ಅಂತರರಾಜ್ಯ ಬಸ್ ಸಂಚಾರಕ್ಕೆ ಕರ್ನಾಟಕ ಸರ್ಕಾರ ಸಿದ್ಧತೆ- ಲಕ್ಷ್ಮಣ ಸವದಿ

ಬೆಂಗಳೂರು, ಜೂನ್ 8: ಅನ್‌ಲಾಕ್‌ 1ರ ಅನ್ವಯ ದೇಶದಲ್ಲಿ ಹೋಟೆಲ್, ರೆಸ್ಟೋರೆಂಟ್, ಧಾರ್ಮಿಕ ಸ್ಥಳಗಳು ತೆರೆಯವುದಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿತ್ತು. ಅದರ ಜೊತೆಗೆ ಅಂತರರಾಜ್ಯ ಸಂಚಾರಕ್ಕೂ ಗ್ರೀನ್ ಸಿಗ್ನಲ್ ಕೊಟ್ಟಿತ್ತು.

ಅದರಂತೆ ಅಂತರರಾಜ್ಯ ಸಂಚಾರಕ್ಕೆ ಕರ್ನಾಟಕ ಸರ್ಕಾರವೂ ಅನುಮತಿ ನೀಡಿದೆ. ಆದರೆ, ಹೊರರಾಜ್ಯಗಳಿಗೆ ಹೋಗುತ್ತಿದ್ದ ಬಸ್‌ಗಳ ಸಂಚಾರ ಇನ್ನೂ ಆರಂಭಿಸಿಲ್ಲ.

ಈ ಕುರಿತು ಕರ್ನಾಟಕ ಸಾರಿಗೆ ಸಚಿವ ಲಕ್ಷ್ಮಣ ಸವದಿ ಪ್ರತಿಕ್ರಿಯೆ ನೀಡಿದ್ದು, ''ಹೊರರಾಜ್ಯಗಳಿಗೆ ಬಸ್ ಸಂಚಾರ ಆರಂಭಿಸಲು ರಾಜ್ಯ ಸರ್ಕಾರ ಸಿದ್ಧವಾಗಿದೆ. ಈ ಕುರಿತು ಆಂಧ್ರಪ್ರದೇಶ, ತೆಲಂಗಾಣ, ಗೋವಾ ಹಾಗೂ ಇನ್ನಿತರ ರಾಜ್ಯಗಳಿಗೆ ಅನುಮತಿ ಕೋರಿ ಪತ್ರ ಬರೆದಿದ್ದೇವೆ. ಮೂರು ಅಥವಾ ನಾಲ್ಕು ದಿನಗಳಲ್ಲಿ ಸಂಚಾರ ಆರಂಭವಾಗುತ್ತೆ'' ಎಂದಿದ್ದಾರೆ.

ಕರ್ನಾಟಕದಲ್ಲಿ ಹೊಸ ಕೊರೊನಾ ಕೇಸ್‌ಗಳು ಹೆಚ್ಚಾಗುತ್ತಿದ್ದು, ಇದರಲ್ಲಿ ಮಹಾರಾಷ್ಟ್ರ, ಗುಜರಾತ್ ಮತ್ತು ತಮಿಳುನಾಡಿನಿಂದ ಬಂದವರ ಸಂಖ್ಯೆಯೇ ಹೆಚ್ಚಿದೆ. ಇಂತಹ ಸಂದರ್ಭದಲ್ಲಿ ಅಂತರರಾಜ್ಯಕ್ಕೆ ಬಸ್ ಸಂಚಾರ ಆರಂಭಿಸುವುದರಿಂದ ಇದು ಸಹಜವಾಗಿ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

We Will Start Inter-State Transport Services After 3-4 Days: Karnataka Transport Minister Laxman Savadi

ರಾಜ್ಯದಲ್ಲಿ 5452 ಜನರಿಗೆ ಕೊರೊನಾ ವೈರಸ್ ಪತ್ತೆಯಾಗಿದೆ. ಅದರಲ್ಲಿ 2132 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿದ್ದಾರೆ. 3257 ಜನರು ಇನ್ನೂ ಆಸ್ಪತ್ರೆಯಲ್ಲಿ ಹಾಗೂ ಕ್ವಾರಂಟೈನ್ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 61 ಮಂದಿ ರಾಜ್ಯದಲ್ಲಿ ಸಾವನ್ನಪ್ಪಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+