ರಾಜ್ಯದಲ್ಲಿ ಸುಡುವ ಬಿಸಿಲು: ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಏರಿಕೆ
ಬೆಂಗಳೂರು, ಮಾರ್ಚ್ 13: ರಾಜ್ಯದಲ್ಲಿ ತಾಪಮಾನ ಭಾರೀ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಬೇಸಿಗೆ ಕಾಲ ಪ್ರಾರಂಭ ಆಗುತ್ತಿದ್ದಂತೆ ಬಿಸಿಲ ಧಗೆ ರಾಜ್ಯದಲ್ಲಿ ಏರಿಕೆ ಆಗುತ್ತಲೇ ಇದೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ತಾಪಮಾನ 30 ಡಿಗ್ರಿ ಸೆಲ್ಸಿಯಸ್‌ಗಿಂತ ಅಧಿಕವಾಗಿದೆ. ರಾಜ್ಯದಲ್ಲಿ ಅತೀ ಹೆಚ್ಚಿನ ಉಷ್ಣಾಂಶ ರಾಯಚೂರಿನಲ್ಲಿ ಇದ್ದು, ಜಿಲ್ಲೆಯಲ್ಲಿ ತಾಪಮಾನ 37.0 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆ ಕಂಡಿದೆ.
ಬೆಂಗಳೂರಿನಲ್ಲಿ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 33.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಪಣಂಬೂರಿನಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೇಸಿಗೆ ಋತು ಆರಂಭದಲ್ಲೇ ರಾಜ್ಯದಲ್ಲಿ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಮೀರಿದೆ. ಮಾರ್ಚ್‌ನಿಂದ ಮೇ ತಿಂಗಳವರೆಗೆ ಬೇಸಿಗೆ ಋತು ಇರುತ್ತದೆ. ಆದರೆ ಆರಂಭದ ಎರಡು ವಾರದಲ್ಲೇ ಜನರಿಗೆ ಸುಡುವ ಬಿಸಿಲು ಕಾಡುತ್ತಿದೆ. ಆರಂಭದಲ್ಲೇ ತಾಪ ಹೆಚ್ಚಾಗಿರುವುದರಿಂದ ಈ ಬೇಸಿಗೆಯ ಕಾವು ಮತ್ತಷ್ಟು ಏರಲಿದೆ.
ಶಿವಮೊಗ್ಗ, ಕೊಪ್ಪಳ, ಕಲಬುರಗಿ, ಕಾರವಾರ, ಮಂಡ್ಯ, ದಾವಣಗೆರೆಯಲ್ಲಿ ತಲಾ 35 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದೆ. ಈ ಸಂದರ್ಭದಲ್ಲೇ ಗದಗ, ವಿಜಯಪುರ, ಹಾವೇರಿ, ಚಿತ್ರದುರ್ಗ, ಮೈಸೂರಿನಲ್ಲಿ 34 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದೆ. ಬೆಂಗಳೂರು ನಗರ, ಧಾರವಾಡ, ವಿಜಯಪುರ, ಬೀದರ್, ಮಂಗಳೂರು ವಿಮಾನ ನಿಲ್ದಾಣದಲ್ಲಿ 33 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಇನ್ನು ಹಾಸನ, ಚಿಂತಾಮಣಿ, ಬೆಳಗಾವಿ, ಹೊನ್ನಾವರದಲ್ಲಿ ತಲಾ 32 ಡಿಗ್ರಿ ಸೆಲ್ಸಿಯಸ್ ತಾಪಮಾನವಿದೆ.
ಈಗಾಗಲೇ ತಾಪಮಾನ ಏರಿಕೆಯ ಎಚ್ಚರಿಕೆ ನೀಡಿದ್ದ ಐಎಂಡಿ
ಇನ್ನು ಈಗಾಗಲೇ ಮುಂದಿನ 3 ದಿನಗಳಲ್ಲಿ ತಾಪಮಾನ ಏರಿಕೆ ಆಗುವ ಸಾಧ್ಯತೆ ಬಗ್ಗೆ ಭಾರತೀಯ ಹವಾಮಾನ ಇಲಾಖೆಯು ಎಚ್ಚರಿಕೆಯನ್ನು ನೀಡಿದೆ. ಮುಂದಿನ 3 ದಿನಗಳಲ್ಲಿ ಗುಜರಾತ್‌ನಲ್ಲಿ ಗರಿಷ್ಠ ತಾಪಮಾನದಲ್ಲಿ 2-3 ಡಿಗ್ರಿ ಸೆಲ್ಸಿಯಸ್ ಕ್ರಮೇಣ ಏರಿಕೆಯಾಗುವ ನಿರೀಕ್ಷೆಯಿದೆ. ಭಾರತದ ಕೆಲವು ಭಾಗಗಳಲ್ಲಿ ತಾಪಮಾನವು ಹೆಚ್ಚಾಗುವ ಸಾಧ್ಯತೆಯಿದೆ. ಭಾನುವಾರದಿಂದ ಗುಜರಾತ್‌ನಲ್ಲಿ ಮತ್ತು ಪಶ್ಚಿಮ ರಾಜಸ್ಥಾನದಲ್ಲಿ ಸೋಮವಾರದಿಂದ ಗರಿಷ್ಠ ತಾಪಮಾನವು 40 ಡಿಗ್ರಿ ಸೆಲ್ಸಿಯಸ್ ಮೀರುವ ನಿರೀಕ್ಷೆಯಿದೆ. ಪಶ್ಚಿಮ, ಉತ್ತರ ಮತ್ತು ಈಶಾನ್ಯ ಭಾರತದಲ್ಲಿ ಹಗಲಿನ ತಾಪಮಾನವು ಹೆಚ್ಚಾಗುವ ಸಾಧ್ಯತೆಯಿದೆ. ಮತ್ತೊಂದೆಡೆ, ಈ ಅವಧಿಯಲ್ಲಿ ಭಾರತದಾದ್ಯಂತ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ. (ಒನ್‌ಇಂಡಿಯಾ ಸುದ್ದಿ)












Click it and Unblock the Notifications