ದೇಶದಲ್ಲಿ 402 ಸ್ಥಾನ ಬಿಜೆಪಿ ಗೆಲುವು; ಕರ್ನಾಟಕದಲ್ಲಿ BJP ಗೆಲ್ಲುವ ಸ್ಥಾನಗಳೆಷ್ಟು? ಅಭಯ ಪಾಟೀಲ್ ಕೊಟ್ಟ ಮಾಹಿತಿ ಇಲ್ಲಿದೆ
ಬೆಂಗಳೂರು, ಜೂನ್ 01: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ ಮೈತ್ರಿಯಾಗಿರುವ ಬಿಜೆಪಿ ಹಾಗೂ ಜೆಡಿಎಸ್ 28 ಲೋಕಸಭಾ ಕ್ಷೇತ್ರಗಳಲ್ಲಿ 28 ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಚುನಾವಣೆ ಎದುರಿಸಿದ್ದು, ಕಮಲ ಕಲಿಗಳಿಗೆ ಸಿಕ್ಕ ಆಂತರಿಕ ವರದಿಯಿಂದ ಕಳೆದ ಬಾರಿಗಿಂತ ಈ ಬಾರಿಯ ಚುನಾವಣೆಯಲ್ಲಿ ಕಡಿಮೆ ಸ್ಥಾನಗಳನ್ನ ಗೆಲಲ್ಲಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಬೆಳಗಾವಿಯಲ್ಲಿ ಬಿಜೆಪಿ ಶಾಸಕ ಅಭಯ ಪಾಟೀಲ್ ಮಾತನಾಡಿ, ಇಡೀ ದೇಶದಲ್ಲಿ 402ಕ್ಕೂ ಸ್ಥಾನ ಬಿಜೆಪಿ ಗೆಲುವು ಸಾಧಿಸಲಿದೆ. ಲೋಕಸಭಾ ಚುನಾವಣೆಯಲ್ಲಿ ನಾವು ಒಟ್ಟಾಗಿ ಕೆಲಸ ಮಾಡಿದ್ದೇವೆ, ಹೀಗಾಗಿ 22 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ ನಾಗೇಂದ್ರ ಅವರ ತಲೆದಂಡಕ್ಕೆ ವಿಪಕ್ಷಗಳು ಆಗ್ರಹಿಸಿದ್ದು, 187 ಕೋಟಿ ಸರ್ಕಾರ ಹಣವನ್ನು ಲಪಟಾಯಿಸಿದ್ದಾರೆ. ಚಂದ್ರಶೇಖರ ಡೆತ್ ನೋಟ್ ನಲ್ಲಿ ಸಚಿವರ ಹೆಸರು ಉಲ್ಲೇಖವಿದೆ. ಮೊದಲ ಭ್ರಷ್ಟಾಚಾರ ಪ್ರಕರಣ ಬಯಲಾಗಿದೆ, ಜೂನ್ 6 ರ ಒಳಗಾಗಿ ಸಚಿವರು ರಾಜೀನಾಮೆ ನೀಡಬೇಕು, ಪ್ರಕರಣ ಸಿಬಿಐ ವಹಿಸಬೇಕು ಎಂದು ಆಗ್ರಹಿಸಿದರು.
ಎಸ್ಸಿ, ಎಸ್ಟಿ ಫಂಡ್ ದುರುಪಯೋಗ ಸಹಾಸಕ್ಕೆ ಸರ್ಕಾರ ಕೈ ಹಾಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಪಡೆಯಬೇಕಿತ್ತು, ಇಲ್ಲವೇ ವಜಾ ಮಾಡಬೇಕಿತ್ತು. ಈ ಪ್ರಕರಣದ ಕುರಿತು ರಾಜ್ಯಾದ್ಯಂತ ಬಿಜೆಪಿಯಿಂದ ಹೋರಾಟ ಪ್ರಾರಂಭ ಮಾಡುತ್ತೇವೆ. ಲೋಕಸಭಾ ಚುನಾವಣೆ ಬಳಿಕ ಮೊದಲ ವಿಕೆಟ್ ಪಥನವಾಗಲಿದೆ, ಇದು 20-20 ಮ್ಯಾಚ್ ಅಲ್ಲ 10-10 ಮ್ಯಾಚ್ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ನಾವು ದಲಿತ ಪರ ಎಂದು ಕಾಂಗ್ರೆಸ್ ನವರು ಮೊಸಳೆ ಕಣ್ಣಿರು ಹಾಕುತ್ತಿದ್ದಾರೆ. ಶೇ 40 ರಷ್ಟು ಎಂದು ಬಿಜೆಪಿ ಮೇಲೆ ಆರೋಪ ಮಾಡಿದ್ರು, ಇದೂ ಶೇ 100ರಷ್ಟು ಭ್ರಷ್ಟ ಸರ್ಕಾರ. ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲು ಆರಂಭ ಮಾಡುತ್ತೇವೆ ಎಂದು ಶಾಸಕ ಅಭಯ್ ಪಾಟೀಲ ವಾಗ್ದಾಳಿ ನಡೆಸಿದರು.
ಹಿರಿಯ ನಾಯಕರಾದ ಬಸವನಗೌಡ ಪಾಟೀಲ್ ಯತ್ನಾಳ್, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಬ್ಬರು ನಮ್ಮ ನಾಯಕರು. ಬಸವನಗೌಡ ಪಾಟೀಲ್ ಯತ್ನಾಳ್ ವಿಜಯೇಂದ್ರ ವಿರುದ್ಧ ಮಾತನಾಡಿದ್ದು ನನ್ನ ಗಮನಕ್ಕೆ ಬಂದಿಲ್ಲ. ನಾನು ಗೌಡ ಇದ್ದೇನೆ ಯಾವುದನ್ನು ಮುಚ್ಚಿಡಲ್ಲ ಎಂದು ಹೇಳಿದರು.
ಇತ್ತ ಆಡಳಿತರೂಢ ಕಾಂಗ್ರೆಸ್ ಗೆ ಠಕ್ಕರ್ ಕೊಡುವ ನಿಟ್ಟಿನಲ್ಲಿ ಬಿಜೆಪಿ ನಾಯಕರು ಜೆಡಿಎಸ್ ಜೊತೆಗೆ ಮೈತ್ರಿಯಾಗಿದ್ದು, 28 ಕ್ಷೇತ್ರ ಲೋಕಸಭಾ ಕ್ಷೇತ್ರಗಳನ್ನ ಗೆಲ್ಲುವ ಗುರಿಯನ್ನ ಇಟ್ಟುಕೊಂಡಿದ್ದು, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸಹ ನಾವು 22 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂಬ ವಿಶ್ವಾಸವನ್ನ ವ್ಯಕ್ತಪಡಿಸಿದ್ದಾರೆ.












Click it and Unblock the Notifications