Rain Alert: ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ: ಈ ಜಿಲ್ಲೆಗಳಲ್ಲಿ ಭಾರಿ ಬಿಸಿಲು

ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಎರಡು ವಾರದಿಂದ ಉತ್ತಮ ಮಳೆಯಾಗಿದೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದ್ದು, ಹಲವು ಜಿಲ್ಲೆಗಳು ಮೊದಲ ಮಳೆಗಾಗಿ ಇನ್ನೂ ಕಾಯುತ್ತಿವೆ.

ಹಲವು ದಿನದ ಉತ್ತಮವಾಗಿ ಸುರಿದ ಮಳೆ ಸದ್ಯ ಬ್ರೇಕ್ ನೀಡಲಿದ್ದು, ತಾಪಮಾನ ಹೆಚ್ಚಾಗಲಿದೆ. ಮಳೆಯಿಂದ ತಂಪಾದ ಕೆಲವು ಜಿಲ್ಲೆಗಳು ಮುಂದಿನ ಕೆಲವು ದಿನ ಭಾರಿ ಬಿಸಿಲಿಗೆ ಸಾಕ್ಷಿಯಾಗಲಿವೆ.

Weather Report Heavy Rain And Heatwave Alert in Karnataka

ಯುಗಾದಿ ಹಬ್ಬದಿಂದ ಕೂಡ ಹಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಿದೆ. ಮಧ್ಯ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಹಲವು ಪ್ರದೇಶಗಳು ವಾಡಿಕೆಗಿಂದ ಹೆಚ್ಚು ಮುಂಗಾರು ಪೂರ್ವ ಮಳೆಯನ್ನು ಪಡೆದುಕೊಂಡಿದ್ದರೆ. ಉಳಿದ ಭಾಗದಲ್ಲಿ ಮಳೆ ಕೊರತೆ ಇದೆ.

ಗುರುವಾರ ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಬಾಗಲಕೋಟೆ, ಧಾರವಾಡ, ಕೊಡಗು, ಮೈಸೂರು, ವಿಜಯಪುರ, ಜಿಲ್ಲೆಗಳಲ್ಲಿ ಚದುರಿದಂತೆ ಮಿಂಚು, ಗುಡುಗು ಸಹಿತ ಮಳೆಯಾಗಿದೆ.

ಈ ಜಿಲ್ಲೆಗಳಲ್ಲಿ ಮಾತ್ರ ಮಳೆ

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆ ಮುಂದುವರೆಯುವ ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಐದು ದಿನ ಶಾಖದ ಅಲೆ ಎಚ್ಚರಿಕೆ

ಮೇ 2 ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗುತ್ತದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರ್ನಾಟಕದ ಹಲವು ಸ್ಥಳಗಳಲ್ಲಿ ಗರಿಷ್ಠ ತಾಪಮಾನವು 2-4 ˚C ಹೆಚ್ಚಾಗುವ ಸಾದ್ಯತೆಯಿದು, ತಾಪಮಾನವು 42-45 ಡಿಗ್ರಿಗಳಷ್ಟಿರುತ್ತದೆ ಎಂದು ಮಾಹಿತಿ ನೀಡಿದೆ.

ಶುಕ್ರವಾರ ಬಾಗಲಕೋಟೆ, ಬಳ್ಳಾರಿ, ಬಿಜಾಪುರ, ಚಿತ್ರದುರ್ಗ, ಗುಲ್ಬರ್ಗ, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು, ತುಮಕೂರು, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶಾಖದ ಅಲೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಬಿಸಿಗಾಳಿ ಸಮಯದಲ್ಲಿ ಎಚ್ಚರಿಕೆ

ಇನ್ನು ಬಿಸಿಗಾಳಿ ಬೀಸುವ ಸಾಧ್ಯತೆ ಇದ್ದು ಜನ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಹೇಳಿದೆ. ಸಡಿಲವಾದ ಉಡುಪುಗಳನ್ನು ಧರಿಸುವಂತೆ ಮತ್ತು ದೇಹವನ್ನು ತಂಪಾಗಿರಿಸಲು ಹೆಚ್ಚು ನೀರು ಮತ್ತು ಮಜ್ಜಿಗೆ ಸೇವಿಸಲು ಸಲಹೆ ನೀಡಿದೆ. ಮಧ್ಯಾಹ್ನ 12 ರಿಂದ ಸಂಜೆ 4 ರವರೆಗೆ ಹೊರಗೆ ಹೋಗುವುದನ್ನು ತಪ್ಪಿಸಲು ಕೇಳಲಾಗಿದೆ.

ಬಿಸಿಗಾಳಿ ಅಲೆ ಹೆಚ್ಚಾಗಿರುವದರಿಂದ ಶಿಶುಗಳು, ಮಕ್ಕಳು, ವಯೋವೃದ್ಧರು, ಗರ್ಭಿಣಿ ಸ್ತ್ರೀಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವಂತೆ ಮನವಿ ಮಾಡಲಾಗಿದೆ. ಬಿಸಿಲಿನಲ್ಲಿ ಓಡಾಡುವುದನ್ನು ಕಡಿಮೆ ಮಾಡಿ ಆರೋಗ್ಯದ ಬಗ್ಗೆ ಜಾಗೃತೆ ವಹಿಸಲು ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+