ಮೇ 9,10ರಂದು ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು, ಮೇ 07: ಉತ್ತರ ಕರ್ನಾಟಕ ಭಾಗಗಳಾದ ಕಲಬುರಗಿ, ರಾಯಚೂರು, ವಿಜಯಪುರ ಜಿಲ್ಲೆಯಲ್ಲಿ ಬಿಸಿಲಿನ ಧಗೆ ಹೆಚ್ಚಾಗಿದೆ. ತಲೆಂಗಾಣ ಮತ್ತು ವಿದರ್ಭ ಪ್ರದೇಶದಲ್ಲಿ ಮೇ 7-8 ಎಂದು ಹೀಟ್‌ವೇವ್ ಎಚ್ಚರಿಕೆ ನೀಡಲಾಗಿದೆ. ಈ ಪ್ರಭಾವ ಉತ್ತರ ಕರ್ನಾಟಕದ ಮೇಲೂ ಉಂಟಾಗಲಿದೆ.

ಮುಂದಿನ ಒಂದು ವಾರ ಗರಿಷ್ಠ ತಾಪಮಾನ 40-41 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲೇ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಶೇ.73 ಭೌಗೋಳಿಕ ಪ್ರದೇಶದಲ್ಲಿ ಗರಿಷ್ಠ ತಾಪಮಾನ 34ರಿಂದ 38 ಡಿಗ್ರಿ ಸೆಲಸಿಯಸ್ ದಾಟಿದೆ. ಗದಗ, ಚಿತ್ರದುರ್ಗ, ಕೊಪ್ಪಳ, ದಾವಣಗೆರೆ, ಬಾಗಲಕೋಟೆ, ಬಳ್ಳಾರಿ, ರಾಯಚೂರು ಮತ್ತು ವಿಜಯಪುರ ಪ್ರದೇಶದಲ್ಲಿ ಗರಿಷ್ಠ ತಾಪಮಾನ 41ರಿಂದ 43 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿದೆ.

Weather forecasts heavy rain on May 9 and 10 in the state

ದಕ್ಷಿಣ ಒಳನಾಡಿನಲ್ಲಿ ಒಂದು ವಾರದಿಂದ ಆಗಾಗ ಮಳೆಯಾಗುತ್ತಿರುವ ಕಾರಣದಿಂದ ಗರಿಷ್ಠ ತಾಪಮಾನದಲ್ಲಿ ಇಳಿಕೆಯಾಗಿದೆ.ಬೆಂಗಳೂರು ನಗರದಲ್ಲಿ 35 ಡಿಗ್ರಿ ಸೆಲ್ಸಿಯಸ್ ತಲುಪಿದ್ದ ಗರಿಷ್ಠ ತಾಪಮಾನ ಪ್ರಸ್ತುತ 32 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದೆ. ಇದೇ ರೀತಿ ಚಿಕ್ಕಮಗಳೂರು, ಮಂಡ್ಯ, ಮೈಸೂರು ಸೇರಿ ಕೆಲ ಜಿಲ್ಲೆಗಳಲ್ಲೂ ಬಿಸಿಲ ಝಳ ಕಡಿಮೆಯಾಗಿದೆ.

ಮೇ 7-8ರಂದು ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಹಾವೇರಿ, ಧಾರವಾಡ, ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಮೇ 9-10ರಂದು ದಕ್ಷಿಣ ಒಳನಾಡಿನ, ಶಿವಮೊಗ್ಗ, ಕೊಡಗು, ಮಂಡ್ಯ, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರದಲ್ಲಿ ಭಾರಿ ಮಳೆಯ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+