ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

150 ಸೀಟು ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತೇವೆ: ಅರುಣ್‌ ಸಿಂಗ್‌

|
Google Oneindia Kannada News

ಚಿಕ್ಕಬಳ್ಳಾಪುರ, ಜನವರಿ 21: ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನಗಳಲ್ಲಿ ಗೆದ್ದು ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ವಿಜಯ ಸಂಕಲ್ಪ ಅಭಿಯಾನದ ವೇಳೆ ಮಾತನಾಡಿದ ಅವರು, ಅಧಿಕಾರಕಾರದಲ್ಲಿದ್ದಾಗ ಕಾಂಗ್ರೆಸ್‌ ಭ್ರಷ್ಟಾಚಾರ, ಸಮಯ ವ್ಯರ್ಥ ಮಾಡಿದ್ದೇ ಸಾಧನೆ. ಕೇವಲ ಚಿಕ್ಕಬಳ್ಳಾಪುರ ಒಂದು ಜಿಲ್ಲೆಗೆ ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಏನು ಮಾಡಿದ್ದಾರೆ ಅನ್ನುವ ಬಗ್ಗೆ ಮಾತನಾಡಲಿ. ಬಿಜೆಪಿ ಅಧಿಕಾರಕ್ಕೆ ಬಂದಮೇಲೆ ಈ ಒಂದು ಜಿಲ್ಲೆಯಲ್ಲೇ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. 3124 ಜನಕ್ಕೆ ಪಿಎಂ ಆವಾಸ್‌ ಯೋಜನೆ ಅಡಿ ಮನೆಗಳು ಸಿಕ್ಕಿವೆ. ಪಿಎಂ ಕಿಸಾನ್‌ ಯೋಜನೆಯಡಿ 1 ಲಕ್ಷ 19 ಸಾವಿರಕ್ಕೂ ಅಧಿಕ ಜನರ ಅವರ ಅಕೌಂಟ್‌ಗೆ ಪ್ರತಿ ವರ್ಷ 10 ಸಾವಿರ ರೂ. ನೇರ ಪಾವತಿಯಾಗುತ್ತಿದೆ. ಪಿಎಂ ಮಾತೃತ್ವ ಬಂಧನ ಯೋಜನೆಯ ಲಾಭ 72,000 ಜನರಿಗೆ ಸಿಗುತ್ತಿದೆ. ಈ ಜಿಲ್ಲೆಯ 52,160 ಹಿರಿಯರಿಗೆ ಮಾಶಾಸನ ಸಿಗುತ್ತಿದೆ ಎಂದರು.

ಚಿಕ್ಕಬಳ್ಳಾಪುರ ನಗರಸಭೆ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಜನತೆ ಸುಸ್ತು: ತಪ್ಪದ ಅಲೆದಾಟಚಿಕ್ಕಬಳ್ಳಾಪುರ ನಗರಸಭೆ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಜನತೆ ಸುಸ್ತು: ತಪ್ಪದ ಅಲೆದಾಟ

ರಾಜ್ಯದ ಜನತೆಗೆ ಡಬಲ್‌ ಎಂಜಿನ್‌ ಸರ್ಕಾರದ ಅಗತ್ಯತೆ ಮತ್ತು ಅಭಿವೃದ್ಧಿ ಕೆಲಸಗಳ ವೇಗದ ಬಗ್ಗೆ ನಂಬಿಕೆ ಇದೆ. ಪ್ರಧಾನಿ ನರೇಂದ್ರ ಮೋದಿ ನಾಯತಕತ್ವ, ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಮತ್ತು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಖಚಿತ ಎಂದರು.

We will win 150 seats in Karnataka assembly elections says Arun singh

ಕೋವಿಡ್‌ ಸಮಯದಲ್ಲಿ ಉಚಿತ ಪಡಿತರ ವಿತರಿಸಿ ಬಡವರ ಸಂಕಷ್ಟದ ಕಾಲದಲ್ಲಿ ಸರ್ಕರ ಮಿಡಿದಿದೆ. ರಾಜ್ಯ ಸರ್ಕಾರ ರೈತ ವಿದ್ಯಾನಿಧಿ ಮೂಲಕ ರೈತರ ಮಕ್ಕಳ ಶಿಕ್ಷಣಕ್ಕಾಗಿ ಸ್ಕಾಲರ್‌ಶಿಪ್‌ ನೀಡುತ್ತಿದೆ. ಸಿದ್ದರಾಮಯ್ಯ ಅವರೇ ಇದು ನಮ್ಮ ಸರ್ಕಾರದ ಸಾಧನೆ. ನಮ್ಮಲ್ಲಿ ನಾಯಕರು ಇದ್ದಾರೆ. ಹೇಳಿ ಕೊಳ್ಳಲು ನಾವು ಮಾಡಿದ ಕೆಲಸವಿದೆ. ಕಾರ್ಯಕರ್ತರ ಸೈನ್ಯವಿದೆ. ಈ ಮೂಲಕ 150 ಸೀಟುಗಳನ್ನು ಗೆಲ್ಲುವುದು ಖಚಿತ. ಕಾಂಗ್ರೆಸ್‌ ಬಳಿ ನಾಯಕರೂ ಇಲ್ಲ. ಕೆಲಸವೂ ಇಲ್ಲ. ಹೀಗಾಗಿ ರಾಜ್ಯದಲ್ಲಿ ಅವರು ಗೆಲ್ಲುವುದು ಇಲ್ಲ ಎಂದು ಹೇಳಿದರು.

ವಿಜಯ ಸಂಕಲ್ಪ ಅಭಿಯಾನದಲ್ಲಿ ಭಾಗಿಯಾದ ಎಲ್ಲಾ ಕಾರ್ಯಕರ್ತರಿಗೆ ಧನ್ಯವಾದಗಳನ್ನು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಪ್ರತಿ ಮನೆಗಳಿಗೆ ಸ್ಟಿಕ್ಕರ್‌, ಗೋಡೆಗೆ ಪೈಂಟಿಂಗ್‌ ಮಾಡುವುದು ಜೊತೆ ಸರ್ಕಾರದ ಯೋಜನೆಗಳನ್ನು ಅವರಿಗೆ ತಲುಪುವಂತೆ ಮಾಡಲು ಪ್ಲಾನ್‌ ಮಾಡಲಾಗಿದೆ. ಮೋದಿ, ಯಡಿಯೂರಪ್ಪ ಹಾಗೂ ಬೊಮ್ಮಾಯಿಯವರ ನೇತೃತ್ವದಲ್ಲಿ 150ಕ್ಕೂ ಅಧಿಕ ಸೀಟುಗಳೊಣಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದ್ದೇವೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.

ಕಾಂಗ್ರೆಸ್‌ ವಿರುದ್ಧ ಕಿಡಿ

ರಾಜ್ಯದಲ್ಲಿ ಚುನಾವಣೆಯ ಬಳಿಕ ಕಾಂಗ್ರೆಸ್‌ 130-140 ಸೀಟು ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತದೆ ಅನ್ನುವುದು ಕನಸು. ಯಾಕಂದರೆ ಅವರು ಅಧಿಕಾರದಲ್ಲಿದ್ದಾಗ ಏನು ಮಾಡಿದ್ದಾರೆ ಅನ್ನುವ ಬಗ್ಗೆ ಜನರಿಗೆ ಅರಿವಿದೆ. ಕಾಂಗ್ರೆಸ್‌ ಆಡಳಿತದ ಸಮಯದಲ್ಲಿ ಪಿಎಫ್‌ಐ ನೆಟ್ವರ್ಕ್‌ ಬೆಳೆಸಿದ್ದು ದೊಡ್ಡ ಸಾಧನೆ . 32 ಹಿಂದೂಗಳನ್ನು ಕೊಲೆ ಮಾಡಲಾಗಿತ್ತು. ಹಲವು ಭ್ರಷ್ಟಾಚಾರಗಳನ್ನು ಮಾಡಿದ್ದೇ ದೊಡ್ಡ ಸಾಧನೆ ಎಂದು ಕಿಡಿಕಾರಿದರು.

English summary
Karnataka Assembly Elections 2023; We will win 150 seats in Karnataka assembly elections says Arun singh
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X