Get Updates
Get notified of breaking news, exclusive insights, and must-see stories!

ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್‌ ಗೆಲ್ಲುವ ಸ್ಥಾನಗಳೆಷ್ಟು? ಅಂಕಿ ಅಂಶಗಳನ್ನ ಬಿಚ್ಚಿಟ್ಟ ಕೇಸರಿ ಕಲಿ

ಬೆಂಗಳೂರು, ಮೇ 11: ರಾಜ್ಯದಲ್ಲಿ 28 ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಯಾಗಿದ್ದು, ಆಡಳಿತರೂಢ ಕಾಂಗ್ರೆಸ್‌ ಗೆ ಸೋಲಿನ ರುಚಿ ತೋರಿಸಲು ಹಲವು ತಂತ್ರಗಾರಿಕೆ ನಡೆಸಿ ಚುನಾವಣೆಯನ್ನ ಎದುರಿಸಿವೆ.

ಗೆಲ್ಲುವ ಸ್ಥಾನಗಳ ಕುರಿತು ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ.ಸುನೀಲ್ ಕುಮಾರ್ ಅವರು ಮಾತನಾಡಿದ್ದು, ಒಟ್ಟಾರೆ ಜನಾಭಿಪ್ರಾಯ, ಜನರ ಸ್ಪಂದನ, 3 ಸುತ್ತಿನಲ್ಲಿ ಮನೆ ಮನೆ ಪ್ರಚಾರದ ಕಾರ್ಯದ ಆಧಾರದಲ್ಲಿ ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳನ್ನೂ ಗೆಲ್ಲುವ ಉತ್ಸಾಹದಲ್ಲಿ ನಾವಿದ್ದೇವೆ ಎಂದು ಹೇಳಿದ್ದಾರೆ.

We will win 28 Lok Sabha constituencies in the state Says Sunil Kumar

ಕಡಿಮೆ ಅವಧಿಯಲ್ಲಿ ಹೆಚ್ಚು ಜನರನ್ನು ತಲುಪುವಂಥ ಪ್ರಯತ್ನ ಯಶಸ್ವಿಯಾಗಿ ನಡೆದಿದೆ ಎಂದು ತಿಳಿಸಿದರು. 3 ರೀತಿಯ ಸಾರ್ವಜನಿಕ ಸಂಪರ್ಕವನ್ನು ಯಶಸ್ವಿಯಾಗಿ ಮಾಡಿದ್ದೇವೆ. ದೊಡ್ಡ ದೊಡ್ಡ ಸಾರ್ವಜನಿಕ ಸಭೆ, ರೋಡ್ ಷೋ, ಮನೆಯಂಗಳದ ಸಭೆಗಳ ಮೂಲಕ ಸಾರ್ವಜನಿಕರನ್ನು ತಲುಪಿ ನಮ್ಮ ವಿಷಯವನ್ನು ತಿಳಿಸಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಜೀ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೇರಿದಂತೆ 14 ಜನ ರಾಷ್ಟ್ರೀಯ ಪ್ರಮುಖರು ಕರ್ನಾಟಕದಲ್ಲಿ 79 ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಿದ್ದಾರೆ.

39 ಕಡೆಗಳಲ್ಲಿ ರೋಡ್ ಷೋಗಳು ನಡೆದಿವೆ. ರಾಜ್ಯದ ಮುಖಂಡರಾದ ಯಡಿಯೂರಪ್ಪ, ವಿಜಯೇಂದ್ರ ಮತ್ತು ಅಶೋಕ್ ಅವರು ಸೇರಿದಂತೆ ಸುಮಾರು 30 ಜನ ರಾಜ್ಯದ ಪ್ರಮುಖರು 557 ಸಭೆಗಳಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದಾರೆ. 139 ಕಡೆಗಳಲ್ಲಿ ರಾಜ್ಯ ನಾಯಕರು ರೋಡ್ ಷೋ ನಡೆಸಿದ್ದಾರೆ ಎಂದು ಮಾಹಿತಿ ನೀಡಿದರು.

ಒಟ್ಟು 650ಕ್ಕೂ ಹೆಚ್ಚು ಸಾರ್ವಜನಿಕ ಸಭೆಗಳು, 180ಕ್ಕೂ ಹೆಚ್ಚು ರೋಡ್ ಷೋಗಳನ್ನು ಮಾಡಿದ್ದು, ಮತದಾರರನ್ನು ಸಂಪರ್ಕಿಸುವ ಯಶಸ್ವಿ ಪ್ರಯತ್ನ ಆಗಿದೆ ಎಂದು ತಿಳಿಸಿದರು. ಸಣ್ಣ ಸಭೆಗಳು, ಕಾಂಗ್ರೆಸ್ ಅಪಪ್ರಚಾರ, ಡೇಂಜರ್ ಕಾಂಗ್ರೆಸ್ ಎಂದು ತಿಳಿಸಲು 'ಮನೆಯಂಗಳದಲ್ಲಿ ಸಭೆ' ಎಂಬ ಕರೆ ಕೊಡಲಾಗಿದ್ದು, 50-75 ಜನರನ್ನು ಒಳಗೊಂಡ ಸುಮಾರು 60 ಸಾವಿರಕ್ಕೂ ಹೆಚ್ಚು ಸಣ್ಣ ಸಣ್ಣ ಸಭೆಗಳು ಎಲ್ಲ ಬೂತ್‍ಗಳಲ್ಲಿ ಮಾಡಿರುವುದು ಈ ಚುನಾವಣೆಯ ವಿಶೇಷ ಎಂದು ತಿಳಿಸಿದರು.

ಲೋಕಸಭಾ ಚುನಾವಣೆಯ ಸಂಚಾಲಕರು, ಪ್ರಭಾರಿಗಳು, ನಮ್ಮೆಲ್ಲ ಅಭ್ಯರ್ಥಿಗಳು, ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳನ್ನು ಒಳಗೊಂಡ ಪ್ರಮುಖರ ಜೊತೆಗೆ ಲೋಕಸಭಾ ಚುನಾವಣೆಗೆ ಸಂಬಂಧಿಸಿದ ಅವಲೋಕನ ಸಭೆಯು ಇವತ್ತು ಬೆಂಗಳೂರಿನಲ್ಲಿ ನಡೆದಿದೆ. ಕಳೆದ 40 ದಿನಗಳ ಅವಧಿಯಲ್ಲಿ ಚುನಾವಣೆ ನಿಮಿತ್ತ ನಡೆದ ಹತ್ತಾರು ವಿಚಾರಗಳ ಅವಲೋಕನ ಮಾಡಿದ್ದೇವೆ ಎಂದು ವಿವರಿಸಿದರು.

ವಿಧಾನಪರಿಷತ್ ಚುನಾವಣೆಗೆ ಸಂಬಂಧಿಸಿ ತಯಾರಿ ಪ್ರಕ್ರಿಯೆಗಳನ್ನು ಇವತ್ತು ಆರಂಭಿಸಲಿದ್ದೇವೆ. ವಿಧಾನಪರಿಷತ್ತಿನ ಎಲ್ಲ ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸ ನಮಗಿದೆ. ಪದವೀಧರರು, ಶಿಕ್ಷಕರ ಕ್ಷೇತ್ರದಲ್ಲಿ ಈಗಾಗಲೇ ಮತದಾರರ ನೋಂದಣಿ ಪ್ರಕ್ರಿಯೆ ಮುಗಿದು ಸ್ಥಳೀಯ ಮಟ್ಟದಲ್ಲಿ ಮತದಾರರ ಸಂಪರ್ಕ ಕಾರ್ಯ ನಡೆಯುತ್ತಿದೆ. ನಾಳೆ ಬೆಳಿಗ್ಗೆಯೊಳಗೆ ಕೇಂದ್ರ ಚುನಾವಣಾ ಸಮಿತಿಯು ಅಭ್ಯರ್ಥಿಗಳನ್ನು ಪ್ರಕಟಿಸಲಿದೆ ಎಂದು ವಿ.ಸುನೀಲ್ ಕುಮಾರ್ ಅವರು ತಿಳಿಸಿದರು.

ಜೆಡಿಎಸ್ ಜೊತೆ ಹೊಂದಾಣಿಕೆ ಕೊರತೆ ಆಗಿಲ್ಲ. ಜೆಡಿಎಸ್ ಸ್ಪರ್ಧಿಸಿದ 3 ಕ್ಷೇತ್ರಗಳಲ್ಲಿ ಬಿಜೆಪಿಯಿಂದ ನಮ್ಮ ಕಾರ್ಯಕರ್ತರು ಚುನಾವಣಾ ಕಾರ್ಯಕ್ಕೆ ಧುಮುಕಿದ್ದಾರೆ. ಉಳಿದ ಕ್ಷೇತ್ರಗಳಲ್ಲಿ ಜೆಡಿಎಸ್ ಸಹಕಾರ ನಮಗೆ ಸಹಕಾರ ಕೊಟ್ಟಿದೆ ಎಂದು ಮಾಜಿ ಸಚಿವ ಸುನೀಲ್‌ ಕುಮಾರ್‌ ಹೇಳಿದರು.

ಕಾಂಗ್ರೆಸ್ ಸರಕಾರವು ಅವರದೇ ಭಾರದಲ್ಲಿ ಕುಸಿದು ಬೀಳಲಿದೆ. ನಾಯಕತ್ವಕ್ಕಾಗಿ 4 ರೀತಿಯ ಪೈಪೋಟಿ ಕಾಂಗ್ರೆಸ್ ಪಕ್ಷದಲ್ಲಿದೆ. ಸಿದ್ದರಾಮಯ್ಯನವರು ವರುಣಾ ಕ್ಷೇತ್ರದಲ್ಲಿ ಮಾಡಿದ ಭಾಷಣ ಇದಕ್ಕೆ ಜ್ವಲಂತ ಉದಾಹರಣೆ. ಲೋಕಸಭಾ ಚುನಾವಣಾ ಫಲಿತಾಂಶದ ಮೂಲಕ ತಮ್ಮ ಕುರ್ಚಿ ಮೇಲೆ ಅಪಾಯ ಇದೆ ಎಂದು ಅವರು ತಿಳಿಸಿದ್ದಾರೆ. ಒಕ್ಕಲಿಗರು ಸಿಎಂ ಆಗುವುದಾಗಿ ಡಿ.ಕೆ.ಶಿವಕುಮಾರ್ ಅವರೂ ಬಹಿರಂಗವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜಾರಕಿಹೊಳಿಯವರು ಗುಪ್ತಗಾಮಿನಿ ರೂಪದಲ್ಲಿ ಶಾಸಕರನ್ನು ಸಂಪರ್ಕಿಸುತ್ತಿದ್ದಾರೆ. ಪರಮೇಶ್ವರ್ ಅವರು ಕೂಡ ಈ ನಿಟ್ಟಿನಲ್ಲಿ ಬೇರೆ ಬೇರೆ ಪ್ರಯತ್ನ ಮಾಡುತ್ತಿದ್ದಾರೆ ಎಂದರು.

ಚುನಾವಣೆ ಘೋಷಣೆ ಆದ ದಿನದಿಂದ ಚುನಾವಣೆ ಮುಗಿಯುವ ತನಕ 152 ದೂರುಗಳನ್ನು ಚುನಾವಣಾ ಆಯೋಗಕ್ಕೆ ನಾವು ಕೊಟ್ಟಿದ್ದೇವೆ. ಆಡಳಿತ ಯಂತ್ರದ ಸಂಪೂರ್ಣ ದುರುಪಯೋಗವನ್ನು ಕಾಂಗ್ರೆಸ್ ಸಹಜವಾಗಿ ಕರ್ನಾಟಕದಲ್ಲಿ ಮಾಡಿದೆ. ಎಲ್ಲ ಜಿಲ್ಲೆ- ತಾಲ್ಲೂಕುಗಳಲ್ಲಿ ನಮ್ಮ ಕಾರ್ಯಕರ್ತರನ್ನು ಬೆದರಿಸುವ, ಹೆದರಿಸುವ ತಂತ್ರವನ್ನು ಮತ್ತು ಕಾರ್ಯಕರ್ತರ ವಿರುದ್ಧ ಮೊಕದ್ದಮೆ ಹಾಕುವ ವ್ಯಾಪಕ ದೌರ್ಜನ್ಯದ ಕಾರ್ಯವನ್ನು ಆಡಳಿತ ಪಕ್ಷ ಮಾಡಿದೆ. ಇವುಗಳ ವಿರುದ್ಧ ಸ್ಥಳೀಯವಾಗಿ ದೂರು ಕೊಡಲಾಗಿದೆ ಎಂದು ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+