ಮಳೆ ಮುನ್ಸೂಚನೆ: ಇನ್ನು 5 ದಿನ ಮಳೆ, 7 ಜಿಲ್ಲೆಗಳಲ್ಲಿ ಯೆಲ್ಲೂ ಅಲರ್ಟ್

ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಸತತ ಮಳೆಯಾಗುತ್ತಿದೆ. ಇನ್ನು ಐದು ದಿನಗಳ ಕಾಲ ಇದೇ ಹವಾಮಾನ ಮುಂದುವರೆಯುವ ಸಾಧ್ಯತೆಯಿದೆ, ಬೆಂಗಳೂರಿನಲ್ಲಿ ಸಾಧಾರಣ ಮಳೆ ನಿರೀಕ್ಷಿಸಬಹುದು ಎಂದು ಹವಾಮಾನ ಇಲಾಖೆ ನೀಡಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ದಾವಣಗೆರೆ, ತುಮಕೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೂ ಅಲರ್ಟ್ ನೀಡಲಾಗಿದೆ. ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆಯಲಿದೆ. ಇನ್ನು ಉತ್ತರ ಒಳನಾಡಿನ ಹಲವೆಡೆ ಒಣಹವೆ ಮುಂದುವರೆದಿದ್ದರೂ ಕೆಲವೆಡೆ ಮಳೆ ಸುರಿದಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ, ಮಿಕ್ಕಂತೆ ಒಣಹವೆ ಮುಂದುವರೆಯಲಿದೆ.

ಬೆಂಗಳೂರಿನ ನಗರ ಪ್ರದೇಶದಲ್ಲಿ ವಾತಾವರಣ

ಬೆಂಗಳೂರಿನ ನಗರ ಪ್ರದೇಶದಲ್ಲಿ ವಾತಾವರಣ

ಬಿಬಿಎಂಪಿ ಮಳೆ ಮುನ್ಸೂಚನೆ: ಬೆಂಗಳೂರಿನ ನಗರ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಮಿಂಚಿನೊಂದಿಗೆ ಗುಡುಗು ಸಹಿತ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಉಸ್ತುವಾರಿ ನಿರ್ದೇಶಕ ಸುಂದರ್ ಮೇತ್ರಿ ಹೇಳಿದ್ದಾರೆ.

ಎಲ್ಲೆಲ್ಲಿ ಮಳೆ ಸಾಧ್ಯತೆ?

ಎಲ್ಲೆಲ್ಲಿ ಮಳೆ ಸಾಧ್ಯತೆ?

ಮಳೆ ಮುನ್ಸೂಚನೆ: ರಾಜ್ಯದ ಮಲೆನಾಡು ಮತ್ತ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ಉತ್ತರ ಒಳನಾಡು ಮತ್ತ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ. ರಾಜ್ಯದಾದ್ಯಂತ ಅಲ್ಲಲ್ಲಿ ಮಿಂಚಿನೊಂದಿಗೆ ಗುಡುಗು ಮಳೆ ಸಂಭವಿಸುವ ಸಾಧ್ಯತೆಯಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 16.97 ಮಿ. ಮೀ ಮಳೆ ದಾಖಲಾಗಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಕಳೆದ 24 ಗಂಟೆಗಳ ಕರ್ನಾಟಕದ ಮಳೆ ನಕ್ಷೆ ನೀಡಿದ್ದು, ಅತ್ಯಧಿಕ 109.5 ಮಿ.ಮೀ ಬೆಂಗಳೂರು ಪಶ್ಚಿಮ ವಲಯದಲ್ಲಿ ದಾಖಲಾಗಿದೆ.

ರಾಮನಗರ, ಮಂಕಿ, ಆನವಟ್ಟಿ, ತಾಳಗುಪ್ಪ, ಸೊರಬ, ಹುಂಚದಕಟ್ಟೆ, ಬೆಳ್ತಂಗಡಿ, ಕೋಲಾರ, ನಾಗಮಂಗಲ, ಭಟ್ಕಳ, ಯಲಬುರ್ಗಾ, ಮಸ್ಕಿ, ಮೂಡಬಿದಿರೆ, ಪುತ್ತೂರು, ಕೊಲ್ಲೂರು, ಕೋಟಾ, ಹೊನ್ನಾವರ, ಸಂತೆಬೆನ್ನೂರು, ದಾವಣಗೆರೆ, ಧರ್ಮಸ್ಥಳ, ದಾವಣಗೆರೆ, ಹರಪ್ಪನಹಳ್ಳಿ, ಮಾಗಡಿಯಲ್ಲಿ ಮಳೆಯಾಗಿದೆ.

Recommended Video

    ಕೊರೋನಾಗೆ ಮನೆಯಲ್ಲೇ ಚಿಕಿತ್ಸೆ ಪಡೆದುಕೊಳ್ಳಿ ! | Oneindia Kannada
    ಗರಿಷ್ಠ ಹಾಗೂ ಕನಿಷ್ಠ ತಾಪಮಾನ

    ಗರಿಷ್ಠ ಹಾಗೂ ಕನಿಷ್ಠ ತಾಪಮಾನ

    ಗರಿಷ್ಠ ಹಾಗೂ ಕನಿಷ್ಠ ತಾಪಮಾನ: ಕಲಬುರಗಿಯಲ್ಲಿ 40 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಏಪ್ರಿಲ್ ಮೊದಲ ವಾರದಲ್ಲಿ ಅಧಿಕವಾಗಿದ್ದ ತಾಪಮಾನ ಕಳೆದ ವಾರ ಸ್ವಲ್ಪ ತಗ್ಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+