Karnataka Weather: ರಣಭೀಕರ ಚಳಿಗೆ ಬೆದರಿದ ಜನ; ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳ ಮುಂದಿನ 5 ದಿನದ ಹವಾಮಾನ ವರದಿ
Karnataka Weather: ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟಿಸಿ ಅವಾತಂರಗಳನ್ನೇ ಸೃಷ್ಟಿಸಿದೆ. ಇನ್ನು ಇದೀಗ ಕರ್ನಾಕದಾದ್ಯಂತ ಜಮ್ಮು-ಕಾಶ್ಮೀರ, ಹಿಮಚಲ ಪ್ರದೇಶದಂತೆ ಮಂಜಿನ ಜೊತೆ ಚಳಿಯ ಪ್ರಮಾಣ ಹೆಚ್ಚಾಗುತ್ತಲಿದೆ. ಹಾಗಾದರೆ ಇಂದು (ಜನವರಿ 06) ಸೇರಿದಂತೆ ಮುಂದಿನ 5 ದಿನ ರಾಜಧಾನಿ ಬೆಂಗಳೂರು ಸೇರಿದಂತೆ ಯಾವ್ಯಾವ ಭಾಗಗಳಲ್ಲಿ ಹಾವಾಮಾನ ಹೇಗಿರಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತುಮುತ್ತಲುನ ಜಿಲ್ಲೆಗಳು ಹಾಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು (ಜನವರಿ 6) ಮುಂಜಾ ತೀವ್ರ ಮಂಜಿನ ವಾತಾವರಣ ನಿರ್ಮಾಣವಾಗಿದೆ. ತಾಪಮಾನ ಕುಸಿತದಿಂದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಚಳಿಯ ಪ್ರಮಾಣ ಹೆಚ್ಚಾಗಿದೆ. ಇನ್ನು ಮಧ್ಯಾಹ್ನದ ವೇಳೆಗೆ ಬಿಸಿಲು ಇರಲಿದ್ದು, ಸಂಜೆ ವೇಳೆಗೆ ಮತ್ತೆ ಮಂಜಿನ ಜೊತೆಗೆ ಚಳಿ ಮುಂದುವರೆಯಲಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದರೆ ಯಾವೆಲ್ಲ ಜಿಲ್ಲೆಗಳಲ್ಲಿ ಹೆಚ್ಚು ಚಳಿ ಇರಲಿದೆ ಎಂದು ತಿಳಿಯಿರಿ.

ರಾಜ್ಯದಲ್ಲಿ ದಿನದಿಂದ ಚಳಿಯ ಪ್ರಮಾಣ ಹೆಚ್ಚಾಗುತ್ತಲಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ತಾಪಮಾನ ಕುಸಿಯುತ್ತಿಲ್ಲೇ ಇದ್ದು, ಮುಂಜಾನೆ & ಸಂಜೆ ವೇಳೆ ಚಳಿ ಪ್ರಮಾಣ ಹೆಚ್ಚಾಗುತ್ತಿದೆ. ಇಂದು (ಜನವರಿ 6) ಮುಂಜಾನೆ ಬಹುತೇಕ ಭಾಗಗಳಲ್ಲಿ ದಟ್ಟ ಮಂಜಿನ ವಾತಾವರಣ ನಿರ್ಮಾಣವಾಗಿದ್ದು, ರಣಭೀಕರ ಚಳಿ ಮುಂದುವರೆದಿದೆ.
ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಮುಂಜಾನೆ ವೇಳೆ ದಟ್ಟ ಮಂಜು ಆವರಿಸಿದೆ. ಮುಂದಿನ ಎರಡ್ಮೂರು ದಿನ ಇದೇ ರೀತಿಯ ವಾತಾವರಣ ಮುಂದುವರೆಯುವ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಇಂದು ರಾಜ್ಯದಾದ್ಯಂತ 10 ಗಂಟೆ ಬಳಿಕ ಒಣ ಹವೆ ಮುಂದುವರೆಯುವ ಸಾಧ್ಯತೆಯಿದೆ. ಒಳನಾಡಿನ ಕೆಲವೆಡೆ ದಟ್ಟ ಅಥವಾ ಮಧ್ಯಮ ಪ್ರಮಾಣದಲ್ಲಿ ಮಂಜು ಇರುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲೂ ಸಾಧಾರಣ ಚಳಿಯ ವಾತಾವರಣ ಇದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಒಣಹವೆ ಮುಂದುವರಿಯಲಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿಯೂ ಒಣಹವೆ ಇರಲಿದೆ. ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂಜಾನೆ 10 ಗಂಟೆಯಾದರೂ ಹಾಗೂ ಸಂಜೆ ವೇಳೆ ಭೀಕರ ಚಳಿ ಮುಂದುವರೆದ ಹಿನ್ನಲೆ ಜನರು ಮನೆಯಿಂದ ಹೊರ ಬಾರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ತಾಪಮಾನ ಕುಸಿತ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಪ್ರತಿನಿತ್ಯ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಕೆಲಸಗಳಿಗೆ ತೆರಳುವವವರು ಸೇರಿದಂತೆ ಚಿಕ್ಕ ಮಕ್ಕಳಿಗೆ ದಪ್ಪನೆಯ ಶ್ವೆಟ್ಟರ್, ಟೋಪಿಯಂತಹ ಉಡುಗೆಗಳನ್ನು ಧರಿದುವುದು ಉತ್ತಮ.
ಮುಂದಿನ 4 ದಿನ ಹೊನ್ನಾವರ, ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ಹಾವೇರಿ, ರಾಯಚೂರು, ಚಿಕ್ಕಮಗಳೂರು, ಹಾಸನ, ಮಂಡ್ಯ, ದಾವಣಗೆರೆ, ಚಿಂತಾಮಣಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಚಳಿ ಹೆಚ್ಚಿರಲಿದೆ. ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2ರಿಂದ 4 ಡಿಗ್ರಿ ಸೆಲ್ಸಿಯಸ್ ಕಡಿಮೆ ಇರುವ ಸಾಧ್ಯತೆಯಿದೆ. ಇನ್ನುಳಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದೆ.
ಇನ್ನು ಮುಂದಿನ 24 ಗಂಟೆಗಳಲ್ಲಿ ರಾಜಧಾನಿ ಬೆಂಗಳೂರು ನಗರದ ಕೆಲವು ಪ್ರದೇಶಗಳಲ್ಲಿ ಬೆಳಗ್ಗೆ ವೇಳೆ ದಟ್ಟ ಮಂಜು ಇರಲಿದೆ. ಇನ್ನೂ ಕೆಲವೆಡೆ ಕಡಿಮೆ ಪ್ರಮಾಣದ ಮಂಜು ಇರಲಿದೆ. ಗರಿಷ್ಠ ತಾಪಮಾನವು 27 ಡಿಗ್ರಿ ಆದರೆ, ಕನಿಷ್ಠ ತಾಪಮಾನ 13 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಇನ್ನು ರಾಜ್ಯದಲ್ಲು ಶೀಘ್ರದಲ್ಲಿಯೇ ಡಾಪ್ಲರ್ ರಾಡಾರ್ ಬರಲಿದೆ. ಬೆಂಗಳೂರು, ಮಂಗಳೂರು ಮತ್ತು ಧಾರವಾಡ ಜಿಲ್ಲೆಗಳು ಡಾಪ್ಲರ್ ವೆದರ್ ರಾಡಾರ್‌ಗಳನ್ನು ಹೊಂದಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಹವಾಮಾನ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಹೇಳಿದ್ದಾರೆ. ಇದು ನಿಖರ ಹವಾಮಾನ ಮಾಹಿತಿ ನೀಡುತ್ತದೆ. ಇದರಿಂದ ಇನ್ನಷ್ಟು ಸ್ಪಷ್ಟ ಮುನ್ಸೂಚನೆಗಳು ಸಿಗಲಿವೆ ಎಂದು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.












Click it and Unblock the Notifications