ಕರ್ನಾಟಕ ಹವಾಮಾನ ವರದಿ, ಎಲ್ಲಿ ಮಳೆ, ಎಲ್ಲೆಲ್ಲಿ ಒಣಹವೆ
ಬೆಂಗಳೂರು, ಡಿಸೆಂಬರ್ 19:ಕರ್ನಾಟಕದ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರೆದಿದೆ. ಚಾಮರಾಜನಗರ, ಕೋಲಾರ, ಮೈಸೂರಿನಲ್ಲಿ ಇಂದು ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇನ್ನುಳಿದಂತೆ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.ವಿಜಯಪುರದಲ್ಲಿ 12.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ನಿರೀಕ್ಷೆ ಇದೆ. ಮುಂದಿನ 48 ಗಂಟೆಗಳ ಕಾಲ ರಾಜ್ಯದಲ್ಲಿ ಒಣಹವೆ ಮುಂದುವರೆಯಲಿದೆ.
ಬೆಂಗಳೂರಿನಲ್ಲಿ 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಪಂಜಾಬ್, ಹರಿಯಾಣ, ದೆಹಲಿ, ಚಂಡೀಗಢದಲ್ಲಿ ಶೀತಗಾಳಿ ಮುಂದುವರೆದಿದೆ. ಜಮ್ಮು ಕಾಶ್ಮೀರ, ಹಿಮಾಚಲಪ್ರದೇಶ, ಉತ್ತರಾಖಂಡ, ಬಿಹಾರ, ಮಧ್ಯಪ್ರದೇಶದಲ್ಲಿ ಮುಂದಿನ 24 ಗಂಟೆಯೊಳಗಾಗಿ ಚಳಿ ಕೊಂಚ ಕಡಿಮೆಯಾಗಲಿದೆ.
ಹಿಮಾಚಲಪ್ರದೇಶ, ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ತ್ರಿಪುರ, ಮಿಜೋರಾಂನಲ್ಲಿ ಮುಂದಿನ 24 ಗಂಟೆ ಮಂಜುಕವಿದ ವಾತಾವರಣ ಮುಂದುವರೆಯಲಿದೆ.
ಅಸ್ಸಾಂ, ಕೇರಳ, ಮೇಘಾಲಯ, ಪುದುಚೆರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.












Click it and Unblock the Notifications