Karnataka Rain: ಬಿರು ಬಿಸಿಲಿನ ನಡುವೆ ವರುಣನ ಎಂಟ್ರಿ: ರಾಜ್ಯದಲ್ಲಿ ಮೂರು ದಿನಗಳ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು, ಮಾರ್ಚ್‌ 19: ಕಳೆದ ಬಾರಿ ಮುಂಗಾರಿನ ಸಮಸ್ಯೆಯಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗದಲ್ಲಿ ನೀರಿನ ಸಮಸ್ಯೆ ಉಂಟಾಗಿದೆ. ರಾಜ್ಯದಲ್ಲಿ ಸುಡು ಬಿಸಿಲ ಬೇಗೆ ಜಾಸ್ತಿಯಾಗಿದ್ದು, ಜನ ಹೈರಾಣಾಗಿದ್ದಾರೆ. ಈ ಮಧ್ಯೆ ಕರ್ನಾಟಕದ ಕೊಡಗು, ಬೀದರ್ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಕೊಂಚ ಮಳೆ ಆರಂಭವಾಗಿದ್ದು ಜನರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

ಹೌದು, ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು, ರಾಜಧಾನಿ ಬೆಂಗಳೂರಿಗೆ ವರುಣನ ಪ್ರವೇಶ ಮಾಡುವ ನಿರೀಕ್ಷೆ ಇದೆ. ಅಲ್ಲದೇ ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು ಮತ್ತು ಬೆಂಗಳೂರು ಸೇರಿದಂತೆ ಜಿಲ್ಲೆಗಳಲ್ಲಿ ಬುಧವಾರದಿಂದ ಭಾನುವಾರದವರೆಗೆ ಲಘು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Weather Report Chance Of Three Days Rain In The Karnataka

ದಕ್ಷಿಣ ಕನ್ನಡ ಸೇರಿ ಕೆಲ ಜಿಲ್ಲೆಗಳಲ್ಲಿ ಬುಧವಾರದಿಂದ ಭಾನುವಾರದವರೆಗೆ ಲಘು ಮಳೆ ಸೂಚನೆ ನೀಡಿದ ಹವಾಮಾನ ಇಲಾಖೆ. ಆಂಧ್ರ ಪ್ರದೇಶ ಮತ್ತು ತೆಲಂಗಾಣ ಈಗಾಗಲೇ ಮಳೆ ಸುರಿಯಲಾರಂಭಿಸಿದೆ. ರಾಜ್ಯದಲ್ಲೂ ಮುಂದಿನ ದಿನಗಳಲ್ಲಿ ಕೆಲ ಜಿಲ್ಲೆಗಳಲ್ಲಿ ಮಳೆ ಬರುವ ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ಬೆಂಗಳೂರು ಮತ್ತು ದಕ್ಷಿಣ ಆಂತರಿಕ ಕರ್ನಾಟಕದ ಉಳಿದ ಭಾಗಗಳಲ್ಲಿ ಮುಂದಿನ ದಿನಗಳಲ್ಲಿ ಮಳೆ ಬರುವ ಮುನ್ಸೂಚನೆ ಇದೆ.

ಎರಡು ದಿನಗಳ ಹಿಂದ ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು, ಮಳೆಯ ನಿರೀಕ್ಷೆಯಲ್ಲಿದ್ದಾರೆ. ಇತ್ತ ಬಾಗಲಕೋಟೆ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಮೈಸೂರು ಜಿಲ್ಲೆಗಳು ಸೇರಿದಂತೆ ಆಂತರಿಕ ಕರ್ನಾಟಕದ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ.

ಸಾಮಾನ್ಯವಾಗಿ ಕರ್ನಾಟಕದಲ್ಲಿ ಮಾರ್ಚ್​​ನಿಂದ ಮೇ ತಿಂಗಳವರೆಗೆ ಮುಂಗಾರು ಹಂಗಾಮಿನ ಮೊದಲು ಮಳೆ ಶುರುವಾಗುತ್ತದೆ. ಆದರೆ ಕಳೆದ ಬಾರಿಯಂತೆ ಈ ಬಾರಿಯೂ ವರುಣ ದೇವ ಆಗಮನದ ಸೂಚನೆ ಕಾಣುತ್ತಿಲ್ಲ. ಮಾರ್ಚ್ ಮೊದಲ 15 ದಿನ ಯಾವ ಭಾಗದಲ್ಲಿ ಮಳೆರಾಯನ ಆಗಮವಾಗಿಲ್ಲ. ಇದೀಗ ರಾಜ್ಯದ ಕೆಲವು ಜಿಲ್ಲೆಯಲ್ಲಿ ಮಳೆಯಾಗುತ್ತಿದೆ.

ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಮಂಡ್ಯ, ಮೈಸೂರು, ತುಮಕೂರು ಭಾಗದಲ್ಲಿ ಮಾರ್ಚ್ 20 ರಿಂದ ಮಾರ್ಚ್ 23ರವರೆಗೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+