ಏಪ್ರಿಲ್ 11: ರಾಜ್ಯದ ಯಾವ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆಯಿದೆ?

ಕರ್ನಾಟಕದ ವಿವಿಧೆಡೆ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆದಿದ್ದರೂ ಹಲವೆಡೆ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.

ಏಪ್ರಿಲ್ 11ರಿಂದ ರಾಜ್ಯದ ಹಲವೆಡೆ ಹವಾಮಾನ ಬದಲಾಗುತ್ತಿದ್ದು, ಹಲವೆಡೆ ಮಳೆ ನಿರೀಕ್ಷೆಯಿದೆ. ಈಗಾಗಲೇ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಲ್ಲಿ ಮಳೆ ಸುರಿದಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆ, ಮಂಗಳೂರು, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸತತವಾಗಿ ಮಳೆಯಾಗುವ ಲಕ್ಷಣಗಳಿವೆ.

Weather forecast: Isolated rain across State as on April 11

ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಕಳೆದ 24 ಗಂಟೆಗಳ ಕರ್ನಾಟಕದ ಮಳೆ ನಕ್ಷೆ ನೀಡಿದ್ದು, ಅತ್ಯಧಿಕ 46.5ಮಿ.ಮೀ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಭಾಗವತಿ ಎಂಬಲ್ಲಿ ದಾಖಲಾಗಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಏಪ್ರಿಲ್ 13ರಂದು ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ, ಮಿಕ್ಕಂತೆ ಒಣಹವೆ ಮುಂದುವರೆಯಲಿದೆ.

Recommended Video

      ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸ್ ವಶಕ್ಕೆ | Oneindia Kannada

      ಬೆಂಗಳೂರಿನಲ್ಲಿ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+