Karnataka Rain:ರಾಜ್ಯದ ಈ ಜಿಲ್ಲೆಯಲ್ಲಿ ವರ್ಷದ ಮೊದಲ ಭರ್ಜರಿ ಮಳೆ! ಇಲ್ಲಿದೆ ಮಾಹಿತಿ
ದಾವಣಗೆರೆ, ಏಪ್ರಿಲ್ 04: ಬಿರು ಬಿಸಿಲ ತಾಪಮಾನದಿಂದ ತತ್ತರಿಸಿದ್ದ ಬೆಣ್ಣೆ ನಗರಿ ದಾವಣಗೆರೆ ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆ ಧರೆಗೆ ಇಳಿದಿದೆ. ದಾವಣಗೆರೆ ತಾಲೂಕಿನ ಹೆಬ್ಬಾಳದಲ್ಲಿ ಬುಧವಾರ ಕೆಲ ಕಾಲ ಮಳೆಯಾಗಲಿದ್ದು, ಸೆಕೆಯಿಂದ ಬಳಲಿದ್ದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
ಹೌದು, ಕಾದ ಕಾವಲಿಯಂತಾಗಿದ್ದ ಭೂಮಿಗೆ ಸುರಿದ ವರುಣ ತಂಪೆರೆದಿದ್ದಾನೆ. ಇನ್ನೂ ಬೆಣ್ಣೆ ನಗರಿ ದಾವಣಗೆರೆ ಜಿಲ್ಲೆಯಲ್ಲಿ ವರ್ಷ ಮೊದಲ ಮಳೆಯಿಂದಾಗಿ ಜನರು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಬಿಲಿನ ತೀವ್ರತೆಗೆ ಜನ-ಜಾನುವಾರು ಕುಡಿಯುವ ನೀರಿಲ್ಲ, ಒಣಗಿದ ಹಳ್ಳ-ಕೊಳ್ಳ, ನೀರಿಲ್ಲದೆ ಅಡಿಕೆ ತೋಟ ಬದುಕಿಸಿಕೊಳ್ಳಲು ಪರದಾಟ ನಡೆಸುತ್ತಿದ್ದ ರೈತರಿಗೆ ಜಿಲ್ಲೆಯ ವರ್ಷದ ಮಿದಲ ಮಳೆ ತುಸು ನೆಮ್ಮದಿ ನಿಟ್ಟುಸಿರು ಬಿಡುವಂತಾಯಿತು.

ಮಳೆಯಿಂದ ಹಲವು ಗ್ರಾಮದಲ್ಲಿ ಕೂಲ್ ಕೂಲ್ ವಾತಾವರಣ ನಿರ್ಮಾಣವಾಗಿದ್ದು, ಬರಗಾಲದಿಂದ ಬೆಂದಿರುವ ಜನರು ದೊಡ್ಡ ಮಳೆಯ ನಿರೀಕ್ಷೆಯಲ್ಲಿದ್ದಾರೆ. ದಾವಣಗೆರೆ ಜಿಲ್ಲೆಯ ಆನಗೋಡು, ಹೆಬ್ಬಾಳ್, ಮಾಯಕೊಂಡ, ಹುಚ್ಚವ್ವನಹಳ್ಳಿ ಸುತ್ತಮುತ್ತ ಸಂಜೆ ಇದ್ದಕ್ಕಿದ್ದಂತೆ ಜೋರು ಗಾಳಿ ಬೀಸಿ, ದಟ್ಟಮೋಡಗಳು ಆವರಿಸಿದವು. ಮಳೆಗೆ ಕಾಯುತ್ತಿದ್ದ ಜನ, ಮಳೆ ಕಂಡು ಪುಳಕಿತರಾಗಿದ್ದರು. ಸುಮಾರು 45-50 ನಿಮಿಷ ಕಾಲ ಜೋರು ಮಳೆಯಾಗಿದ್ದು, ವರ್ಷ ಮೊದಲ ಮಳೆಯಿಂದ ದಾವಣಗೆರೆ ಜನತೆ ಖುಷಿಯನ್ನ ವ್ಯಕ್ತಪಡಿಸಿದ್ದಾರೆ.
ಇನ್ನೂ ರಾಜ್ಯದ ಉತ್ತರ ಒಳನಾಡು ಸೇರಿದಂತೆ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.












Click it and Unblock the Notifications