ. ಈ ಘಟನೆ ಅಮಿತ್ ಶಾ, ಬಿ.ಎಸ್.ಯಡಿಯೂರಪ್ಪ ಮತ್ತು ಬಿಜೆಪಿಗೆ ಕಪಾಳಮೋಕ್ಷಾ ಆಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬಿಜೆಪಿ ನಾಯಕರ ಹತಾಶೆ

ಕರ್ನಾಟಕ ಬಿಜೆಪಿ ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯನ್ನು ಕಾಂಗ್ರೆಸ್ ಟೀಕಿಸಿದೆ. ಇದು ಮೈತ್ರಿ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸಿ ಸ್ವಯಂ ಅಸ್ಥಿರಗೊಂಡ ಕರ್ನಾಟಕ ಬಿಜೆಪಿಯ ಹತಾಶೆ ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಎಲ್ಲರೂ ನನ್ನ ಜೊತೆ ಸಂಪರ್ಕದಲ್ಲಿದ್ದಾರೆ

ಮುಂಬೈನಲ್ಲಿರುವ ಶಾಸಕರು ಮಾಧ್ಯಮಗಳ ಕೈಗೆ ಸಿಕ್ಕಿಲ್ಲ ಎನಿಸುತ್ತದೆ. ಎಲ್ಲರ ಜೊತೆಗೂ ನಾನು ಸಂಪರ್ಕದಲ್ಲಿದ್ದೇನೆ ಎಲ್ಲರೂ ಶೀಘ್ರವೇ ಮರಳಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.

ವ್ಯಂಗ್ಯವಾಡಿದ ಬಿಜೆಪಿ

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿರುವ ಕರ್ನಾಟಕ ಬಿಜೆಪಿ ನಿಮ್ಮ ಮಗ ಹೊಸ ವರ್ಷದ ಆಚರಣೆಗೆ ಮೋಜು ಮಾಡಲು ಸಿಂಗಾಪುರಕ್ಕೆ ಹೋದಾಗ ನಿಮಗೆ ಬರದ ನೆನಪಾಗಲಿಲ್ಲವೇ? ಎಂದು ಪ್ರಶ್ನಿಸಿದೆ.

English summary
Except one or two all the MLAs are in touch with us. They are going to attend Congress Legislative Party meeting. You'll know the strength of the government said Karnataka minister D.K.Shiva Kumar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X