ಲೋಕಸಭಾ ಚುನಾವಣೆ:ಗೆಲ್ಲುವ ಸ್ಥಾನಗಳ ಕುರಿತು ‌ಮಹತ್ವದ ಹೇಳಿಕೆ ನೀಡಿದ ಸಿದ್ದರಾಮಯ್ಯ

ಬೆಂಗಳೂರು, ಜನವರಿ 29: ವಿಧಾನಸಭಾ ಚುನಾವಣೆಯ ಗೆಲುವಿನ ಬಳಿಕ ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿರುವ ರಾಜ್ಯ ಕಾಂಗ್ರೆಸ್‌ ಗೆ ಹೈಕಮಾಂಡ್‌ ಬರೋಬ್ಬರಿ 20 ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಟಾರ್ಗೆಟ್‌ ನೀಡಿದೆ. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಲೋಕಸಭಾ ಚುನಾವಣೆಗೆ ಹಲವು ತಂತ್ರಗಾರಿಕೆಯನ್ನ ನಡೆಸಿದೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ 15- 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದರು. ಬಿಜೆಪಿಯವರಂತೆ 28 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಸುಳ್ಳು ಹೇಳುವುದಿಲ್ಲ ಎಂದು ಹೇಳಿದ್ದಾರೆ.

We Will Win 15-20 Seats In The Lok Sabha Elections Says CM siddaramaiah

ಇನ್ನೂ ಕಾಂಗ್ರೆಸ್‌ ನಾಯಕ ಹಾಗೂ ಲಿಂಗಾಯತ ನಾಯಕ ಶ್ಯಾಮನೂರು ಶಿವಶಂಕರಪ್ಪನವರು ಶಿವಮೊಗ್ಗದಲ್ಲಿ ಬಿ.ವೈ.ರಾಘವೇಂದ್ರ ಅವರೇ ಗೆಲ್ಲಲಿ ಎಂದು ಹೇಳಿಕೆ ನೀಡಿರುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ನನಗೆ ಗೊತ್ತಿಲ್ಲ, ಅವರೊಂದಿಗೆ ಮಾತನಾಡುತ್ತೇನೆ ಎಂದು ಹೇಳಿದರು.

ಇಂಡಿಯಾ ಒಕ್ಕೂಟದಿಂದ ಹಲವು ಪಕ್ಷಗಳು ಬಿಟ್ಟು ಹೋಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಮಲ್ಲಿಕಾರ್ಜುನ ಖರ್ಗೆ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಯವರು ಈ ಬಗ್ಗೆ ನಿರ್ಧಾರ ಮಾಡುತ್ತಾರೆ ಎಂದರು. ನಾನು ಈ ಬಗ್ಗೆ ಮಾತನಾಡುವುದಿಲ್ಲ ಎಂದರು. ಇನ್ನೂ ಜಾತಿವಾರು ಜನಗಣತಿ ವರದಿಯನ್ನು ಸಲ್ಲಿಸಿದರೆ ವರದಿಯನ್ನು ಸ್ವೀಕಾರ ಮಾಡುವುದಾಗಿ ತಿಳಿಸಿದರು. ವರದಿಯಲ್ಲಿ ಏನಿದೆ ಎಂದು ಸಲ್ಲಿಕೆಯಾದ ಮೇಲೆ ಚರ್ಚೆ ಮಾಡುವುದಾಗಿ ತಿಳಿಸಿದರು.

ಜಾತಿ ಗಣತಿ ಮೂಲಕ ಎಲ್ಲಾ ವರ್ಗದವರ ರಕ್ಷಣೆಗೆ ಬದ್ಧ : ಡಿಕೆಶಿ

ಎಲ್ಲಾ ಶೋಷಿತ ವರ್ಗದವರಿಗೆ ನ್ಯಾಯ ಒದಗಿಸಿಕೊಡಲು, ಜನಸಂಖ್ಯೆ ಆಧಾರದ ಮೇಲೆ ಅವರಿಗೆ ಶಕ್ತಿ ತುಂಬಲು ರಾಹುಲ್ ಗಾಂಧಿ ಅವರು ದೇಶದಲ್ಲಿ ಜಾತಿ ಗಣತಿಗೆ ಕರೆ ನೀಡಿದ್ದಾರೆ. ರಾಜ್ಯದಲ್ಲಿ ಇದನ್ನು ಮಾಡಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

We Will Win 15-20 Seats In The Lok Sabha Elections Says CM siddaramaiah

ರಾಹುಲ್ ಗಾಂಧಿ ಅವರು ಎಲ್ಲಾ ವರ್ಗದ ಜನರಿಗೆ ನ್ಯಾಯ ಒದಗಿಸಲು ಹೋರಾಡುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲರಿಗೂ ಸಮಾನತೆ ಕಲ್ಪಿಸಲಾಗುವುದು. ಶೋಷಿತರಿಗೆ ಶಕ್ತಿ ನೀಡಬೇಕು ಎಂಬುದು ಕಾಂಗ್ರೆಸ್ ಸಂಕಲ್ಪ. ಯಾರೂ ಗಾಬರಿಯಾಗಬಾರದು. ಕಾಂಗ್ರೆಸ್ ಸರ್ಕಾರ ನಿಮ್ಮ ಬದುಕಿನ ರಕ್ಷಣೆಗೆ ಬದ್ಧವಾಗಿದೆ.

ಮಹಿಳೆಯರು ಶಕ್ತಿ ಯೋಜನೆಯಲ್ಲಿ ಉಚಿತವಾಗಿ ಬಸ್ ಪ್ರಯಾಣ ಮಾಡುತ್ತಿದ್ದಾರೆ, ಗೃಹಜ್ಯೋತಿ ಯೋಜನೆಯಲ್ಲಿ 200 ಯೂನಿಟ್ ವರೆಗೂ ವಿದ್ಯುತ್ ಉಚಿತವಾಗಿ ಸಿಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಲ್ಲಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ಬರುತ್ತಿದೆ. ಇದೇ ಕಾಂಗ್ರೆಸ್ ಶಕ್ತಿ.ಇದೊಂದು ಐತಿಹಾಸಿಕ ಸಮಾವೇಶ. ರಾಜ್ಯದಲ್ಲಿ ಬದಲಾವಣೆ ಪರ್ವ ತರಲು ಈ ಶೋಷಿತರ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗದವರು ಅಧಿಕಾರಕ್ಕೆ ಬಂದಂತೆ. ಇದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+